ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು, ಮಾರ್ಚ್ 21 : ಮೊಹಮ್ಮದ್ ನಲಪಾಡ್‌ಗೆ ಜೈಲು ವಾಸ ತಪ್ಪಿದ್ದಲ್ಲ. ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನದ ಅವಧಿಯನ್ನು ಏ.4ರ ತನಕ ವಿಸ್ತರಣೆ ಮಾಡಲಾಗಿದೆ.
ಬುಧವಾರ ಮೊಹಮ್ಮದ್ ನಲಪಾಡ್ ಮತ್ತು ಇತರ 6 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಆರೋಪಿಗಳು ಕೋರ್ಟ್ ಮುಂದೆ ಹಾಜರಾದರು.
ಅರ್ಜಿಯ ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟ್ ಏಪ್ರಿಲ್ 4ರ ತನಕ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವ ಅವಧಿಯನ್ನು ವಿಸ್ತರಣೆ ಮಾಡಿತು. ಇದರಿಂದಾಗಿ ಮೊಹಮ್ಮದ್ ನಲಪಾಡ್‌ಗೆ ಜೈಲುವಾಸ ತಪ್ಪಿದ್ದಲ್ಲ.

ಫೆ.17ರಂದು ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಯು.ಬಿ.ಸಿಟಿಯ ಘರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ಮಾಡಿದ್ದರು. ನಲಪಾಡ್ ಮತ್ತು ಆತನ ಸ್ನೇಹಿತರ ವಿರುದ್ಧ ಕೊಲೆ ಯತ್ನದ ಪ್ರಕರಣದ ದಾಖಲಾಗಿದೆ. ಫೆ.19ರಂದು ಮೊಹಮ್ಮದ್ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಶರಣಾಗಿದ್ದ.
ಮೂರು ದಿನಗಳ ಪೊಲೀಸ್ ಕಷ್ಟಡಿ ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎರಡು ಬಾರಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ.
ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 63ನೇ ಸೆಷನ್ಸ್ ನ್ಯಾಯಾಲಯ ಮತ್ತು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸುವ ತನಕ ನಲಪಾಡ್‌ಗೆ ಜಾಮೀನು ಸಿಗುವ ಸಾಧ್ಯತೆ ಕಡಿಮೆ.












Click it and Unblock the Notifications