ಬೆಂಗಳೂರಿನ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಹಣ ಕಳವು
ಬೆಂಗಳೂರು, ಜನವರಿ 27: ಬೆಂಗಳೂರಿನ ಮೈಸೂರು ರಸ್ತೆ ಸ್ಯಾಟಲೈಟ್ ಸಮೀಪವಿರುವ ಪ್ರಸಿದ್ಧ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಹಣ ಕಳವಾಗಿದೆ.
ದೇವಾಲಯದ ಲಾಕರ್ ಒಡೆದು ಹಣ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಟಾರಾಯನಪುರ ಮೈಸೂರು ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನ ಐತಿಹಾಸಿಕ ಪ್ರಸಿದ್ಧ ದೇವಸ್ಥಾನ.
ಕಳ್ಳತನವಾದ ಹಣವು ಧನುರ್ಮಾಸದ ಪ್ರಯುಕ್ತ ಇರುಮುಡಿಯಿಂದ ಬಂದ ಹಣ ಎಂದು ದೇವಾಲಯದ ಟ್ರಸ್ಟಿಗಳು ತಿಳಿಸಿದ್ದಾರೆ. ಟ್ರಸ್ಟಿಗಳು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಕಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಆದರೆ, ನಿನ್ನೆ ರಾತ್ರಿ ದೇವಾಲಯದ ಗೋಡೆಯ ಮೇಲಿಂದ ಒಳ ನುಗ್ಗಿರುವ ಕಳ್ಳರು ಲಾಕರ್ ಮುರಿದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. 48 ಸಾವಿರ ರೂ. ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ ಎಂದು ಆರೋಪಿಸಿ ದೇವಸ್ಥಾನ ಟ್ರಸ್ಟಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.












Click it and Unblock the Notifications