ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಲವ್‌ ಜಿಹಾದ್ ಸದ್ದು: ಸಿಎಂ ಭೇಟಿಯಾದ ಸಂಸದೆ ಶೋಭಾ ಕರಂದ್ಲಾಜೆ

|
Google Oneindia Kannada News

ಬೆಂಗಳೂರು, ಜನವರಿ 5: ಕರ್ನಾಟಕ ಹಾಗೂ ಕೇರಳದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಆತಂಕ ವ್ಯಕ್ತಪಡಿಸಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸು ಎಂದು ಶೋಭಾ ಕರಂದ್ಲಾಜೆಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸು ಎಂದು ಶೋಭಾ ಕರಂದ್ಲಾಜೆ

ಈ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೂ ದೂರು ನೀಡಿದರು. ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಲವ್ ಜಿಹಾದ್ ಮತ್ತೆ ಸದ್ದು ಮಾಡಿದ್ದು, ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ. ಈ ಬಗ್ಗೆ ಸೂಕ್ತ ನಿಗಾ ವಹಿಸಲು ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡುವಂತೆ ಶೋಭಾ ಮನವಿ ಮಾಡಿದ್ದಾರೆ.

MP Shobha Karandlaje Meet CM Yediyurappa About Love Jihad

ಇತ್ತೀಚೆಗೆ ಕೇರಳದ ಕಾಸರಗೋಡು ಜಿಲ್ಲೆಯ ಹಿಂದೂ ಯುವತಿಯೊಬ್ಬಳನ್ನು ಪುಸಲಾಯಿಸಿ ತಂಪು ಪಾನೀಯದಲ್ಲಿ ಮತ್ತುಬರಿಸುವ ಔಷಧಿ ಹಾಕಿ ಅತ್ಯಾಚಾರ ಎಸಗಿದ್ದಾರೆ. ಇದೇ ವೇಳೆ ವಿಡಿಯೋ ಚಿತ್ರಿಕರಣ ಮಾಡಿಕೊಂಡು ಆ ಯುವತಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಈ ಬಗ್ಗೆ ಹಿಂದೂ ಸಂಘಟನೆಗಳು ಕಾಸರಗೋಡು ಪೊಲೀಸರಿಗೆ ದೂರು ನೀಡಲು ಹೋದರೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಶೋಭಾ ಆರೋಪಿಸಿದ್ದಾರೆ.

English summary
MP And BJP Leader Shobha Karandlaje had meeting CM Yediyurappa discussed about alleged Love Jihad Case Of Kasaragod, Kerala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X