ಬೆಂಗಳೂರಿನ ರಸ್ತೆಗುಂಡಿ ವೀಕ್ಷಣೆಗೆ 56' ಇಂಚಿನ ಎದೆಗಾರನಿಗೆ ಆಹ್ವಾನ
ಬೆಂಗಳೂರು, ಜೂನ್ 14: ಬೆಂಗಳೂರಿನ ರಸ್ತೆಗುಂಡಿಗಳ ಸಮಸ್ಯೆ ರಾಷ್ಟ್ರೀಯ ಮಟ್ಟದಲ್ಲಿ ಹೈಟೆಕ್ ಸಿಟಿಯ ಮಾನವನ್ನು ಹಾರಾಜು ಆಹಾಕುತ್ತಿದೆ. ಇದೇ ಸಂದರ್ಭದಲ್ಲಿ ಯೋಗ ದಿನಾಚರಣೆಗೆ ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದಾರೆ. ಮೋದಿಯವರಿಗೆ ಬೆಂಗಳೂರಿಗೂ ಆಗಮಿಸಿ ರಸ್ತೆಗುಂಡಿಗಳನ್ನು ವೀಕ್ಷಿಸಬೇಕೆಂದು ಆಗ್ರಹಿಸಲು ಆಮ್ ಆದ್ಮಿ ಪಾರ್ಟಿಯು ಬೃಹತ್ ಚಳವಳಿ ಹಮ್ಮಿಕೊಂಡಿದೆ.
ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಎಪಿ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ, ''ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ರಸ್ತೆ ಗುಂಡಿಗಳ ದರ್ಶನ ಪಡೆಯಬೇಕೆಂದು ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳವಳಿ ಹಮ್ಮಿಕೊಂಡಿದ್ದೇವೆ. ಜೂನ್ 17ರ ಶುಕ್ರವಾರದಂದು ಪಕ್ಷದ ಕಾರ್ಯಕರ್ತರು ರಸ್ತೆಗುಂಡಿಗಳ ಬಳಿ ವಾಹನ ಸವಾರರೊಂದಿಗೆ ಮಾತನಾಡಿ, ʻಪ್ರಧಾನಿಗಳೇ ಬೆಂಗಳೂರಿನ ರಸ್ತೆ ಗುಂಡಿಗಳ ಸೊಬಗನ್ನು ನೋಡಬನ್ನಿʼ ಎಂದು ಬರೆದಿರುವ ಪೋಸ್ಟ್‌ಕಾರ್ಡ್‌ಗಳನ್ನು ನೀಡಲಿದ್ದಾರೆ. ಇದನ್ನು ವಾಹನ ಸವಾರರು ಪ್ರಧಾನಿಗೆ ಕಳುಹಿಸಲಿದ್ದಾರೆ'' ಎಂದು ತಿಳಿಸಿದರು.
''ಬೆಂಗಳೂರಿನ ರಸ್ತೆಗಳಿಗಾಗಿ ರಾಜ್ಯ ಸರ್ಕಾರದ ಬೊಕ್ಕಸದಿಂದ ಕಳೆದ ಐದು ವರ್ಷಗಳಲ್ಲಿ 20 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೊತ್ತ ಬಿಡುಗಡೆಯಾಗಿದೆ. ಬಿಜೆಪಿಯ ಭ್ರಷ್ಟಾಚಾರದಿಂದಾಗಿ ಆ ಹಣವು ಜನಪ್ರತಿನಿಧಿಗಳ ಜೇಬು ಸೇರಿ, ರಸ್ತೆಗಳ ತುಂಬಾ ಗುಂಡಿಗಳಾಗಿವೆ. ಇದರ ವಿರುದ್ಧ ಆಮ್ ಆದ್ಮಿ ಪಾರ್ಟಿಯು ನಿರಂತರವಾಗಿ ಪ್ರತಿಭಟನೆ, ಅಭಿಯಾನಗಳನ್ನು ಮಾಡಿ, ಸುಮಾರು 70ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದೆ. ಆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ರಸ್ತೆ ಗುಂಡಿಗಳಿಂದ ಅಪಘಾತ ಸಾಮಾನ್ಯವಾಗಿದ್ದು, ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಸೌಜನ್ಯವೂ ಈ ಸರ್ಕಾರಕ್ಕಿಲ್ಲ'' ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದ ನಗರ
ಎಎಪಿಯ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, ''ಬೆಂಗಳೂರು ರಾಜ್ಯ ರಾಜಧಾನಿ ಮಾತ್ರವಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ನಗರವಾಗಿದೆ. ದೇಶದಲ್ಲೇ ಅತಿಹೆಚ್ಚು ತೆರಿಗೆ ಸಂಗ್ರಹವಾಗುವ ಎರಡನೇ ದೊಡ್ಡ ನಗರವಿದು. ಆದರೆ ಡಬಲ್ ಎಂಜಿನ್ ಸರ್ಕಾರವೆಂದು ಕರೆದುಕೊಳ್ಳುವ ಬಿಜೆಪಿ ಸರ್ಕಾರವು ನಗರದ ಹೆಸರನ್ನು ಉದ್ಧಾರ ಮಾಡುವ ಬದಲು ಹಾಳು ಮಾಡುತ್ತಿದೆ. ರಸ್ತೆ ಗುಂಡಿಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಯಲ್ಲಿ ಬಿಜೆಪಿ ತೋರುತ್ತಿರುವ ನಿರ್ಲಕ್ಷ್ಯದಿಂದಾಗಿ ಇಲ್ಲಿರುವ ಬೃಹತ್ ಉದ್ದಿಮೆಗಳು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ'' ಎಂದು ಬೇಸರ ವ್ಯಕ್ತಪಡಿಸಿದರು.

ನೂತನ ರಾಜ್ಯ ಕಚೇರಿ:
ಆಮ್ ಆದ್ಮಿ ಪಾರ್ಟಿಯ ನೂತನ ರಾಜ್ಯ ಪ್ರಧಾನ ಕಚೇರಿಯು ಕುಮಾರ ಪಾರ್ಕ್ ವೆಸ್ಟ್‌ನಲ್ಲಿರುವ ರೈಲ್ವೆ ಪ್ಯಾರಲೆಲ್ ರಸ್ತೆಯಲ್ಲಿ ಸಿದ್ಧವಾಗಿದ್ದು, ಜೂನ್ 16ರ ಗುರುವಾರ ಬೆಳಗ್ಗೆ 11:00 ಗಂಟೆಗೆ ಉದ್ಘಾಟನೆಯಾಗಲಿದೆ. ಪಕ್ಷದ ಕರ್ನಾಟಕ ಉಸ್ತುವಾರಿ ಹಾಗೂ ರಾಷ್ಟ್ರೀಯ ವಕ್ತಾರರಾದ ದಿಲೀಪ್ ಪಾಂಡೆಯವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮೋಹನ್ ದಾಸರಿ ತಿಳಿಸಿದರು.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications