ಬೆಂಗಳೂರಿನಲ್ಲಿ ವಿದ್ಯುತ್ ಶಾಕ್‌ನಿಂದ ತಾಯಿ, ಮಗು ಸಾವು: ಬೆಸ್ಕಾಂ ಎಇ, ಎಇಇ ಅಮಾನತು
ಬೆಂಗಳೂರಿನ ವೈಟ್‌ಫೀಲ್ಡ್‌ನ ಹೋಪ್ ಫಾರ್ಮ್ ಜಂಕ್ಷನ್ ಬಳಿ ಭಾನುವಾರ ನಡೆದುಕೊಂಡು ಹೋಗುತ್ತಿದ್ದ 23 ವರ್ಷದ ಮಹಿಳೆ ಮತ್ತು ಅವರ ಒಂಬತ್ತು ತಿಂಗಳ ಮಗಳು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆಗೆ ಸಂಬಂಧಪಟ್ಟಂತೆ ಬೆಸ್ಕಾಂ ಲೈನ್ ಮ್ಯಾನ್, ಎಇ ಮತ್ತು ಎಇಇ ಅವರನ್ನು ಅಮಾನತು ಮಾಡಲಾಗಿದೆ.
ಇಂಧನ ಸಚಿನ ಕೆ.ಜೆ. ಜಾರ್ಜ್ ಅವರು ಘಟನೆಗೆ ಸಂಬಂಧಪಟ್ಟಂತೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತ ಪಟ್ಟವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಗೆ ಕಾರಣವಾದರೂ ಯಾರೇ ಇದ್ದರೂ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಟ್ವೀಟ್ ಮಾಡಿರುವ ಸಚಿವ ಕೆ.ಜೆ. ಜಾರ್ಜ್, " ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ ಎಇ ಮತ್ತು ಎಇಇ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯಯವಾಗಿ ಕ್ರಮ ಜರುಗಿಸಲಾಗುವುದು. ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ." ಎಂದು ಹೇಳಿದ್ದಾರೆ.
In a deeply unfortunate incident, a lady and a child have lost their lives to electrocution close to Hope Farm in Whitefield, Bengaluru. We have taken up an inquiry into the incident that has led to these unfortunate deaths and are awaiting the report. The line man, AE and AEE…
— KJ George (@thekjgeorge) November 19, 2023
ಘಟನೆ ಬಗ್ಗೆ ವ್ಯಾಪಕ ಆಕ್ರೋಶ
ಕಾಡುಗೋಡಿ ಪೊಲೀಸ್ ವ್ಯಾಪ್ತಿಯ ಎಕೆಜಿ ಕಾಲೋನಿ ನಿವಾಸಿ ಸೌಂದರ್ಯ ಮತ್ತು ಅವರ ಪುತ್ರಿ ಸುವೀಕ್ಷಾ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಸೌಂದರ್ಯ ಮತ್ತು ಆಕೆಯ ಮಗಳು ತನ್ನ ತಾಯಿಯ ಮನೆಗೆ ಹೋಗುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಸೌಂದರ್ಯ ಅವರು ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆಯಲ್ಲಿ ಬಿದ್ದಿದ್ದ ವೈರ್‌ಗೆ ಕಾಲಿಟ್ಟಿದ್ದು, ವಿದ್ಯುತ್ ಸ್ಪರ್ಶವಾಗಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಗರಿಕರು ಕಾಡುಗೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರದ ಹಲವು ಪ್ರದೇಶಗಳಲ್ಲಿ ಫುಟ್‌ಪಾತ್‌ನಲ್ಲಿ ಫೈಬರ್ ಆಪ್ಟಿಕ್ ಕೇಬಲ್‌ಗಳು ಬಿದ್ದಿದ್ದು, ತೆಗೆದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೌಂದರ್ಯ ಅವರ ಪತಿ ತಮಿಳುನಾಡಿನ ಕಡಲೂರು ಮೂಲದವರಾಗಿದ್ದು, ಕಡಲೂರು ಸಮೀಪದ ನೇವೇಲಿ ಕೈಗಾರಿಕಾ ಪಟ್ಟಣದಲ್ಲಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ನಗರದ ರಸ್ತೆಗಳಲ್ಲಿ ಬಿದ್ದಿರುವ ವಿದ್ಯುತ್ ತಂತಿಗಳನ್ನು ನಿರ್ಲಕ್ಷಿಸಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ವೈಟ್‌ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಶಿವಕುಮಾರ ಗುಣಾರೆ, ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬೆಸ್ಕಾಂ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications