ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗನ ಕಾಯಿಲೆ: ರಾಜ್ಯಸರ್ಕಾರ, ಅರಣ್ಯ ಇಲಾಖೆಗೆ ಹೈಕೋರ್ಟ್ ನೋಟಿಸ್

|
Google Oneindia Kannada News

ಬೆಂಗಳೂರು, ಫೆಬ್ರವರಿ 21: ರಾಜ್ಯದ ಮಲೆನಾಡು ಹಾಗೂ ಕರಾವಳಿಯಲ್ಲಿ ವಿಪರೀತವಾಗಿದೆ ಆದರೆ ತಡೆಗೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮಂಗನ ಕಾಯಿಲೆ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.

ಮಲೆನಾಡಲ್ಲಿ ಮಂಗನ ಕಾಯಿಲೆ ಸವಾಲು: 43 ಮಂದಿಯಲ್ಲಿ ಸೋಂಕಿನ ಶಂಕೆ ಮಲೆನಾಡಲ್ಲಿ ಮಂಗನ ಕಾಯಿಲೆ ಸವಾಲು: 43 ಮಂದಿಯಲ್ಲಿ ಸೋಂಕಿನ ಶಂಕೆ

ಶಿವಮೊಗ್ಗದ ವಕೀಲರಾದ ಕೆ.ಪಿ.ಶ್ರೀಪಾಲ್‌ ಮತ್ತು ಎನ್‌.ಜಿ.ರಮೇಶಪ್ಪ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬುಧವಾರ ಹಂಗಾಮಿ ಸಿಜೆ ಎಲ್‌.ನಾರಾಯಣಸ್ವಾಮಿ ಮತ್ತು ನ್ಯಾ.ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು.

Monkey fever, HC give notice to State government

ಅಲ್ಲದೆ, ರೋಗ ಹರಡುತ್ತಿರುವ ಜಿಲ್ಲಾ ಕೇಂದ್ರಗಳಲ್ಲಿ ಹೆಚ್ಚಿನ ರೋಗ ಪತ್ತೆ ಕೇಂದ್ರಗಳನ್ನು ಸ್ಥಾಪಿಸಬೇಕು ಮತ್ತು ಕಾಯಿಲೆಗೆ ತುತ್ತಾಗಿರುವ ರೋಗಿಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಸಂಚಾರಿ ಕಾರ‍್ಯಪಡೆಗಳನ್ನು ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಮಂಗನ ಕಾಯಿಲೆಯ ಮಾಹಿತಿ ವಿನಿಮಯಕ್ಕೆ ವಾಟ್ಸಪ್ ಗ್ರೂಪ್ ಮಂಗನ ಕಾಯಿಲೆಯ ಮಾಹಿತಿ ವಿನಿಮಯಕ್ಕೆ ವಾಟ್ಸಪ್ ಗ್ರೂಪ್

ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಪೀಠ ಉಡುಪಿ, ಶಿವಮೊಗ್ಗ ಜಿಲ್ಲಾಧಿಕಾರಿಗಳು ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿತು.

English summary
The Karnataka High Court has issued a notice to the state government to provide medical facilities to treat people suffering from Kyasanur Forest Disease (KFD) in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X