ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಬೆಂಗಳೂರಿಗೆ ಬಂತು ಎಚ್‌1ಎನ್‌1: 39 ಪ್ರಕರಣ ಪತ್ತೆ

|
Google Oneindia Kannada News

ಬೆಂಗಳೂರು, ಮಾರ್ಚ್ 01: ನಗರಕ್ಕೆ ಎಚ್‌1ಎನ್‌1 ಮತ್ತೆ ಲಗ್ಗೆ ಇಟ್ಟಿದ್ದು 39 ಪ್ರಕರಣಗಳು ಪತ್ತೆಯಾಗಿವೆ. ಇದೀಗ ಎಲ್ಲರಲ್ಲಿ ಆತಂಕ ಹೆಚ್ಚಾಗಿದೆ.

ಹಾಗಾದರೆ ಈ ರೋಗ ಹೇಗೆ ಬರುತ್ತಿದೆ, ಒಂದು ತಿಂಗಳು ರೋಗದ ಬಗ್ಗೆ ಯಾವುದೇ ಸುಳಿವಿರುವುದಿಲ್ಲ ಏಕಾ ಏಕಿ ರೋಗ ಕಾಣಿಸಿಕೊಳ್ಳಲು ಕಾರಣವೇನು ಎಂಬುದು ಎಲ್ಲರ ಪ್ರಶ್ನೆಯಾಗಿದೆ ಅದೆಲ್ಲಕ್ಕೂ ಉತ್ತರ ಇಲ್ಲಿದೆ.

ಕರ್ನಾಟಕದಲ್ಲಿ ಈ ಬಾರಿ ಡೆಂಗ್ಯೂ ಹಾವಳಿ ನಿಯಂತ್ರಣದಲ್ಲಿ! ಕರ್ನಾಟಕದಲ್ಲಿ ಈ ಬಾರಿ ಡೆಂಗ್ಯೂ ಹಾವಳಿ ನಿಯಂತ್ರಣದಲ್ಲಿ!

2018ರಲ್ಲಿ 64 ಎಚ್‌1ಎನ್‌1 ಪ್ರಕರಣಗಳಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದರು. ನಗರ ಜಿಲ್ಲೆ ವ್ಯಾಪ್ತಿಯಲ್ಲಿ 6 ಡೆಂಗ್ಯೂ ಮತ್ತು 7 ಚಿಕನ್ ಗೂನ್ಯಾ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಪಿ.ಕೆ. ಸುನಂದಾ ತಿಳಿಸಿದ್ದಾರೆ.

Most H1N1 Cases in East Bengaluru

ಎಚ್‌1ಎನ್‌1 ಸೋಂಕು ವಲಸಿಗರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.ಜಿಲ್ಲೆಯ 12 ಸರ್ಕಾರಿ ವೈದ್ಯ ಕಾಲೇಜು, ಖಾಸಗಿ ಕಾಲೇಜುಗಳು ಸೇರಿಒಟ್ಟು 1658 ವೈದ್ಯರಿಗೆ ಡೆಂಗ್ಯೂ, ಚಿಕನ್ ಗೂನ್ಯಾ, ಎಚ್‌1ಎನ್‌1 ಕಾಯಿಲೆ ಕುರಿತು ತರಬೇತಿ ನೀಡಲಾಗಿದೆ. ಜನರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಪೌಷ್ಠಿಕ ಆಹಾರವನ್ನು ಸೇವಿಸಬೇಕು ಎಂದು ತಿಳಿಸಿದರು.

ಬೆಂಗಳೂರಲ್ಲಿ 10 ದಿನಗಳಲ್ಲಿ 23 ಎಚ್‌1ಎನ್‌1 ಪ್ರಕರಣ ಪತ್ತೆ ಬೆಂಗಳೂರಲ್ಲಿ 10 ದಿನಗಳಲ್ಲಿ 23 ಎಚ್‌1ಎನ್‌1 ಪ್ರಕರಣ ಪತ್ತೆ

ನಗರದಲ್ಲಿ ಎಚ್‌1ಎನ್‌1 ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಈ ಕಾಯಿಲೆ ಬಗ್ಗೆ ಅರಿವು ಮೂಡಿಸಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಲ್ಲಿ ಎಚ್‌1ಎನ್‌1 46 ಪ್ರಕರಣ ಪತ್ತೆ: ರಾಜ್ಯಾದ್ಯಂತ ಹೈ ಅಲರ್ಟ್ ಬೆಂಗಳೂರಲ್ಲಿ ಎಚ್‌1ಎನ್‌1 46 ಪ್ರಕರಣ ಪತ್ತೆ: ರಾಜ್ಯಾದ್ಯಂತ ಹೈ ಅಲರ್ಟ್

ಬಡವರು, ಬಿಪಿಎಲ್ ಪಡಿತರ ಹೊಂದಿರುವವರಿಗೆ ಆರೋಗ್ಯ ಸೇವೆಗಳು, ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುತ್ತದೆ. ಮಾ.3,5 ಮತ್ತು 7ರಂದು ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

English summary
Health department officials on Thursday cautioned the public about H1N1 or swine flu cases in the city. According to the data released by the District Health Family Welfare office, 39 cases of swine flu were confirmed in the city as of Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X