ಯಶವಂತಪುರ-ತುಮಕೂರು ನಡುವೆ ಓಡಲಿವೆ ಹೆಚ್ಚುವರಿ ರೈಲು

ಬೆಂಗಳೂರು, ಅಕ್ಟೋಬರ್ 22; ವಿದ್ಯುದೀಕರಣಗೊಂಡಿರುವ ಬೆಂಗಳೂರಿನ ಯಶವಂತಪುರ ಮತ್ತು ತುಮಕೂರು ನಡುವಿನ ರೈಲು ಮಾರ್ಗ ರೈಲ್ವೆ ಸುರಕ್ಷತಾ ಆಯುಕ್ತರ ಪರಿಶೀಲನೆಗೆ ಸಿದ್ಧವಾಗಿದೆ. ಪರಿಶೀಲನೆ ಪೂರ್ಣಗೊಂಡ ಬಳಿಕ ಯಶವಂತಪುರ- ತುಮಕೂರು ನಡುವೆ ಹೆಚ್ಚುವರಿ ರೈಲುಗಳು ಸಂಚಾರ ನಡೆಸಲಿವೆ.

ಯಶವಂತಪುರ-ತುಮಕೂರು ನಡುವಿನ 69.47 ಕಿ. ಮೀ. ವಿದ್ಯುದೀಕರಣಗೊಂಡಿರುವ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು ಶೀಘ್ರದಲ್ಲೇ ಪರಿಶೀಲನೆ ನಡೆಸಲಿದ್ದಾರೆ. ನೈಋತ್ಯ ರೈಲ್ವೆ ಇದಕ್ಕೆ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಕೆ ಮಾಡಿದೆ.

ನೈಋತ್ಯ ರೈಲ್ವೆ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡ ಬಳಿಕ ಕಳೆದ ತಿಂಗಳಿನಿಂದ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರವನ್ನು ನಡೆಸಿದೆ. ಬಳಿಕ ರೈಲ್ವೆ ಸುರಕ್ಷತಾ ಆಯುಕ್ತರಿಗೆ ಸಿಆರ್‌ಎಸ್ ಪರಿಶೀಲನೆಗಾಗಿ ಅಗತ್ಯ ದಾಖಲೆಗಳ ಜೊತೆಗೆ ಆಹ್ವಾನ ನೀಡಲಾಗಿದೆ.

More Train To Run Between Yeshwantpur Tumakuru Rail Line

ನೈಋತ್ಯ ರೈಲ್ವೆ ಮುಖ್ಯ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ಈ ಕುರಿತು ಮಾಹಿತಿ ನೀಡಿದ್ದಾರೆ, "ನಾವು ಸಿಆರ್‌ಎಸ್ ಪರಿಶೀಲನೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಕೆ ಮಾಡಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ" ಎಂದು ಹೇಳಿದ್ದಾರೆ.

ಯಶವಂತಪುರ-ತುಮಕೂರು ಮಾರ್ಗದಲ್ಲಿನ ತುಮಕೂರು-ಹಿರೇಹಳ್ಳಿ ಮಾರ್ಗದ ಸಿಆರ್‌ಎಸ್ ಪರಿಶೀಲನೆ ಈಗಾಗಲೇ ಪೂರ್ಣಗೊಂಡಿದೆ. ಕೆಲವು ಬದಲಾವಣೆಗಳನ್ನು ಸೂಚಿಸಿದ್ದು, ಅವುಗಳನ್ನು ಪೂರ್ಣಗೊಳಿಸಲಾಗಿದೆ.

ಓಡಲಿದೆ ಹೆಚ್ಚುವರಿ ರೈಲು; ನವೆಂಬರ್ ತಿಂಗಳಿನಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರ ಪರಿಶೀಲನೆ ಪೂರ್ಣಗೊಳ್ಳಬಹುದು ಎಂಬ ವಿಶ್ವಾಸದಲ್ಲಿ ಅಧಿಕಾರಿಗಳು ಇದ್ದಾರೆ. ಪರಿಶೀಲನೆ ಪೂರ್ಣಗೊಂಡು ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ನೀಡಿದರೆ ಬೆಂಗಳೂರು-ತುಮಕೂರು ನಡುವಿನ ರೈಲು ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಮಾರ್ಗದಲ್ಲಿ ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ಸಿಕ್ಕಿದರೆ ನೈಋತ್ಯ ರೈಲ್ವೆ ಈ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳನ್ನು ಓಡಿಸಲಿದೆ. ಅದರಲ್ಲಿಯೂ ಮೆಮು ರೈಲುಗಳನ್ನು ಓಡಿಸಲಾಗುತ್ತದೆ. ಆಗ ಪ್ರತಿದಿನ ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರಿಗೆ ಸಹಾಯಕವಾಗಲಿದೆ.

