ಬೆಂಗಳೂರು : 2 ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

ಬೆಂಗಳೂರು, ಜುಲೈ 02 : ಮೂರನೇ ಮಹಡಿಯಿಂದ ಮಗುವಿನೊಂದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರ್‌.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್.ಟಿ.ನಗರದ ವೈಟ್‌ ಹೌಸ್ ಅಪಾರ್ಟ್‌ಮೆಂಟ್‌ನಿಂದ ಬಿದ್ದು ಭಾವನಾ (29), ದೇವಂತ್ (2) ಮಂಗಳವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಭಾವನಾ ಪತಿ ಹರಿಹಂಥ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾವನಾಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಪತಿಯ ಕಿರುಕುಳದಿಂದ ಬೇಸತ್ತ ಅವರು ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

Mother and daughter commits suicide

ಹರಿಹಂಥ್ ಭಾವನಾಳ ಶೀಲವನ್ನು ಶಂಕಿಸುತ್ತಿದ್ದ. ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ಆಕೆಯನ್ನು ಪದೇ-ಪದೇ ಹೀಯಾಳಿಸಿ ಹಿಂಸೆ ನೀಡುತ್ತಿದ್ದ ಎಂದು ಭಾವನಾ ಸಹೋದರ ಆರೋಪಿಸಿದ್ದು, ಪೊಲೀಸರಿಗೂ ಈ ಕುರಿತು ದೂರು ನೀಡಿದ್ದಾರೆ.

ಆರ್‌.ಟಿ.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+