ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಮೊಹಮ್ಮದ್ ನಲಪಾಡ್‌

ಬೆಂಗಳೂರು, ಫೆಬ್ರವರಿ 20 : ಮೊಹಮ್ಮದ್ ನಲಪಾಡ್‌ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮೊಹಮ್ಮದ್ ನಲಪಾಡ್‌ ಪೊಲೀಸ್ ಕಸ್ಟಡಿ ಫೆ.21ರಂದು ಅಂತ್ಯಗೊಳ್ಳಲಿದೆ.

ಮಂಗಳವಾರ ಮೊಹಮ್ಮದ್ ನಲಪಾಡ್‌ ಸೆಷನ್ಸ್ ನ್ಯಾಯಾಲಯಕ್ಕೆ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಪೊಲೀಸರು 307 ಪ್ರಕರಣ ದಾಖಲು ಮಾಡಿರುವ ಬಗ್ಗೆ ಪ್ರಶ್ನಿಸಿದ್ದಾರೆ.

ರಾಜಕೀಯ ಪ್ರೇರಿತವಾಗಿ ಕೊಲೆ ಯತ್ನ ಪ್ರಕರಣ ದಾಖಲು ಮಾಡಲಾಗಿದೆ. ವಿದ್ವತ್ ನಾನು ಹಲ್ಲೆ ಮಾಡಿದ್ದೇನೆ ಎಂದು ಹೇಳಿಕೆ ಕೊಟ್ಟಿಲ್ಲ. ಆದ್ದರಿಂದ, ಜಾಮೀನು ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Mohammed Nalapad moves court for bail

ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಮೊಹಮ್ಮದ್ ನಲಪಾಡ್‌ನನ್ನು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ. ಫೆ.21ರ ಬುಧವಾರ ಪೊಲೀಸ್ ಕಸ್ಟಡಿ ಅಂತ್ಯಗೊಳ್ಳಲಿದ್ದು, ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ.

ಸದ್ಯ, ಮೊಹಮ್ಮದ್ ನಲಪಾಡ್‌ ಕಬ್ಬನ್ ಪಾರ್ಕ್ ಪೊಲೀಸರ ವಶದಲ್ಲಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಯು.ಬಿ.ಸಿಟಿಯ ಬಾರ್‌ನಲ್ಲಿ ಶನಿವಾರ ರಾತ್ರಿ ವಿದ್ವತ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್‌ ಮೊದಲ ಆರೋಪಿ. ಮೊಹಮ್ಮದ್ ನಲಪಾಡ್‌ ವಿರುದ್ಧ 307 (ಕೊಲೆ ಯತ್ನ) ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+