ಮಧ್ಯಪ್ರದೇಶ ರಾಜಕೀಯ ಹೈಡ್ರಾಮ; ಸಿದ್ದರಾಮಯ್ಯಗೆ ಕರೆ
ಬೆಂಗಳೂರು, ಮಾರ್ಚ್ 09 : ಮಧ್ಯಪ್ರದೇಶದ 16 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಸರ್ಕಾರವನ್ನು ಉಳಿಸಿಕೊಳ್ಳಲು ಕಮಲನಾಥ್ ಪ್ರಯತ್ನ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕರೆ ಮಾಡಿದ್ದಾರೆ.
ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಕರ್ನಾಟಕ ತಲುಪಿದೆ. 6 ಸಚಿವರು, 10 ಕಾಂಗ್ರೆಸ್ ಶಾಸಕರು ಸೋಮವಾರ ಸಂಜೆ ಬೆಂಗಳೂರಿಗೆ ಬಂದಿದ್ದಾರೆ. ವೈಟ್ ಫೀಲ್ಡ್ ಬಳಿಯ ಆದರ್ಶ ಹೋಟೆಲ್‌ನಲ್ಲಿ ಶಾಸಕರು ಇರುವ ಮಾಹಿತಿ ಸಿಕ್ಕಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಕಲಮನಾಥ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕರೆ ಮಾಡಿದ್ದಾರೆ. ಶಾಸಕರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಮನವೊಲಿಕೆ ಮಾಡಿ ವಾಪಸ್ ಕಳಿಸಿ ಎಂದು ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಡಿ. ಕೆ. ಶಿವಕುಮಾರ್, ಮಾಜಿ ಸಚಿವ ಡಾ. ಜಿ. ಪರಮೇಶ್ವರ ಕೆಲವು ಕಾಲ ವಿಧಾನಸೌಧದ ಮೊಗಸಾಲೆಯಲ್ಲಿ ಮಾತುಕತೆ ನಡೆಸಿದರು. ಶಾಸಕರು ಎಲ್ಲಿದ್ದಾರೆ? ಎಂದು ಮಾಹಿತಿ ಸಂಗ್ರಹಿಸಲು ಸೂಚಿಸಿದ್ದಾರೆ.
ಕಳೆದ ಒಂದು ವಾರದಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮ ನಡೆಯುತ್ತಿದೆ. ಬೆಂಗಳೂರಿಗೆ ಕಳೆದ ವಾರವೇ ಮೂವರು ಶಾಸಕರು ಬಂದಿದ್ದಾರೆ. ಅದರಲ್ಲಿ ಒಬ್ಬರು ಶಾಸಕರು ಗುರುವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.












Click it and Unblock the Notifications