ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂಗಾರು ಮಳೆ: ಬಿಬಿಎಂಪಿ ಅಧಿಕಾರಿಗಳನ್ನು ಎಚ್ಚರಗೊಳಿಸಿದ ಆಯುಕ್ತ ತುಷಾರ್ ಗಿರಿನಾಥ್

|
Google Oneindia Kannada News

ಬೆಂಗಳೂರು, ಮೇ 7: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ತುಷಾರ್ ಗಿರಿನಾಥ್, ಮುಂಗಾರು ಮಳೆಯ ಪೂರ್ವ ತಯಾರಿಗೆ ಒತ್ತು ನೀಡಿದ್ದಾರೆ. ಈ ಸಂಬಂಧ ಬಿಬಿಎಂಪಿಯ ಎಲ್ಲ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ.

ತುಷಾರ್ ಗಿರಿನಾಥ್ ವೆಲ್ಕಂ ಟು ಸಮಸ್ಯೆಗಳ ಆಗರ ಬಿಬಿಎಂಪಿತುಷಾರ್ ಗಿರಿನಾಥ್ ವೆಲ್ಕಂ ಟು ಸಮಸ್ಯೆಗಳ ಆಗರ ಬಿಬಿಎಂಪಿ

ನಿಯಂತ್ರಣ ಕೊಠಡಿ ಸಕ್ರಿಯವಾಗಿರಬೇಕು

ನಿಯಂತ್ರಣ ಕೊಠಡಿ ಸಕ್ರಿಯವಾಗಿರಬೇಕು

ಪಾಲಿಕೆಯ ಎಲ್ಲಾ ಹಿರಿಯ ಅಧಿಕಾರಿಗಳ ಜೊತೆ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲದ ವೇಳೆ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ವಿಪತ್ತು ನಿರ್ವಹಣೆ ವೇಳೆ ಆಯಾ ವಲಯಗಳಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯಪ್ರೌವೃತ್ತರಾಗಿ ಕಾರ್ಯನಿರ್ವಹಿಸಬೇಕು. ಸ್ಥಳೀಯ ನಾಗರೀಕರಿಗೆ ಎಲ್ಲಾ ಅಧಿಕಾರಿಗಳು ಸಿಗಬೇಕು ಎಂದು ತಿಳಿಸಿದರು.

ಪಾಲಿಕೆಯ 8 ವಲಯಗಳು ಹಾಗೂ ಕೇಂದ್ರ ಕಛೇರಿ ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳು ಚುರುಕಾಗಿ ಕೆಲಸ ಮಾಡಬೇಕು. ಮಳೆ ಗಾಲದ ವೇಳೆ ತಾತ್ಕಾಲಿಕವಾಗಿ ಸ್ಥಾಪಿಸುವ 63 ನಿಯಂತ್ರಣ ಕೊಠಡಿಗಳನ್ನು ತ್ವರಿತವಾಗಿ ಪ್ರಾರಂಭಿಸಿ ಅಗತ್ಯ ಸಿಬ್ಬಂದಿ ನಿಯೋಜನೆ ಹಾಗೂ ಯಂತ್ರೋಪಕರಣಗಳನ್ನು ವ್ಯವಸ್ಥೆ ಮಾಡಿಕೊಂಡು ಸಾರ್ವಜನಿಕರಿಂದ ದೂರುಗಳು ಬಂದ ಕೂಡಲೆ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಸ್ಕಾಂ, ಜಲಮಂಡಳಿ ಜೊತೆ ಸಮನ್ವಯತೆ

ಬೆಸ್ಕಾಂ, ಜಲಮಂಡಳಿ ಜೊತೆ ಸಮನ್ವಯತೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಪಾಲಿಕೆ, ಬೆಸ್ಕಾಂ, ಜಲಮಂಡಳಿ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿ ಕೂಡಲೆ ನಾಗರಿಕರಿಗೆ ಸ್ಪಂದಿಸಬೇಕು ಎಂದು ತುಷಾರ್ ಗಿರಿನಾಥ್ ರವರು ತಿಳಿಸಿದರು.

