Namma Metro: ಈ ಮಟ್ರೋ ನಿಲ್ದಾಣದಲ್ಲಿ ಮಗುವಿಗೆ ಹಾಲುಣಿಸಲು ತಾಯಿ ಪರದಾಟ

Namma Metro: ಬೆಂಗಳೂರಿನ ಜೀವನಾಡಿ ಸಾರಿಗೆಗಳಲ್ಲಿ ನಮ್ಮ ಮೆಟ್ರೋ ರೈಲು ಕೂಡ ಒಂದಾಗಿದೆ. ಅಲ್ಲದೆ, ಇದು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿ ಆಗುತ್ತಲೇ ಇರುತ್ತದೆ. ಇದೀಗ ಮಹಿಳೆಯೊಬ್ಬರು ಆರೈಕೆ ಕೇಂದ್ರ ಇಲ್ಲದೆ ತನ್ನ ಮಗುವಿಗೆ ಹಾಲುಣಿಸಲು ಪರದಾಡಿದ ಘಟನೆ ನಗರದ ಟ್ರಿನಿಟಿ ಮಟ್ರೋ ನಿಲ್ದಾಣದಲ್ಲಿ ನಡೆದಿದೆ.

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತನ್ನ ಮಗುವಿಗೆ ಹಾಲುಣಿಸಲು ಪರದಾಡಿರುವ ವಿಡಿಯೋ ವೈರಲ್‌ ಆಗಿದ್ದು, ಈ ದೃಶ್ಯ ಎಂಥವರ ಮನಸ್ಸನ್ನು ಕಲಕುವಂತಿದೆ. ಮಹಿಳೆಯು ತನ್ನ ಮಗುವಿಗೆ ಹಾಲುಣಿಸುವಾಗ ಗಂಡ ಮತ್ತು ಮಾವ ಕಾವಲಾಗಿ ನಿಂತಿರುವ ವಿಡಿಯೋ ಭಾರೀ ವೈರಲ್‌ ಆಗುತ್ತಿದೆ. ಇದನ್ನು ಗಮನಿಸಿದ ಪ್ರಯಾಣಿಕರು, ಸಾರ್ವಜನಕರು ಬೆಂಗಳೂರಿನ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ಆರೈಕೆ ಕೆಂದ್ರಗಳನ್ನು ಸ್ಥಾಪನೆ ಮಾಡಬೇಕು ಎಂದು ಬಿಎಂಆರ್‌ಸಿಎಲ್‌ಗೆ ಒತ್ತಾಯಿಸಿದ್ದಾರೆ.

Mother Struggle to milk Feed Baby at Bengaluru s this Namma Metro Station

ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರಿಗೆ, ಮಕ್ಕಳಿಗೆ ಯಾವುದೇ ರೀತಿಯಾಗಿ ತೊಂದರೆಯಾದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರಮುಖವಾಗಿ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬಿಎಂಆರ್‌ಸಿಎಲ್‌ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ಆರೈಕೆ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಯತ್ನಾಳ್‌ ಹೇಳಿದ್ದೇನು.?: ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್‌ ಮೇರಿ ಹೆಸರಿಡುವ ಬಗ್ಗೆ ಸಿಎಂ ಪ್ರಸ್ತಾಪಿಸಿದ್ದರು. ಈ ಬಗ್ಗೆ ತಮ್ಮ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಯತ್ನಾಳ್‌ ಏನು ಬರೆದುಕೊಂಡಿದ್ದಾರೆ ಎಂದು ಇಲ್ಲಿ ತಿಳಿಯಿರಿ. ಶಿವಾಜಿನಗರದ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರಿಡುವಂತೆ ಮನವಿ ಸಲ್ಲಿಕೆಗೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಟ್ವೀಟ್‌ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

"ಒಂದು ಸಂಸ್ಕೃತಿಯನ್ನು ಹೇಗೆ ನಾಶ ಮಾಡಬಹುದು ಎಂಬುದಕ್ಕೆ ಇದೆ ಉದಾಹರಣೆ ಆಗಿದೆ. ಹಿಂದೂಗಳ ಆರಾಧ್ಯದೈವ, ಔರಂಗಜೇಬನ ಹುಟ್ಟಡಗಿಸಿದ ಗಂಡುಗಲಿ, ಮಹಾಪರಾಕ್ರಮಿ ಶಿವಾಜಿ ಮಹಾರಾಜರು ತಮ್ಮ ಬಾಲ್ಯವನ್ನು ಕಳೆದಂತ ಶಿವಾಜಿನಗರದ ಮೆಟ್ರೋಗೆ ಸಂತ ಮೇರಿ ಹೆಸರನ್ನು ಇಡಬೇಕಂತೆ," ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

"ಇತಿಹಾಸ ಅರಿಯದ ಮೂಢರಷ್ಟೇ ಈ ರೀತಿ ಸಲಹೆ ಕೊಡಬಲ್ಲರು. 150 ವರ್ಷಗಳ ಇತಿಹಾಸವಿರುವ ಏಕಾಂಬರೇಶ್ವರ ಸ್ವಾಮಿಯ ದೇವಸ್ಥಾನ, ಮುತ್ಯಾಲಮ್ಮ ದೇವಸ್ಥಾನ, ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನ, ಅಂಗಾಲ ಪರಮೇಶ್ವರಿ ಅಮ್ಮನವರ ದೇವಸ್ಥಾನಗಳು ಶಿವಾಜಿನಗರದಲ್ಲಿವೆ," ಎಂದು ಹೇಳಿದ್ದಾರೆ.

ಇನ್ನು ಸೆಪ್ಟೆಂಬರ್‌ 8ರಂದು ಶಿವಾಜಿನಗರದ ಸಂತ ಮೇರಿ ಜಯಂತ್ಯುತ್ಸವ ಹಿನ್ನೆಲೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ ಆಗಿದ್ದರು. ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿಸ್ ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡಬೇಕು. ಇದರಿಂದ ಪುಣ್ಯಕ್ಷೇತ್ರ ಮೇರಿ ಚರ್ಚೆಗೆ ಹೆಚ್ಚು ಜನರು ಬರಲು ಅನುಕೂಲವಾಗುತ್ತದೆ ಎಂದು ಹೇಳಿದ್ದರು. ಇದೀಗ ಇದಕ್ಕೆ ಶಾಸಕ ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+