ಬೆಂಗಳೂರಿನಲ್ಲಿ ಈ ಕಾರಣಕ್ಕೆ ಇನ್ಮುಂದೆ ಇನ್ನಷ್ಟು ಟ್ರಾಫಿಕ್‌ ಜಾಮ್‌ !

ಬೆಂಗಳೂರಿನಲ್ಲಿ ಈಗಾಗಲೇ ಟ್ರಾಫಿಕ್‌ ಜಾಮ್‌ ಮಿತಿ ಮೀರಿದೆ. ಪೀಕ್‌ ಅವರ್‌ಗಳಲ್ಲಿ ಮಾತ್ರವಲ್ಲ ಉಳಿದ ಟೇಮ್‌ನಲ್ಲೂ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್‌ ಜಾಮ್‌ ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಇನ್ನಷ್ಟು ಟ್ರಾಫಿಕ್‌ ಜಾಮ್‌ ಹೆಚ್ಚಳವಾಗುವ ಆತಂಕ ಎದುರಾಗಿದೆ. ಹೌದು ಬೆಂಗಳೂರಿನಲ್ಲಿ ಟ್ರಾಫಿಕ್‌ ಜಾಮ್‌ನಲ್ಲಿ ಜನ ತಾಸು ಗಟ್ಟಲೆ ಕಾಯುತ್ತಿದ್ದಾರೆ. ಇನ್ಮುಂದೆ ಬೆಂಗಳೂರಿನಲ್ಲಿ ಇನ್ನಷ್ಟು ಟ್ರಾಫಿಕ್‌ ಜಾಮ್‌ ಆಗುವ ಸಾಧ್ಯತೆ ದಟ್ಟವಾಗಿದೆ. ಯಾವ ಕಾರಣಕ್ಕೆ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಳವಾಗಲಿದೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್‌ ದೇಶದಲ್ಲೇ ಹೆಚ್ಚಿದೆ. ವಿಶ್ವದ ಪ್ರಮುಖ ನಗರಗಳಲ್ಲಿ ಟ್ರಾಫಿಕ್‌ ಜಾಮ್‌ ಆಗುವ ನಗರಗಳಲ್ಲಿ ಬೆಂಗಳೂರು ಸಹ ಸೇರಿದೆ. ದಿನದಿಂದ ದಿನಕ್ಕೆ ರಸ್ತೆಗೆ ಇಳಿಯುವ ವಾಹನಗಳ ಸಂಖ್ಯೆ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಇನ್ನಷ್ಟು ಟ್ರಾಫಿಕ್‌ ಜಾಮ್‌ ಆಗುವ ಸಾಧ್ಯತೆ ಇದೆ. ಇದಕ್ಕೆ ಮುಖ್ಯ ಕಾರಣ ಸಮೂಹ ಸಾರಿಗೆಗಳ ಬೆಲೆ ಏರಿಕೆ. ಕೆಲವೇ ದಿನಗಳ ಮುಂಚೆಯಷ್ಟೇ ಬಸ್‌ ರೇಟ್‌ ಜಾಸ್ತಿ ಮಾಡಲಾಗಿತ್ತು. ಇದೀಗ ಮೆಟ್ರೋ ಪ್ರಯಾಣ ದರವನ್ನು ಜಾಸ್ತಿ ಮಾಡಲಾಗಿದೆ. ಇದರಿಂದ ಬೆಂಗಳೂರಿನಲ್ಲಿ ಟ್ರಾಫಿಕ್‌ ಜಾಮ್‌ ಜಾಸ್ತಿ ಆಗಲಿದೆ ಅಂತ ಹೇಳಲಾಗುತ್ತಿದೆ. ಅದು ಹೇಗೆ ಎನ್ನುವ ವಿವರ ಇಲ್ಲಿದೆ.