ನಗರದಲ್ಲಿ ಮಳೆಯಿಂದಾಗಿ ತೊಂದರೆಗೆ ಒಳಪಡುವ ಅತಿ ಸೂಕ್ಷ ಪ್ರದೇಶಗಳನ್ನು ಗುರುತಿಸುವುದು ಹಾಗೂ ರಾಜಕಾಲುವೆಯಲ್ಲಿ ಹೂಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ರಸ್ತೆ ಬದಿಯ ಚರಂಡಿಗಳು ಹಾಗೂ ಶೋಲ್ಡರ್ ಡ್ರೈನ್ ಗಳನ್ನು ಸ್ವಚ್ಛಗೊಳಿಸಬೇಕು. ಮಳೆಗಾಲದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಸುರಕ್ಷಾ ಪರಿಕರಣಗಳನ್ನು ಒದಗಿಸಬೇಕು. ಮಳೆಗಾಲದಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆದಾರರ ಮೇಲೆ ಸಮರ್ಪಕವಾಗಿ ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು. ಇರುವ ವ್ಯವಸ್ಥೆಯನ್ನು ಸರಿಪಡಿಸಬೇಕೊಂಡು ವ್ಯವಸ್ಥಿತವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ಪರಿಶೀಲನಾ ಸಭೆ:

ಕೋವಿಡ್ ಪರಿಶೀಲನಾ ಸಭೆ:

"ನಗರದಲ್ಲಿ ಕೋವಿಡ್ ಪ್ರಕರಗಳು ನಿಯಂತ್ರಣದಲ್ಲಿದ್ದು, ಕೋವಿಡ್ ಪ್ರಕರಣಗಳು ಹೆಚ್ಚಿರುವ ಪ್ರದೇಶದ ಮೇಲೆ ಹೆಚ್ಚು ನಿಗಾವಹಿಸಿ ಕೋವಿಡ್ ಪ್ರಕರಣಗಳು ಹೆಚ್ಚಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರ ಹೊರಡಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಸೋಂಕಿನ‌ ಪ್ರಮಾಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯಕ್ಕನುಗುಣವಾಗಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿ," ಎಂದು ತುಷಾರ್ ಗಿರಿನಾಥ್ ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಪ್ರತಿಕ್ರಿಯಿಸಿ, "ನಗರದಲ್ಲಿ ಶೇ. 1.6 ರಷ್ಟು ಪಾಸಿಟಿವಿಟಿ ರೇಟ್ ಇದೆ. ನೆರೆ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ. ಅದರಂತೆ ನಿನ್ನೆ 10,000 ಕೋವಿಡ್ ಪರೀಕ್ಷೆ ಮಾಡಲಾಗಿದೆ. ಅಲ್ಲದೆ ಪ್ರಮುಖ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷಾ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಸಂಘ-ಸಂಸ್ಥೆಗಳ ಜೊತೆ ಸಭೆ ನಡೆಸಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ನಗರದಲ್ಲಿ ಕೋವಿಡ್ ಸೋಂಕು ಹೆಚ್ಚಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ," ಎಂದು ಮಾಹಿತಿ ನೀಡಿದರು.

ಕಛೇರಿಗಳಿಗೆ ಭೇಟಿ ನೀಡಿ ಪರಿಶೀಲನೆ

ಕಛೇರಿಗಳಿಗೆ ಭೇಟಿ ನೀಡಿ ಪರಿಶೀಲನೆ

ಪಾಲಿಕೆ ಕೇಂದ್ರ ಕಛೇರಿಯ ಆವರಣದ ಅನೆಕ್ಸ್ - 01 ಕಟ್ಟಡದಲ್ಲಿರುವ ಎಲ್ಲಾ ಕಛೇರಿಗಳಿಗೆ ಮುಖ್ಯ ಆಯುಕ್ತರು ಭೇಟಿ ನೀಡಿ, ಪಾಲಿಕೆಯ ಕಾರ್ಯವೈಖರಿ, ಸಿಬ್ಬಂದಿಗಳು ಕಾರ್ಯನಿರ್ವಹಿಸುವುದನ್ನು ವೀಕ್ಷಿಸಿದರು. ಇದೇ ವೇಳೆ ಸಾರ್ವಜನಿಕ ಅಹವಾಲುಗಳನ್ನು ಆಲಿಸಿದರು.

ಸಭೆಯಲ್ಲಿ ಎಲ್ಲಾ ವಲಯ ಆಯುಕ್ತರುಗಳು, ವಲಯ ಜಂಟಿ ಆಯುಕ್ತರುಗಳು, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ಎಲ್ಲಾ ವಲಯ ಮುಖ್ಯ ಇಂಜಿನಿಯರ್ ಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Recommended Video

Rohit Sharma ಗೆದ್ದ ನಂತರ ಹೇಳಿದ್ದೇನು | Oneindia Kannada

English summary
Tushar Girinath, who has taken over as the chief commissioner of BBMP, has emphasized the pre-monsoon rains. He has held a review meeting with all senior officials
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X