BESCOM: ಭಾರೀ ಮಳೆ ಜತೆ ಬೀಸಿದ ಗಾಳಿಗೆ 540ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

ಬೆಂಗಳೂರು, ಮೇ 22: ಭೂಮಿ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿ ಪ್ರಭಾವದಿಂದ ರಾಜ್ಯದಲ್ಲಿ ಮಳೆ ಜೊತೆಗೆ ವ್ಯಾಪಕ ಬಿರುಗಾಳಿ ಸಹಿತ ಬೀಸಿದೆ. ಇದರಿಂದ ಬೆಂಗಳೂರು ಸೇರಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯಲ್ಲಿ ಬರೋಬ್ಬರಿ 500ಕ್ಕೂ ಅಧಿಕ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಅಪಾರ ನಷ್ಟವಾಗಿದೆ.

ಬೆಂಗಳೂರು ನಗರ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳಿಂದಲೂ ಬಿರುಗಾಳಿ ಸಹಿತ ಧಾರಾಕಾರವಾಗಿ ಮಳೆ ಅಬ್ಬರಿಸಿದೆ. ಇದರಿಂದ ಮರಗಳು, ಮರದ ಕೊಂಬೆಗಳಂತೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಹೀಗೆ ಬಿದ್ದ ಕಂಬಗಳಲ್ಲಿ ಸುಮಾರು 140ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿವೆ. ಸುಮಾರು 20 ಟ್ರಾನ್ಸ್‌ಫಾರ್ಮಾರ್‌ಗಳು ಸುಟ್ಟು ಕರಕಲಾಗಿವೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.

Bangalore Electric Supply Company

ಮಳೆ, ಬಿರುಗಾಳಿಯಿಂದಾದ ಈ ಅವಘಡಗಳಿಂದ ಬೆಸ್ಕಾಂ ವ್ಯಾಪ್ತಿಯಲ ಹಲವು ಕಡೆಗಳಲ್ಲಿ ವಿದ್ಯುತ್ ಕಡಿತ ಸಮಸ್ಯೆ ಉಂಟಾಗಿದೆ. ಜನರು ಮಳೆ ಜೊತೆಗೆ ವಿದ್ಯುತ್ ವ್ಯತ್ಯಯ ಸಮಸ್ಯೆ ಸಹ ಎದುರಿಸುವಂತಾಗಿದೆ. ಈ ಕುರಿತು ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬ ದುರಸ್ತಿ ಮತ್ತು ಹೊಸ ಟ್ರಾನ್ಸ್‌ಫಾರ್ಮರ್ ಅವಳವಡಿಕೆ ಕಾರ್ಯ ನಡೆಯುತ್ತಿದೆ. ಆದ ಪ್ರಮಾದದಿಂದ ಎಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗುತ್ತಿದೆ.

ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ಎಲ್ಲೆಲ್ಲಿ ಕಂಬಗಳು ಬಿದ್ದಿವೆ ಅಲ್ಲೆಲ್ಲ ಬೆಸ್ಕಾಂ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ. ಕಳೆದ 24 ಗಂಟೆಗಳಿಂದ ನಿರಂತರ ಕೆಲಸದಲ್ಲಿ ತೊಡಗಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುರಿದ ಕಂಬಗಳು ಮತ್ತು ಸುಟ್ಟ ಟ್ರಾನ್ಸ್‌ಫಾರ್ಮಾರ್‌ಗಳನ್ನು ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆ. ಕೆಲವೆಡೆ ಮರಗಳು, ಮರದ ಕೊಂಬೆಗಳು ವಿದ್ಯುತ್ ತಂತಿ ಮೇಲೆ ಬಿದ್ದಿವೆ. ಅವುಗಳನ್ನು ಸಹ ತೆರವು ಮಾಡಿ ದುರಸ್ತಿ ಕಾರ್ಯ ಮಾಡಲಾಗುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

Bangalore Electric Supply Company

ವಿದ್ಯುತ್ ಕಡಿತ: ಶೀಘ್ರವೇ ಪೂರೈಕೆಯ ಭರವಸೆ

ಬೆಂಗಳೂರು ನಗರದ ಶಿವಾಜಿನಗರ, ಇಂದಿರಾನಗರ, ಕೆಂಗೇರಿ, ಆರ್. ಆರ್. ನಗರ, ಪೀಣ್ಯ ಸೇರಿದಂತೆ ಮತ್ತಿತ್ತರ ಪ್ರದೇಶಗಳಲ್ಲಿ, ಬೆಸ್ಕಾಂನ ಗ್ರಾಮಾಂತರ ವ್ಯಾಪ್ತಿಯ ತುಮಕೂರು, ಮಾಲೂರು, ಸರ್ಜಾಪುರ, ಚಂದಾಪುರ, ಶೀಡ್ಲಘಟ್ಟ, ಕೆಜಿಎಫ್, ಹಿರಿಯೂರು, ಚಿಂತಾಮಣಿ, ತಿಪಟೂರು, ರಾಮನಗರ ಸೇರಿದಂತೆ ಮತ್ತಿತರ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಈ ಭಾಗದಲ್ಲಿ ಬಿದ್ದ ವಿದ್ಯುತ್ ಕಂಬಗಳ ಮರುಸ್ಥಾಪನೆ ಕಾರ್ಯ ನಡೆಯುತ್ತಿದೆ. ಶೀಘ್ರವೆ ಎಂದಿನಂತೆ ವಿದ್ಯುತ್ ಪೂರೈಕೆ ಆಗಲಿದೆ ಎಂದು ಬೆಸ್ಕಾಂ ಭರವಸೆ ನೀಡಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾನುವಾರ ಸುರಿದ ಮಳೆಗೆ ಹತ್ತಾರು ಕಡೆಗಳಲ್ಲಿ ಬೃಹತ್ ಮರಗಳು ಧರೆಗುರುಳಿವೆ. ರಸ್ತೆ ಮೇಲೆಲ್ಲ ಮರದ ಎಲೆಗಳು, ಸಣ್ಣ ಸಣ್ಣ ಕೊಂಬೆಗಳು ಬಿದ್ದಿರುವುದು ಸಾಮಾನ್ಯವಾಗಿತ್ತು. ಕೆಲವೆಡೆ ಮನೆ ಮುಂದೆ ನಿಲ್ಲಿಸಿರುವ ವಾಹನಗಳು ಮರ ಬಿದ್ದ ಪರಿಣಾಮ ಜಖಂಗೊಂಡಿವೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+