Get Updates
Get notified of breaking news, exclusive insights, and must-see stories!

ಮೊಹಮ್ಮದ್ ನಲಪಾಡ್ ಜಾಮೀನು ತಿರಸ್ಕಾರ : 4 ಕಾರಣಗಳು

ಬೆಂಗಳೂರು, ಮಾರ್ಚ್ 15 : ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಫೆ.17ರಂದು ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಯು.ಬಿ.ಸಿಟಿಯ ಘರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ಫೆ.19ರಂದು ಮೊಹಮ್ಮದ್ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಶರಣಾಗಿದ್ದ.

ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ. ಮೊಹಮ್ಮದ್ ನಲಪಾಡ್ ಮತ್ತು ಪ್ರಕರಣದಲ್ಲಿನ ಇತರರ 6 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಮಾ.21ರ ತನಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 63ನೇ ಸೆಷನ್ಸ್ನ ನ್ಯಾಯಾಲಯ ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಲಾಗಿತ್ತು. ಆದರೆ, ಮಾರ್ಚ್ 14ರಂದು ಹೈಕೋರ್ಟ್ ಸಹ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರವಾಗಲು ಕಾರಣಗಳು ಇಲ್ಲಿವೆ...

ಶ್ಯಾಮ್ ಸುಂದರ್ ಹೇಳಿದ್ದೇನು?

ಶ್ಯಾಮ್ ಸುಂದರ್ ಹೇಳಿದ್ದೇನು?

ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಅವರ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಮ್ ಸುಂದರ್ ಅವರು ಜಾಮೀನು ಅರ್ಜಿ ತಿರಸ್ಕಾರವಾಗಲು ಕಾರಣವೇನು? ಎಂದು ವಿವರಣೆ ನೀಡಿದ್ದಾರೆ. ಜಾಮೀನು ನೀಡಿದಲ್ಲಿ ಆರೋಪಿ ಸಾಕ್ಷಿಗಳನ್ನು ನಾಶ ಮಾಡಬಹುದು ಎಂಬ ಅಂಶವನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿ ಅರ್ಜಿಯನ್ನು ತಿರಸ್ಕಾರ ಮಾಡಿದೆ.

ಭಯಾನಕವಾಗಿ ಹಲ್ಲೆ ಮಾಡಲಾಗಿದೆ

ಭಯಾನಕವಾಗಿ ಹಲ್ಲೆ ಮಾಡಲಾಗಿದೆ

ವಿದ್ವತ್ ಮೇಲೆ ಹಲ್ಲೆ ನಡೆದಾಗ ಅಲ್ಲಿ ಮೊಹಮ್ಮದ್ ನಲಪಾಡ್ ಇರಲಿಲ್ಲ. 10-15 ಜನರು ಹೊಡೆದಿದ್ದಾರೆ ಎಂದು ಎಫ್‌ಐಆರ್‌ನಲ್ಲಿದೆ ಎಂದು ಆರೋಪಿ ಪರ ವಕೀಲರು ವಾದ ಮಾಡಿದ್ದಾರೆ.

ಆದರೆ, ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದರೆ ವಿದ್ವತ್ ಮೇಲೆ ಭಯಾನಕವಾಗಿ ಹಲ್ಲೆ ನಡೆಸಲಾಗಿದೆ ಎಂಬುದು ನ್ಯಾಯಮೂರ್ತಿಗಳ ಗಮನಕ್ಕೆ ಬಂದಿದೆ. ಆದ್ದರಿಂದ, ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಲಾಗಿದೆ.

ಘೋರ ಪ್ರಕರಣವಾಗಿದೆ

ಘೋರ ಪ್ರಕರಣವಾಗಿದೆ

ವಿದ್ವತ್ ಮೇಲೆ ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿ ಎಲ್ಲರೂ ನೋಡುತ್ತಿದ್ದರೆ ಹೊರತು ಯಾರೂ ಸಹ ವಿದ್ವತ್ ಸಹಾಯಕ್ಕೆ ಬಂದಿಲ್ಲ. ನಲಪಾಡ್ ತೋರಿದ ದರ್ಪದಿಂದಾಗಿ ಭಯಗೊಂಡು ಯಾರೊಬ್ಬರು ಸಹಾಯಕಕ್ಕೆ ಬಂದಿಲ್ಲ. ಇದೊಂದು ಘೋರ ಪ್ರಕರಣವಾಗಿದೆ.

ಎಫ್‌ಐಆರ್ ದಾಖಲು ಮಾಡಲು ವಿಳಂಬ

ಎಫ್‌ಐಆರ್ ದಾಖಲು ಮಾಡಲು ವಿಳಂಬ

ಫೆ.17ರಂದು ಘಟನೆ ನಡೆದಿದೆ ರಾತ್ರಿ 11.45ರ ಸುಮಾರಿಗೆ ದೂರು ದಾಖಲಾಗಿದೆ. ಆದರೆ, ಮುಂಜಾನೆ 3.30ರ ತನಕ ಎಫ್‌ಐಆರ್ ದಾಖಲು ಮಾಡಿಲ್ಲ. ಆರೋಪಿ ತನ್ನ ಪ್ರಭಾವ ಬಳಸಿ ಎಫ್‌ಐಆರ್ ದಾಖಲು ಆಗದಂತೆ ವಿಳಂಬ ಮಾಡಿದ್ದಾರೆ. ವಿಳಂಬ ಆಗುವುದಕ್ಕೆ ಕಾರಣವೇನು? ಎಂದು ಪೊಲೀಸರು ಸ ಕಾರಣ ಕೊಟ್ಟಿಲ್ಲ.ಇದನ್ನು ನ್ಯಾಯಾಲಯ ಗಮನಿಸಿದೆ.

ಪ್ರಕರಣ ಮುಚ್ಚಿ ಹಾಕಲು ಯತ್ನ

ಪ್ರಕರಣ ಮುಚ್ಚಿ ಹಾಕಲು ಯತ್ನ

ಈ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆದಿದೆ. ಮಲ್ಯ ಆಸ್ಪತ್ರೆಯ ವೈದ್ಯರಾದ ಡಾ.ಆನಂದ್ ಅವರು ಡಿಸ್‌ ಚಾರ್ಜ್ ವರದಿಯನ್ನು ಅಪಾದಿತರಿಗೆ ಅನುಕೂಲವಾಗುವಂತೆ ಸೃಷ್ಟಿಸಿದ್ದಾರೆ. ಒಂದು ವೇಳೆ ಜಾಮೀನು ಮಂಜೂರು ಮಾಡಿದರೆ ಆರೋಪಿ ಸಾಕ್ಷಿಯನ್ನು ನಾಶಪಡಿಸುವ ಸಾಧ್ಯತೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+