ರಾಜ್ಯಕ್ಕೆ ಮುಂಗಾರು ಆಗಮನ: 10 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'
ಬೆಂಗಳೂರು, ಮೇ 30: ಜೂನ್ 2ರೊಳಗೆ ಕರ್ನಾಟಕದ ಕೆಲವು ಭಾಗಗಳಿಗೆ ನೈರುತ್ಯ ಮಾನ್ಸೂನ್ ಅಪ್ಪಳಿಸಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
Recommended Video
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಶೀಘ್ರದಲ್ಲೇ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಹವಾಮಾನ ವರದಿಯ ಪ್ರಕಾರ, ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ 7 ಮಿ. ಮೀ. ವರೆಗಿನ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನ ಹವಾಮಾನ; ಭಾನುವಾರ ನಗರದಲ್ಲಿ ಗರಿಷ್ಠ ತಾಪಮಾನ 30.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಎರಡು ಮೂರು ದಿನಗಳವರೆಗೆ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗಬಹುದು ಎಂದು ಹೇಳಿದೆ. ಜೂನ್ 3-4 ರವರೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ ಎಂದು ತಿಳಿಸಿದೆ.
ಮೇ ಮಳೆಗೆ ತತ್ತರಿಸಿದ್ದ ರಾಜಧಾನಿ; ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ನಾಗರೀಕರ ಮೇಲೆ ಸಾಕಷ್ಟು ಪರಿಣಾಮ ಬೀರಿತ್ತು. ಏಕಾಏಕಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿತ್ತು, ರಾಜಕಾಲುವೆ, ಚರಂಡಿಗಳ ಸಮರ್ಪಕ ನಿರ್ವಹಣೆ ಕೊರತೆಯಿಂದ ರಸ್ತೆಗಳು, ಮನೆಗಳು ಜಲಾವೃತಗೊಂಡಿದ್ದವು.
ಮೇ 17 ರಂದು ಸುರಿದ ಮಳೆ ಬೆಂಗಳೂರು ನಗರದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿತ್ತು. ನಗರದ ಹಲವಾರು ಭಾಗಗಳು 3-4 ಅಡಿಗಳಷ್ಟು ನೀರಿನಿಂದ ಜಲಾವೃತಗೊಂಡಿದ್ದವು. ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ 12 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 114 ಮಿ. ಮೀ.ಗಿಂತ ಹೆಚ್ಚು ಮಳೆಯಾಗಿದೆ ಎಂದು ಹೇಳಿತ್ತು.

ಮೇ ತಿಂಗಳಲ್ಲಿ ಉತ್ತರ ಭಾರತ ಬಿಸಿಲು, ಬಿಸಿಗಾಳಿಗೆ ತತ್ತರಿಸುತ್ತಿದ್ದರೆ, ಅಸನಿ ಚಂಡಮಾರುತ ಪ್ರಭಾವದಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ನಗರವು ಮೋಡ ಕವಿದ ವಾತಾವರಣ, ತುಂತುರು ಮಳೆಯಾಗಿದ್ದ ಕಾರಣ ಬೆಂಗಳೂರಿನಲ್ಲಿ 22 ವರ್ಷಗಳಲ್ಲಿ ಮೇ ತಿಂಗಳಲ್ಲಿ ಅತ್ಯಂತ ತಂಪಾದ ದಿನವನ್ನು ದಾಖಲಿಸಿತ್ತು. ಗರಿಷ್ಠ ತಾಪಮಾನವು 24.3 ಡಿಗ್ರಿ ಸೆಲ್ಸಿಯಸ್‌ಗೆ ಕಡಿಮೆಯಾಗಿತ್ತು. ಇದು ಸಾಮಾನ್ಯಕ್ಕಿಂತ 9 ಡಿಗ್ರಿ ಸೆಲ್ಸಿಯಸ್ ಕಡಿಮೆ ಎಂದು ಹೇಳಲಾಗಿತ್ತು.












Click it and Unblock the Notifications