ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ತಾಯಿ, ಮಗ
ಬೆಂಗಳೂರು, ಮಾರ್ಚ್ 4: ಬೆಂಗಳೂರಿನಲ್ಲಿ ತಾಯಿ ಹಾಗೂ ಆಕೆಯ ಮಗ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ಯಾಟರಾಯನಪುರ ಬಳಿಯ ಕವಿಕಾ ಲೇಔಟ್‌ನಲ್ಲಿ ಬುಧವಾರ ನಡೆದಿದೆ.
ತಾಯಿ ಶಶಿಕಲಾ (43) ಮಗ ಹೇಮಾದ್ರಿ (11) ಕವಿಕಾ ಲೇಔಟ್‌ನ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಶಿಕಲಾ ಅವರ ಮಗನಿಗೆ ಹುಟ್ಟಿನಿಂದಲ್ಲೂ ಮೂರ್ಚೆ ರೋಗ ಬರುತ್ತಿತ್ತಂತೆ. ಸಾಕಷ್ಟು ಬಾರಿ ಆಸ್ಪತ್ರೆಗೆ ತೋರಿಸಿದ್ದರೂ ಹೇಮಾದ್ರಿಗೆ ಖಾಯಿಲೆ ವಾಸಿಯಾಗಿರಲಿಲ್ಲ. ಕೆಲ ದಿನ ಖಾಯಿಲೆ ಹೋಗಿದ್ದರೂ ಮೂರ್ಚೆ ರೋಗ ಬಿಟ್ಟು ಬಿಟ್ಟು ಬರುತ್ತಿತ್ತಂತೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನಗರದ ವಿಕ್ಟೋರಿಯ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದರು. ಈ ಕುರಿತು ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications