ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷ ಸೇರದ ಎಂಟಿಬಿ

|
Google Oneindia Kannada News

ಬೆಂಗಳೂರು, ನವೆಂಬರ್ 14: ಅನರ್ಹ ಶಾಸಕರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆದರೆ ಎಂಟಿಬಿ ನಾಗರಾಜ್ ಮಾತ್ರ ಸಭೆಗೆ ಆಗಮಿಸಿಲ್ಲ ಯಾಕೆ ಎನ್ನುವ ಪ್ರಶ್ನೆ ಕಾಡುವುದು ಸಹಜ.

ಹೌದು ಎಂಟಿಬಿ ನಾಗರಾಜ್ ಸಭೆಗೆ ಗೈರಾಗಿದ್ದಾರೆ, ಹಾಗೆಂದ ಮಾತ್ರದಕ್ಕೆ ಬಿಜೆಪಿ ಸೇರೊಲ್ಲ ಎಂದಲ್ಲ ಇಂದೇ ನಾಮಪತ್ರ ಸಲ್ಲಿಸಬೇಕಾಗಿರುವುದರಿಂದ ಹುಣಸೂರಿಗೆ ತೆರಳಿದ್ದಾರೆ.

ಅನರ್ಹರಿಗೆ ಬಿಜೆಪಿಯಿಂದ 'ಅದ್ಧೂರಿ' ಸ್ವಾಗತಅನರ್ಹರಿಗೆ ಬಿಜೆಪಿಯಿಂದ 'ಅದ್ಧೂರಿ' ಸ್ವಾಗತ

ಬಿಜೆಪಿಯಿಂದಲೇ ನಾಮಪತ್ರ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಮಾತ್ರ ಸಭೆಗೆ ಗೈರಾಗಿದ್ದು, ಅವರ ಈ ನಡವಳಿಕೆಯಿಂದ ಹಲವು ಅನುಮಾನಗಳು ವ್ಯಕ್ತವಾಗಿವೆ.

ಅಧಿಕೃತವಾಗಿ ಬಿಜೆಪಿ ಸೇರಿದ ಅನರ್ಹ ಶಾಸಕರು

ಅಧಿಕೃತವಾಗಿ ಬಿಜೆಪಿ ಸೇರಿದ ಅನರ್ಹ ಶಾಸಕರು

ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಮುನಿರತ್ನ, ಆನಂದ್ ಸಿಂಗ್, ಹೆಚ್.ವಿಶ್ವನಾಥ್, ಮಹೇಶ್ ಕುಮಟಳ್ಳಿ, ಪ್ರತಾಪ್ ಗೌಡ ಪಾಟೀಲ್, ಹೆಚ್,ಸುಧಾಕರ್, ಶಿವರಾಮ್ ಹೆಬ್ಬಾರ್, ಶ್ರೀಮಂತ್ ಪಾಟೀಲ್, ಎಂಟಿಬಿ ನಾಗರಾಜ್, ಕೆ.ಗೋಪಾಲಯ್ಯ, ಕೆ.ಸಿ. ನಾರಾಯಣಗೌಡ ಮತ್ತು ಆರ್.ಶಂಕರ್ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿದ್ದಾರೆ.

ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದ ಎಂಟಿಬಿ

ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದ ಎಂಟಿಬಿ

ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಕಚೇರಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ವೇದಿಕೆಯಲ್ಲಿ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ತಮ್ಮ ಕ್ಷೇತ್ರಕ್ಕೆ ತೆರಳಿದ್ದಾರೆ.

ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿಲ್ಲ

ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿಲ್ಲ

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ, ರೋಷನ್ ಬೇಗ್ ಹಿರಿಯ ನಾಯಕರು, ತಾಂತ್ರಿಕವಾಗಿ ಅವರ ಸೇರ್ಪಡೆಗೆ ಸಮಸ್ಯೆ ಇದೆ. ಅವರೇ ಸ್ವಲ್ಪ ಸಮಯಾವಕಾಶ ಪಡೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿಯಿಂದ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡುವ ಕುರಿತು ನನಗಷ್ಟು ಮಾಹಿತಿ ಇಲ್ಲ ಎಂದಿದ್ದಾರೆ.

ಉಪ ಚುನಾವಣೆ ಕುರಿತ ಮಾಹಿತಿ

ಉಪ ಚುನಾವಣೆ ಕುರಿತ ಮಾಹಿತಿ

ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಅನರ್ಹ ಶಾಸಕರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಆದೇಶ ನೀಡಲಾಗಿದ್ದು, ಅನರ್ಹ ಶಾಸಕರು ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಅನರ್ಹ ಶಾಸಕರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಡಿಸೆಂಬರ್ 5 ರಂದು ಒಟ್ಟು 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಡಿಸೆಂಬರ್ 9ರಂದು ಫಲಿತಾಂಶ ಹೊರಬೀಳಲಿದೆ.

English summary
Hours After Supreme Court On wednesday paved the way for disqualified MLAs.17 Disqualified MLAs Joined BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X