More Traffic Jams in Bengaluru Due to This Reason

ನಗರದಲ್ಲಿ ಟ್ರಾಫಿಕ್‌ ಜಾಮ್‌ ಮಿತಿ ಮೀರಿದೆ. ಮೊದಲೆಲ್ಲ ಪೀಕ್‌ ಅವರ್‌ನಲ್ಲಿ ಮಾತ್ರ ಟ್ರಾಫಿಕ್‌ ಜಾಮ್‌ ಆಗುತ್ತಿತ್ತು. ಇದೀಗ ಎಲ್ಲಾ ಸಮಯದಲ್ಲೂ ಟ್ರಾಫಿಕ್‌ ಜಾಮ್‌ ಇದೆ. ಇದೀಗ ಬಸ್‌ ಹಾಗೂ ಮೆಟ್ರೋದ ಪ್ರಯಾಣ ದರವನ್ನು ಹೆಚ್ಚಳ ಮಾಡಿರುವುದರಿಂದ ಜನ ಹೆಚ್ಚು ಸ್ವಂತ ವಾಹನ ಹಾಗೂ ಬೈಕ್‌ಗಳನ್ನೇ ಬಳಸುವ ಸಾಧ್ಯತೆ ಹೆಚ್ಚಾಗಿದೆ.

ಯಾಕೆಂದರೆ ಮೆಟ್ರೋದ ಬೆಲೆಗಿಂತ ವಾಹನದಲ್ಲಿ ಹೋಗುವುದು ಅಥವಾ ನಾಲ್ಕು ಜನ ಕ್ಯಾಬ್‌ ಮಾಡಿಕೊಂಡು ಹೋಗುವುದರಿಂದ ಕಡಿಮೆ ಖರ್ಚು ಆಗಲಿದೆ ಎಂದು ಜನ ಅಭಿಪ್ರಾಯಪಡುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಪಬ್ಲಿಕ್‌ ಟ್ರಾನ್ಸ್‌ಪೋರ್ಟ್‌ ಬಳಸುವವರ ಸಂಖ್ಯೆ ಕಡಿಮೆಯಾಗಿ ಸ್ವಂತ ವಾಹನ ಬಳಸುವವರ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಬೆಂಗಳೂರು ಟ್ರಾಫಿಕ್‌ ಜಾಮ್‌ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದು ಹೇಳಲಾಗುತ್ತಿದೆ.

ಸಂಸದ ಪಿ.ಸಿ ಮೋಹನ್‌ ಟ್ವೀಟ್: ಬಿಎಂಆರ್‌ಸಿಎಲ್ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಳ ಮಾಡಿರುವುದಕ್ಕೆ ಸಂಸದ ಪಿ.ಸಿ ಮೋಹನ್‌ ಅವರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಪ್ರಯಾಣ ದರ ಏರಿಕೆಯು ಬೆಂಗಳೂರಿನ ಪ್ರಯಾಣಿಕರ ಮೇಲೆ ಅನ್ಯಾಯದ ಹೊರೆಯಾಗಿದೆ. ಇದರಿಂದ ಹಲವರು ಖಾಸಗಿ ವಾಹನಗಳನ್ನು ಬಳಸುವ ಸಾಧ್ಯತೆ ಇದೆ.

ಪರೋಕ್ಷವಾಗಿ ಬೆಂಗಳೂರು ಟ್ರಾಫಿಕ್‌ ಜಾಮ್‌ ಹೆಚ್ಚಳ ಆಗಲಿದೆ. ಈ ಬೆಲೆ ಏರಿಕೆಯನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ. ಸಾರ್ವಜನಿಕ ಸಾರಿಗೆ ಕಡಿಮೆ ಬೆಲೆಯಲ್ಲಿ ಇರಬೇಕು. ಇನ್ನು ಬಿಎಂಆರ್‌ಸಿಎಲ್ ಪಾರದರ್ಶಕತೆ ಕಾಪಾಡಿಕೊಳ್ಳಬೇಕು. ಶುಲ್ಕ ನಿಗದಿ ಸಮಿತಿ ವರದಿಯನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೆಟ್ರೋ ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ ಬಿಎಂಆರ್‌ಸಿಎಲ್ ಮಾಸಿಕ, ತ್ರೈಮಾಸಿಕ ಹಾಗೂ ವಾರ್ಷಿಕ ಪಾಸ್‌ಗಳನ್ನು ಪರಿಚಯಿಸಬೇಕು. ಇದು ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುತ್ತದೆ. ರಿಯಾಯಿತಿ ಪರಿಚಯಿಸಬೇಕು. ಬಿಎಂಆರ್‌ಸಿಎಲ್ ನಾಗರಿಕರ ಅಗತ್ಯಗಳಿಗೆ ಆದ್ಯತೆ ನೀಡಬೇಕು. ಎಲ್ಲರೂ ಮೆಟ್ರೋ ಸೇವೆ ಬಳಸುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+