ಇನ್ನು ಕಾಯಬೇಕಿದೆ; ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿಯ ಗಡುವು ವಿಸ್ತರಣೆಯಾಗಿದೆ. ಇನ್ನು ಆರು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಗುರಿ ಹೊಂದಲಾಗಿದೆ.

ಯಲಹಂಕ-ದೇವನಹಳ್ಳಿ-ಚಿಕ್ಕಬಳ್ಳಾಪುರ ರೈಲು ಮಾರ್ಗದ ವಿದ್ಯುದೀಕರಣ ಯೋಜನೆಯಲ್ಲಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಸೇರಿದೆ. ಈ ಯೋಜನೆಯ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಳ್ಳುವ ಗುಡುವು 6 ತಿಂಗಳು ಮುಂದೂಡಲಾಗಿದೆ.

ಚಿಕ್ಕಬಣಾವರ-ಹುಬ್ಬಳ್ಳಿ ನಡುವಿನ ಮಾರ್ಗದ ವಿದ್ಯುದೀಕರಣದ ಭಾಗವಾಗಿ ಬೆಂಗಳೂರು-ತುಮಕೂರು ನಡುವಿನ ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ಪ್ರಾಯೋಗಿಕ ಸಂಚಾರ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಎಲೆಕ್ಟ್ರಿಕ್ ಲೋಕೋಮೋಟಿವ್ ಮೂಲಕ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗಿದೆ.

ಒಟ್ಟು 856.76 ಕೋಟಿ ಅನುದಾನದಲ್ಲಿ ಚಿಕ್ಕಬಣಾವರ-ಹುಬ್ಬಳ್ಳಿ ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿ ನಡೆಯುತ್ತಿದೆ. ರೈಲ್ವೆ ವಿಕಾಸ ನಿಗಮ ಸೇರಿದಂತೆ ವಿವಿಧ ಸಂಸ್ಥೆಗಳು ವಿದ್ಯುದೀಕರಣ ಕಾಮಗಾರಿಯನ್ನು ಕೈಗೊಂಡಿವೆ.

2022ರ ಮಾರ್ಚ್ ವೇಳೆಗೆ ಬೀರೂರು-ಚಿಕ್ಕಜಾಜೂರು, ತುಮಕೂರು-ಕರಡಿ ಸೆಕ್ಷನ್ ವಿದ್ಯುದೀಕರಣ ಪೂರ್ಣಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಚಿಕ್ಕಜಾಜೂರು-ಹುಬ್ಬಳ್ಳಿ ನಡುವಿನ ಕಾಮಗಾರಿ ಇನ್ನೂ ನಡೆಯುತ್ತಿದೆ. 2022ರ ಡಿಸೆಂಬರ್ ವೇಳೆಗೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಹೆಚ್ಚುವರಿ ರೈಲಿನ ಬೇಡಿಕೆ; ತುಮಕೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಓಡಿಸಬೇಕು ಎಂದು ಹಿಂದೆಯೂ ಅನೇಕ ಬಾರಿ ಮನವಿ ಮಾಡಲಾಗಿತ್ತು. ಬೆಳಗ್ಗೆ ಮತ್ತು ಸಂಜೆ ಹೆಚ್ಚು ರೈಲು ಓಡಿಸಬೇಕು ಎಂಬುದು ಬೇಡಿಕೆಯಾಗಿತ್ತು.

ಹೆಚ್ಚುವರಿ ರೈಲು ಓಡಿಸಬೇಕು ಎಂಬ ಬೇಡಿಕೆ ನಮ್ಮ ಗಮನಕ್ಕೂ ಬಂದಿದೆ. ರೈಲ್ವೆ ಸುರಕ್ಷತಾ ಆಯುಕ್ತರ ಪರಿಶೀಲನೆ ಪೂರ್ಣಗೊಂಡ ಬಳಿಕ ಈ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+