ಅನಂತ್ ಕುಮಾರ್ ಅಂತಿಮ ದರ್ಶನ ಪಡೆದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ ಕಾಮತ್

ಬೆಂಗಳೂರು, ನವೆಂಬರ್. 12: ದಕ್ಷಿಣಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್, ಹೈಕೋರ್ಟ್ ವಕೀಲರಾದ ಎಸ್.ಪವನ್ ಚಂದ್ರ ಶೆಟ್ಟಿ ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಅನಂತ್ ಕುಮಾರ್ ಕೇಂದ್ರದಲ್ಲಿ ಮಂತ್ರಿಯಾಗಿ ಕರ್ನಾಟಕಕ್ಕೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಅದರಲ್ಲಿಯೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿ ಶ್ರಮಿಸಿದ್ದಾರೆ.

MP Nalin Kumar Kateel pays condolance to Ananth Kumars demise

ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯ ಸಚಿವರಾಗಿದ್ದಾಗ ರೈತರ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ರಸಗೊಬ್ಬರ ಇಲಾಖೆಯಿಂದ ಕೃಷಿಕರಿಗೆ ಸಿಗಬೇಕಾದ ಸಕಲ ಯೋಜನೆ ಸಿಗುವಂತೆ ಮಾಡಿದ್ದರು. ರಾಜ್ಯದ ಏಕೈಕ ರಸಗೊಬ್ಬರ ಕಾರ್ಖಾನೆ ಮಂಗಳೂರಿನ ಎಂಸಿಎಫ್ ಪುನಶ್ಚೇತನಕ್ಕೆ ಅನಂತಕುಮಾರ್ ಶ್ರಮಿಸಿದ್ದಾರೆ ಎಂದು ತಿಳಿಸಿದರು.

MP Nalin Kumar Kateel pays condolance to Ananth Kumars demise

ಜೆನೆರಿಕ್ ಔಷಧದ ಮೂಲಕ ಜನಸಾಮಾನ್ಯರಿಗೆ ಕಡಿಮೆ ಖರ್ಚಿನಲ್ಲಿ ಔಷಧ ಸಿಗುವಂತೆ ಮಾಡಿದ್ದಾರೆ.

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ರೂಪುರೇಶೆ ಹಾಕಿಕೊಟ್ಟ ಅಪ್ಪಟ ರಾಷ್ಟ್ರಪ್ರೇಮಿ ಅನಂತ್ ಕುಮಾರ್ ಜೀ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ. ಹಾಗೆಯೇ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದರು. ಶಾಸಕ ಡಿ.ವೇದವ್ಯಾಸ ಕಾಮತ್ ಜೊತೆಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+