Bengaluru Traffic Rules Violation: ಬೆಂಗಳೂರಿನ ಒಂದೇ ಠಾಣೆಯಲ್ಲಿ 1.02 ಲಕ್ಷ ಸಂಚಾರ ನಿಮಯ ಉಲ್ಲಂಘನೆ ಕೇಸ್!
ಬೆಂಗಳೂರು ಮೇ 28: ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ನಗರದಲ್ಲಿ ಕೃತಕ ಬುದ್ದಿಮತ್ತೆ(ಎ.ಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಆಧುನಿಕ ಕ್ಯಾಮೆರಾ ಅಳವಡಿಸಲಾಗಿದೆ. ಈ ಕ್ಯಾಮೆರಾಗಳು ಕ್ಲಿಕ್ಕಿಸುವ ಫೋಟೋಗಳನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಾರೆ.
ಹೀಗೆ ಅಳವಡಿಸಿದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸದಾಶಿವನಗರ ಸಂಚಾರ ಠಾಣೆ ವ್ಯಾಪ್ತಿಯ ಸಂಚಾರ ನಿಯಮ ಉಲ್ಲಂಘಟನೆಗೆ ಸಂಬಂಧಪಟ್ಟಂತೆ 1.02 ಲಕ್ಷ ಪ್ರಕರಣಗಳು ದಾಖಲಾಗಿವೆ. ಇದೊಂದೇ ಠಾಣೆಯ ವ್ಯಾಪ್ತಿಯಲ್ಲಿ 2024ರ ಜನವರಿಯಿಂದ ಮೇ 27ರವರೆಗೆ 1.02 ಲಕ್ಷ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಹೆಚ್ಚಳ ಇದಕ್ಕೆ ಕಾರಣ. ಇವುಗಳ ಜೊತೆಗೆ ಸಂಚಾರ ನಿಯಮಗಳ ಉಲ್ಲಂಘನೆ ಪ್ರಮಾಣಗಳು ಹೆಚ್ಚಾಗುತ್ತಿವೆ. ಅಲ್ಲದೆ ಅಪಘಾತಗಳು, ಹೆಲ್ಮೆಟ್ ಧರಿಸದೇ ಸವಾರಿ, ಅತೀ ವೇಗದಲ್ಲಿ ಚಾಲನೆ ಹೀಗೆ ಹಲವು ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸರು ಹೇಳುತ್ತಾರೆ.
ಪೊಲೀಸ್ ಸಿಬ್ಬಂದಿಯ ಕೊರತೆಯಿಂದಾಗಿ ಪ್ರತಿಯೊಂದು ವಾಹನಗಳ ಮೇಲೆ ಕಣ್ಣೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ನೂತನ ತಂತ್ರಜ್ಞಾನದ ಕ್ಯಾಮೆರಾಗಳಿಂದ ಸಂಚಾರ ನಿಯಮಗಳ ಉಲ್ಲಂಘನೆ ಪತ್ತೆ ಹಚ್ಚುವುದು ಸುಲಭವಾಗಿದೆ. ವಾಹನಗಳ ನೋಂದಣಿ ಸಂಖ್ಯೆ ಹಾಗೂ ಗುರುತು ಸಹ ಪತ್ತೆ ಹಚ್ಚುದುವು ಸುಲಭವಾಗಿದೆ. ಇದನ್ನು ಆಧರಿಸಿ ವಾಹನಗಳ ವಿರುದ್ಧ ದೂರು ದಾಖಲಿಸಲಾಗುತ್ತಿದೆ. ದಂಡ ಬಾಕಿ ಇರುವ ಜನರ ಮೊಬೈಲ್ ಹಾಗೂ ಮನೆಗಳಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ಟ್ರಾಫಿಕ್ ಪೊಲೀಸರು ಹ್ಯಾಂಡ್‌ಹೆಲ್ಡ್ ಫೀಲ್ಡ್ ಟ್ರಾಫಿಕ್ ಉಲ್ಲಂಘನೆ ವರದಿ (ಎಫ್‌ಟಿವಿಆರ್) ಸಾಧನಗಳನ್ನು ಬಳಸುತ್ತಿದ್ದಾರೆ, ಇದು ಇತರ ಟ್ರಾಫಿಕ್ ಉಲ್ಲಂಘನೆಗಳ ನಡುವೆ ವೇಗವಾಗಿ, ಫುಟ್‌ಪಾತ್ ಪಾರ್ಕಿಂಗ್ ಮತ್ತು ರಾಂಗ್ ಸೈಡ್ ಡ್ರೈವಿಂಗ್ ಅನ್ನು ದಾಖಲಿಸಲು ಅನುವು ಮಾಡಿಕೊಡುತ್ತದೆ.

ರಾಜಧಾನಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮೇಲೆ ಕಣ್ಗಾವಲು ಇಡಲು ಅಳವಡಿಸಿರುವ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ (ITMS) ಕ್ಯಾಮೆರಾಗಳ ಕಣ್ತಪ್ಪಿನಿಂದ ವಾಹನ ಸವಾರರಿಗೆ ದಂಡದ ಬರೆ ಬೀಳುತ್ತಿದೆ.
ನಗರದಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಡಿಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ಮುಖ್ಯವಾಗಿ ವೇಗ ಮಿತಿ ಉಲ್ಲಂಘನೆ, ಟ್ರಾಫಿಕ್ ಸಿಗ್ನಲ್ ನಿಯಮ ಉಲ್ಲಂಘನೆ, ಹೆಲ್ಮೆಟ್ ಧರಿಸದಿರುವುದು, ದ್ವಿಚಕ್ರ ವಾಹನದಲ್ಲಿ ನಿಯಮಬಾಹಿರವಾಗಿ 3 ಮಂದಿಯ ಸವಾರಿ, ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆ, ಸೀಟ್ ಬೆಲ್ಟ... ಧರಿಸದೆ ವಾಹನ ಚಲಾಯಿಸುವುದು, ಲೇನ್ ನಿಯಮ ಪಾಲಿಸದಿರುವುದು, ದೋಷಪೂರಿತ ನೋಂದಣಿ ಫಲಕದಂತಹ ಪ್ರಕರಣಗಳ ಮೇಲೆ ನಿಗಾ ವಹಿಸಿವೆ.
ಈ ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘಿಘಿಸುವ ವಾಹನಗಳ ಫೋಟೊ ಸೆರೆ ಹಿಡಿದು ವಾಹನದ ನೋಂದಣಿ ಸಂಖ್ಯೆ ಸಮೇತ ಸಂಚಾರ ನಿರ್ವಹಣಾ ಕೇಂದ್ರಕ್ಕೆ (ಟಿಎಂಸಿ) ಮಾಹಿತಿ ರವಾನಿಸುತ್ತಿವೆ. ಈ ಮಾಹಿತಿ ಆಧಾರದಲ್ಲಿಐಟಿಎಂಎಸ್ ಮೂಲಕ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ನೋಟಿಸ್ ಸಿದ್ಧಪಡಿಸಿ ದಂಡ ವಿಧಿಸಲಾಗುತ್ತಿದೆ. ಬಳಿಕ ಸಂಬಂಧಪಟ್ಟ ವಾಹನ ಸವಾರರಿಗೆ ಎಸ್‌ಎಂಎಸ್ ಮೂಲಕ ನೋಟಿಸ್‌ನ ಚಲನ್ ಕಳುಹಿಸಲಾಗುತ್ತಿದೆ.
ಪೊಲೀಸ್ ಸಿಬ್ಬಂದಿಯು ಪಾನಮತ್ತ ಚಾಲನೆ, ಏಕಮುಖ ಸಂಚಾರದ ರಸ್ತೆಯಲ್ಲಿವಿರುದ್ಧ ದಿಕ್ಕಿನಲ್ಲಿವಾಹನ ಚಾಲನೆ, ಪಾದಚಾರಿ ಮಾರ್ಗದಲ್ಲಿ ವಾಹನ ಚಾಲನೆ, ವೀಲಿಂಗ್ ಪ್ರಕರಣಗಳನ್ನು ಮಾತ್ರ ಪರಿಶೀಲಿಸಿ ದೂರು ದಾಖಲಿಸುತ್ತಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಹೋಲಿಸಿದರೆ ಕ್ಯಾಮೆರಾಗಳ ಮಾಹಿತಿ ಆಧರಿಸಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. 2023ರಲ್ಲಿ ಪೊಲೀಸ್ ಸಿಬ್ಬಂದಿಯು 2.52 ಲಕ್ಷ ಪ್ರಕರಣ ದಾಖಲಿಸಿದ್ದಾರೆ. ಕ್ಯಾಮೆರಾಗಳ ಮಾಹಿತಿ ಆಧರಿಸಿ 87.47 ಲಕ್ಷ ಪ್ರಕರಣಗಳನ್ನು ದಾಖಲಿಸಲಾಗಿದೆ.












Click it and Unblock the Notifications