ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಲಪಾಡ್‌ಗೆ ತಪ್ಪದ ಸಂಕಷ್ಟ, ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ

By Manjunatha
|
Google Oneindia Kannada News

ಬೆಂಗಳೂರು, ಏಪ್ರಿಲ್ 28: ವಿದ್ವತ್‌ ಮೇಲೆ ತೀವ್ರ ಹಲ್ಲೆ ನಡೆಸಿರುವ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮೇ 11ರವರೆಗೆ ವಿಸ್ತರಿಸಿದೆ.

ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ನಲಪಾಡ್‌ ಪ್ರಕರಣದ ವಿಚಾರಣೆ ನಡೆಯಿತು. ಪ್ರಕರಣ ನಡೆದು 60 ದಿನಗಳಾದರೂ ಇನ್ನೂ ಪೊಲೀಸರು (ಜಾರ್ಜ್ ಶೀಟ್) ದೋಷಾರೋಪ ಪಟ್ಟಿ ಸಲ್ಲಿಸದಿರುವ ಕಾರಣ ನಲಪಾಡ್‌ಗೆ 167 (2) ಕಲಂ ಅಡಿಯಲ್ಲಿ ಕಡ್ಡಾಯವಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

ನಲಪಾಡ್ ಪ್ರಕರಣ: ಸಚಿವ ಎಚ್‌.ಸಿ.ಮಹದೇವಪ್ಪ ಪುತ್ರನ ವಿಚಾರಣೆನಲಪಾಡ್ ಪ್ರಕರಣ: ಸಚಿವ ಎಚ್‌.ಸಿ.ಮಹದೇವಪ್ಪ ಪುತ್ರನ ವಿಚಾರಣೆ

ಇದಕ್ಕೆ ಪ್ರತಿವಾದಿಸಿದ ವಕೀಲರು ದೋಷಾರೋಪ ಪಟ್ಟಿ ಸಲ್ಲಿಸಲು 90 ದಿನಗಳ ವರೆಗೆ ಕಾಲಾವಕಾಶ ಇದೆ. ಅಲ್ಲದೆ ಇದೊಂದು ಗಂಭೀರ ಪ್ರಕರಣವಾಗಿದ್ದು ತನಿಖಾಧಿಕಾರಿಗಳಿಗೆ ಇನ್ನಷ್ಟು ಕಾಲಾವಕಾಶದ ಅವಶ್ಯಕತೆ ಇರುವ ಕಾರಣ ದೋಷಾರೋಪ ಪಟ್ಟಿ ಸಲ್ಲಿಸಲಾಗಿಲ್ಲ ಎಂದು ವಾದಿಸಿದರು.

Mohammed Nalapad judicial custody expansion till May 11

ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರು ವಿದ್ವತ್‌ ಮೇಲೆ ಫರ್ಜಿ ಕೆಫೆಯಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಎರಡು ತಿಂಗಳಿನಿಂದಲೂ ನ್ಯಾಯಾಂಗ ಬಂಧನದಲ್ಲಿಯೇ ಇದ್ದಾರೆ. ಇಲ್ಲಿಯವರೆಗೆ ಸುಮಾರು 10 ಬಾರಿ ಅವರ ಜಾಮೀನು ಅರ್ಜಿ ನಿರಾಕರಿಸಲ್ಪಟ್ಟಿದೆ.

English summary
MLA NA Harris son Mohammed Nalapad's judicial custody period expansion till 11th of May. Nalapad has been accused of attempt to murder (IPC 307) of Vidwath in Farji cafe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X