ಮಗುವನ್ನು ಮನೆಯಲ್ಲೇ ಕೂಡಿ ಹಾಕಿ ಹಲ್ಲೆ: ತಾಯಿ ಹಾಗೂ ಆಕೆ ಬಾಯ್ಫ್ರೆಂಡ್ ಅರೆಸ್ಟ್
ಬೆಂಗಳೂರು, ಮಾರ್ಚ್ 04: ನಾಲ್ಕು ವರ್ಷದ ಮಗುವನ್ನು ಮನೆಯಲ್ಲೇ ಕೂಡಿ ಹಾಕಿ ಹಲ್ಲೆ ಪ್ರಕರಣ ಸಂಬಂಧ ತಾಯಿ ಹಾಗೂ ಆಕೆಯ ಪ್ರಿಯತಮನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಹತ್ತಿರದ ಡಾ. ಎಂ.ಎಚ್. ಮರೀಗೌಡ ರಸ್ತೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಆರ್. ನಾಗರತ್ನ ಹಾಗೂ ರಾಜೇಶ್ವರಿ ಅವರು ನೀಡಿದ ದೂರಿನ್ವಯ ಗಿರಿನಗರ ಪೊಲೀಸರು ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಸದ್ಯ ಚೈಲ್ಡ್ ವೆಲ್ ಫೇರ್ ಕಮಿಟಿ ಅಧಿಕಾರಿ ನಾಗರತ್ನ ನೀಡಿದ ದೂರಿನ ಮೇರೆಗೆ ತಾಯಿ ಶಾರಿನ್ ಹಾಗೂ ಬಾಯ್ ಫ್ರೆಂಡ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಘಟನೆಯ ಹಿನ್ನೆಲೆ ಏನು..?
ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತಾಯಿಯೊಬ್ಬಳು ತನ್ನ ಮೂರುವರೆ ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿತ್ತು. ಬಾಯ್ ಫ್ರೆಂಡ್ ಜೊತೆ ಸೇರಿ ತಾಯಿ ಶಾರಿನ್ ತನ್ನ 4 ವರ್ಷದ ಮಗುವಿನ ಮೇಲೆ ದಿನನಿತ್ಯ ಹಲ್ಲೆ ಮಾಡುತ್ತಿದ್ದಳು ಎನ್ನಲಾಗಿದೆ. ಮಗುವಿನ ದೇಹದ ಮೇಲೆಲ್ಲಾ ಗಾಯಗಳಾಗಿತ್ತು.
ಶಾರಿನ್ ಆಕೆ ಗಂಡನ ಜೊತೆಗೆ ವಾಸಿಸುತ್ತಿರಲಿಲ್ಲ. ಹೀಗಾಗಿ ಮಗುವನ್ನು ಮನೆಯಲ್ಲೇ ಕೂಡಿಹಾಕಿ ಹೋಗುತ್ತಿದ್ದಳು. ತಾಯಿ ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಬಿಟ್ಟು ಬೀಗ ಹಾಕಿ ಹೋದರೆ, ರಾತ್ರಿ ಬರೋವರೆಗೂ ಕೂಡಿ ಹಾಕಿರುವುದು ತಿಳಿದು ಬಂದಿತ್ತು.
ಮಗುವಿನ ಮೇಲೆ ಅಮಾನುಷ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸೂಚನೆ ಮೇರೆಗೆ ಗಿರಿನಗರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಹಲ್ಲೆಗೀಡಾದ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದು, ಸದ್ಯ ಸರ್ಕಾರಿ ಶಿಶುಮಂದಿರದಲ್ಲಿ ಪಾಲನೆ ಮಾಡುತ್ತಿದ್ದಾರೆ.












Click it and Unblock the Notifications