ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ದಕ್ಷಿಣದಲ್ಲಿ ಏ.11ರಿಂದ 14ವರೆಗೆ ಲಸಿಕೆ ಉತ್ಸವ: ತೇಜಸ್ವಿ ಸೂರ್ಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 9: ಬೆಂಗಳೂರಿನ ದಕ್ಷಿಣದ ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಆಸ್ಪತ್ರೆ ಸಹಾಯದೊಂದಿಗೆ ಏಪ್ರಿಲ್ 11ರಿಂದ 14ರವರೆಗೆ ಲಸಿಕೆ ಉತ್ಸವವನ್ನು ಹಮ್ಮಿಕೊಂಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರು ನಾಲ್ಕು ದಿನಗಳ ಕಾಲ ಲಸಿಕೆ ಉತ್ಸವಕ್ಕೆ ಕರೆ ನೀಡಿದ್ದು, ಅದಕ್ಕೆ ಬೆಂಬಲ ಸೂಚಿಸಿ ಬೆಂಗಳೂರು ದಕ್ಷಿಣದ ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಲಸಿಕೆ ಉತ್ಸವ ನಡೆಸುವುದಾಗಿ ತಿಳಿಸಿದ್ದಾರೆ.

ಭಾರತದಲ್ಲಿ ಲಾಕ್‌ಡೌನ್ ಜಾರಿ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?ಭಾರತದಲ್ಲಿ ಲಾಕ್‌ಡೌನ್ ಜಾರಿ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಸ್ಥಳೀಯರು ಕಡ್ಡಾಯವಾಗಿ ಕೊರೊನಾ ಲಸಿಕೆ ಸ್ವೀಕರಿಸಬೇಕು ಎಂದು ಹೇಳಿದ್ದಾರೆ. ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ನಿಯಂತ್ರಣಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸಬೇಕಿದೆ. ಕೊವಿಡ್-19 ಸೋಂಕಿನ ತಪಾಸಣೆ ನಡೆಸಿದಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತವೆ.

MP Tejasvi Surya Planned To Hold Vaccination Drive From April 11 To 14.

ಹಾಗಿದ್ದರೂ, ದೇಶದ ಶೇ.70ರಷ್ಟು ಜನರು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೀವು ಸೋಂಕಿನ ತಪಾಸಣೆ ಮಾಡಿಸಿಕೊಳ್ಳದಿದ್ದರೆ, ನಿಮ್ಮ ನೆರೆಹೊರೆಯವರಿಗೂ ಸೋಂಕು ಹರಡುವ ಅಪಾಯ ಹೆಚ್ಚಾಗಿರುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದರು.

Recommended Video

ಕಳೆದ 24 ಗಂಟೆಗಳಲ್ಲಿ 1,45,384 ಕೊರೊನಾ ಪ್ರಕರಣ ಪತ್ತೆ-794 ಜನರು ಸೋಂಕಿಗೆ ಬಲಿ | Oneindia Kannada

ಕೊರೊನಾವೈರಸ್ ಲಸಿಕೆ ಬಗ್ಗೆ ದೇಶಾದ್ಯಂತ ಜಾಗೃತಿ ಮೂಡಿಸಬೇಕಿದೆ. ಏಪ್ರಿಲ್ 11 ರಿಂದ ಏಪ್ರಿಲ್ 14ರವರೆಗೂ ಲಸಿಕೆ ಉತ್ಸವವನ್ನು ನಡೆಸಲಾಗುತ್ತದೆ. ನಾಲ್ಕು ದಿನಗಳಲ್ಲಿ ಅತಿಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಬೇಕಿದೆ. 45 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಲಸಿಕೆ ಪಡೆದುಕೊಳ್ಳಬೇಕು ಎಂದಿದ್ದರು.

English summary
MP Tejasvi Surya says Taking Forward Prime minister Narendramodi's TikaUtsav call from April 11-14, we've planned vaccination drives in Apartment complexes with help from RWAs & hospitals in B'luru South.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X