ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೊಹಮ್ಮದ್ ನಲಪಾಡ್‌ಗೆ ತಾತ್ಕಾಲಿಕ ನೆಮ್ಮದಿ : ತನಿಖೆಗೆ ಹೈಕೋರ್ಟ್‌ ತಡೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16 : ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರ ಪೀಠ ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್‌ ವಿರುದ್ಧ ನಡೆಯುತ್ತಿದ್ದ ಸಿಸಿಬಿ ತನಿಖೆಗೆ ಮಧ್ಯಂತರ ತಡೆ ನೀಡಿದೆ. ಸಿಸಿಬಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ವಿದ್ವತ್ ಮೇಲೆ ಹಲ್ಲೆ ಪ್ರಕರಣ : ಸಿಸಿಬಿ ಪೊಲೀಸರಿಂದ 600 ಪುಟಗಳ ಚಾರ್ಜ್‌ಶೀಟ್ವಿದ್ವತ್ ಮೇಲೆ ಹಲ್ಲೆ ಪ್ರಕರಣ : ಸಿಸಿಬಿ ಪೊಲೀಸರಿಂದ 600 ಪುಟಗಳ ಚಾರ್ಜ್‌ಶೀಟ್

ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಮೊಹಮ್ಮದ್ ನಲಪಾಡ್‌ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಮೊಹಮ್ಮದ್ ನಲಪಾಡ್‌ ಹೈಕೋರ್ಟ್ ಮೊರೆ ಹೋಗಿದ್ದರು.

ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣ : ವಿದ್ವತ್‌ಗೆ ಬೆದರಿಕೆ ಕರೆಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣ : ವಿದ್ವತ್‌ಗೆ ಬೆದರಿಕೆ ಕರೆ

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತನಿಖೆಗೆ ಮತ್ತು ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಸಿಬಿ ಪೊಲೀಸರಿಗೆ ವಿವರಣೆ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ಹೈಕೋರ್ಟ್‌ಗೆ ಮೊಹಮ್ಮದ್ ನಲಪಾಡ್ ಮಾಡಿರುವ ಮನವಿ ಏನು?ಹೈಕೋರ್ಟ್‌ಗೆ ಮೊಹಮ್ಮದ್ ನಲಪಾಡ್ ಮಾಡಿರುವ ಮನವಿ ಏನು?

ಸಿಸಿಬಿ ಠಾಣೆಗೆ ಮಾನ್ಯತೆ ಇಲ್ಲ

ಸಿಸಿಬಿ ಠಾಣೆಗೆ ಮಾನ್ಯತೆ ಇಲ್ಲ

ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಮೊಹಮ್ಮದ್ ನಲಪಾಡ್‌ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯಕ್ಕೆ 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸಿಸಿಬಿ ಠಾಣೆಗೆ ಮಾನ್ಯತೆ ಇಲ್ಲ ಮೊಹಮ್ಮದ್ ನಲಪಾಡ್‌ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತನಿಖೆ ಮತ್ತು ಅಧೀನ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸಿಸಿಬಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.

ವಿದ್ವತ್ ಮೇಲಿನ ಹಲ್ಲೆ ಪ್ರಕರಣ

ವಿದ್ವತ್ ಮೇಲಿನ ಹಲ್ಲೆ ಪ್ರಕರಣ

ಮೊಹಮ್ಮದ್ ನಲಪಾಡ್‌ ಮತ್ತು ಆತನ ಸ್ನೇಹಿತರು 2018ರ ಫೆ.17ರಂದು ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ಮೊದಲು ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ಬಳಿಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿತ್ತು. ಸಿಸಿಬಿ ಪೊಲೀಸರು ಚಾರ್ಜ್‌ ಶೀಟ್ ಸಲ್ಲಿಸಿದ್ದರು.

ಮೊಹಮ್ಮದ್ ನಲಪಾಡ್‌ ಮೊದಲ ಆರೋಪಿ

ಮೊಹಮ್ಮದ್ ನಲಪಾಡ್‌ ಮೊದಲ ಆರೋಪಿ

ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಶಾಂತಿನಗರ ಕ್ಷೇತ್ರದ ಶಾಸಕ ಎನ್‌.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಅವರು ಮೊದಲ ಆರೋಪಿಯಾಗಿದ್ದಾರೆ. ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕಷ್ಣ, ಅಭಿಷೇಕ್, ನಾಸೀರ್ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ವಿದ್ವತ್‌ಗೆ ಬೆದರಿಕೆ

ವಿದ್ವತ್‌ಗೆ ಬೆದರಿಕೆ

ನವೆಂಬರ್‌ನಲ್ಲಿ ವಿದ್ವತ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್‌ ವಿರುದ್ಧ ನೀಡಿರುವ ದೂರು ವಾಪಸ್ ಪಡೆದುಕೊಂಡು ರಾಜಿ ಮಾಡಿಕೊಳ್ಳುವಂತೆ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಶ್ರೀಕೃಷ್ಣ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ನೀಡಿದ್ದರು. ಸಿಸಿಬಿ ಪೊಲೀಸರು ಸಂಜಯ ನಗರ ಠಾಣೆ ಪೊಲೀಸರಿಗೆ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದರು.

English summary
In relief to Mohammed Nalapad Karnataka High Court ordered the interim stay for CCB probe against him. Vidvat Loganathan attacked by MLA N.A.Haris son Mohammed Nalapad and his friends in U.B.City on February 17, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X