ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು : 2 ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

|
Google Oneindia Kannada News

ಬೆಂಗಳೂರು, ಜುಲೈ 02 : ಮೂರನೇ ಮಹಡಿಯಿಂದ ಮಗುವಿನೊಂದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರ್‌.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್.ಟಿ.ನಗರದ ವೈಟ್‌ ಹೌಸ್ ಅಪಾರ್ಟ್‌ಮೆಂಟ್‌ನಿಂದ ಬಿದ್ದು ಭಾವನಾ (29), ದೇವಂತ್ (2) ಮಂಗಳವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಮೈಸೂರಿನಲ್ಲಿ ವರದಕ್ಷಿಣೆ ದಾಹಕ್ಕೆ ಮಹಿಳೆ ಬಲಿಮೈಸೂರಿನಲ್ಲಿ ವರದಕ್ಷಿಣೆ ದಾಹಕ್ಕೆ ಮಹಿಳೆ ಬಲಿ

ಭಾವನಾ ಪತಿ ಹರಿಹಂಥ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾವನಾಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಪತಿಯ ಕಿರುಕುಳದಿಂದ ಬೇಸತ್ತ ಅವರು ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಆಸ್ಪತ್ರೆಯ ಶೌಚಾಲಯದಲ್ಲಿ ರೋಗಿ ಆತ್ಮಹತ್ಯೆ, ಏನು ಕಾರಣ?ಬೆಂಗಳೂರಿನ ಆಸ್ಪತ್ರೆಯ ಶೌಚಾಲಯದಲ್ಲಿ ರೋಗಿ ಆತ್ಮಹತ್ಯೆ, ಏನು ಕಾರಣ?

Mother and daughter commits suicide

ಹರಿಹಂಥ್ ಭಾವನಾಳ ಶೀಲವನ್ನು ಶಂಕಿಸುತ್ತಿದ್ದ. ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ಆಕೆಯನ್ನು ಪದೇ-ಪದೇ ಹೀಯಾಳಿಸಿ ಹಿಂಸೆ ನೀಡುತ್ತಿದ್ದ ಎಂದು ಭಾವನಾ ಸಹೋದರ ಆರೋಪಿಸಿದ್ದು, ಪೊಲೀಸರಿಗೂ ಈ ಕುರಿತು ದೂರು ನೀಡಿದ್ದಾರೆ.

ಹೆಂಡತಿಯನ್ನು ಥಳಿಸಿ ಬಳಿಕ 15ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಹೆಂಡತಿಯನ್ನು ಥಳಿಸಿ ಬಳಿಕ 15ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ

ಆರ್‌.ಟಿ.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

English summary
Woman committed suicide along with her 2-year-old daughter in Whitehouse apartments R.T.Nagar, Bengaluru on July 2, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X