ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು-ಬೆಂಗಳೂರು ರೈಲಿನಲ್ಲಿ ಮಹಿಳೆಯರಿಗೆ 4 ಪ್ರತ್ಯೇಕ ಬೋಗಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 31 : ಬೆಂಗಳೂರು-ಮೈಸೂರು ನಡುವೆ ಸಂಚಾರ ನಡೆಸುವ ಮೂರು ರೈಲುಗಳಲ್ಲಿ ಮಹಿಳೆಯರಿಗಾಗಿ 4 ಪ್ರತ್ಯೇಕ ಬೋಗಿಗಳನ್ನು ಮೀಸಲಾಗಿಡಲಾಗಿದೆ. ಮೈಸೂರು-ಬೆಂಗಳೂರು ನಡುವೆ ಸಂಚಾರ ನಡೆಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಈ ಕುರಿತು ಮಾಹಿತಿ ನೀಡಿದೆ. ಉಭಯ ನಗರಗಳ ನಡುವೆ ಸಂಚಾರ ನಡೆಸುವ ಮೂರು ರೈಲುಗಳಲ್ಲಿ ಈಗಿರುವ ಪ್ರತ್ಯೇಕ ಮಹಿಳಾ ಬೋಗಿಯ ಜೊತೆ ಇನ್ನೂ 4 ಬೋಗಿ ಮಹಿಳೆಯರಿಗೆ ನೀಡಲಾಗುತ್ತದೆ ಎಂದು ಹೇಳಿದೆ.

ಬೆಂಗಳೂರು -ಮೈಸೂರು ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ಬೆಂಗಳೂರು -ಮೈಸೂರು ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್

ಚಾಮುಂಡಿ ಎಕ್ಸ್‌ಪ್ರೆಸ್ (16215/216) ರೈಲಿನಲ್ಲಿ 2 ಬೋಗಿ, ವಿಶ್ವಮಾನವ ಎಕ್ಸ್‌ಪ್ರೆಸ್ (17326/325) ಮತ್ತು ಟಿಪ್ಪು ಎಕ್ಸ್‌ಪ್ರೆಸ್‌ (12613/614) ರೈಲುಗಳಲ್ಲಿ ತಲಾ 1 ಬೋಗಿಗಳನ್ನು ಮಹಿಳೆಯರಿಗಾಗಿ ಮೀಸಲಾಗಿಡಲಾಗಿದೆ.

ಬೆಂಗಳೂರು-ಮೈಸೂರು ಮೆಮು ರೈಲು ಸಂಚಾರಕ್ಕಿದ್ದ ಅಡೆತಡೆ ನಿವಾರಣೆಬೆಂಗಳೂರು-ಮೈಸೂರು ಮೆಮು ರೈಲು ಸಂಚಾರಕ್ಕಿದ್ದ ಅಡೆತಡೆ ನಿವಾರಣೆ

More coaches for women on Mysuru-Bengaluru train

ನೈಋತ್ಯ ರೈಲ್ವೆಯ ಆಯುಕ್ತರು ಕೆಲವು ದಿನಗಳ ಹಿಂದೆ ಪ್ರಯಾಣಿಕರನ್ನು ಭೇಟಿ ಮಾಡಿದಾಗ ಹೆಚ್ಚುವರಿ ಮಹಿಳಾ ಬೋಗಿ ನೀಡಬೇಕು ಎಂದು ಬೇಡಿಕೆ ಮುಂದಿಡಲಾಗಿತ್ತು. ಆದ್ದರಿಂದ, ಬೋಗಿಗಳ ಸಂಖ್ಯೆ ಹೆಚ್ಚಿಸಲಾಗಿದೆ.

ನೈಋತ್ಯ ರೈಲ್ವೆ: 116 ರೈಲುಗಳ ಪರಿಷ್ಕೃತ ವೇಳಾಪಟ್ಟಿ ಸಿದ್ಧನೈಋತ್ಯ ರೈಲ್ವೆ: 116 ರೈಲುಗಳ ಪರಿಷ್ಕೃತ ವೇಳಾಪಟ್ಟಿ ಸಿದ್ಧ

ಬೆಂಗಳೂರು-ಮೈಸೂರು ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರು ನಗರದ ಸುತ್ತಮುತ್ತಲಿನ ಗಾರ್ಮೆಂಟ್ಸ್ ಫ್ಯಾಕ್ಟರಿಗಳಲ್ಲಿ ಕೆಲಸಕ್ಕೆ ಹೋಗುವ ಅನೇಕ ಮಹಿಳೆಯರು ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ.

English summary
South Western Railway Mysuru division has introduced exclusive coaches for women on Mysuru-Bengaluru train. Three trains have been equipped with four coaches for women passengers only.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X