ನಲಪಾಡ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಬೆಂಗಳೂರು, ಮಾರ್ಚ್ 07 : ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ. ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಬುಧವಾರ ನಡೆಯಲಿದೆ.

ಬುಧವಾರ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನವ ಅವಧಿಯನ್ನು ಮಾರ್ಚ್ 21ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಎಲ್ಲಾ ಆರೋಪಿಗಳು ಕೋರ್ಟ್‌ ಮುಂದೆ ಹಾಜರಾಗಿದ್ದರು.

ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್, ಇತರ 6 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಇಂದು ಎಲ್ಲರನ್ನು ಕೋರ್ಟ್‌ ಮುಂದೆ ಹಾಜರುಪಡಿಸಲಾಗಿತ್ತು.

Mohammed Nalapad judicial custody extended

ಮಾರ್ಚ್ 21ರ ತನಕ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇದರಿಂದಾಗಿ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.

ಜಾಮೀನು ಅರ್ಜಿ ವಿಚಾರಣೆ : ಬೆಂಗಳೂರಿನ 63ನೇ ಸೆಷನ್ಸ್ ನ್ಯಾಯಾಲಯ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ನಲಪಾಡ್ ಪರ ವಕೀಲರು ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+