Leopard Safari: ಬನ್ನೇರುಘಟ್ಟದಲ್ಲಿ ಶೀಘ್ರದಲ್ಲೇ ಚಿರತೆ ಸಫಾರಿ ಪ್ರಾರಂಭ
ಬೆಂಗಳೂರು, ಜೂನ್. 08: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೊಸ ಅತಿಥಿಗಳ ಆಗಮನವಾಗಲಿದೆ. ಉದ್ಯಾನವನಕ್ಕೆ ಹೆಚ್ಚಿನ ಪ್ರವಾಸಿಗರನ್ನು ಸೆಳೆಯಲು ಮತ್ತು ಆದಾಯವನ್ನು ಹೆಚ್ಚಿಸಲು ಈ ಕ್ರಮವನ್ನು ತೆಗೆದುಕೊಳ್ಳುತ್ತಿದೆ. ಬನ್ನೇರುಘಟ್ಟಕ್ಕೆ ಬರುವವರ ಸಂಖ್ಯೆ 16% ಕುಸಿತ ಕಂಡಿದೆ. ಆದಾಯದಲ್ಲಿಯೂ 18% ರಷ್ಟು ಕುಸಿದಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶೀಘ್ರದಲ್ಲೇ ಚಿರತೆ ಸಫಾರಿ ಆರಂಭವಾಗಲಿದೆ. ಬಹುನಿರೀಕ್ಷಿತ ಚಿರತೆ ಸಫಾರಿ ಒಂದು ತಿಂಗಳೊಳಗೆ ಪ್ರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಬೆಂಗಳೂರು ಮಿರರ್ ವರದಿ ಮಾಡಿದೆ. ಪ್ರಸ್ತುತ, 50 ಎಕರೆ ಪ್ರದೇಶದಲ್ಲಿ ಚಿರತೆಗಳನ್ನು ವೀಕ್ಷಿಸಬಹುದು. ಹೀಗಾಗಿ ಈ ಪ್ರದೇಶಗಳಲ್ಲಿ ಗಿಡಗಂಟಿಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.

"ಚಿರತೆಗಳಿಗೆ ತರಬೇತಿ ನೀಡಲಾಗಿದ್ದರೂ, ಅವು ಇನ್ನೂ ದೊಡ್ಡ ಪ್ರದೇಶದಲ್ಲಿ ಬಿಟ್ಟಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ನಾವು ಕಳೆದ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಸಫಾರಿ ಒಂದು ತಿಂಗಳೊಳಗೆ ಪ್ರಾರಂಭವಾಗುವ ನಿರೀಕ್ಷೆಯಿದೆ" ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನ ಕಾರ್ಯನಿರ್ವಾಹಕ ನಿರ್ದೇಶಕ ಎವಿ ಸೂರ್ಯ ಸೇನ್ ಹೇಳಿದ್ದಾರೆ.
ಕಡಿಮೆಯಾಯ್ತು ಮೃಗಾಲಯಕ್ಕೆ ಭೇಟಿ ನೀಡುವವರ ಸಂಖ್ಯೆ
ಈ ಬೇಸಿಗೆಯಲ್ಲಿ ಬಿಸಿಲಿನ ತಾಪಮಾನದಿಂದಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬರುವವರ ಸಂಖ್ಯೆ ಕಡಿಮೆಯಾಗಿದೆ. ಬೇಸಿಗೆ ರಜೆಯಲ್ಲಿ ಅಂದರೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮೃಗಾಲಯಕ್ಕೆ ಭೇಟಿ ನೀಡಿದವರ ಸಂಖ್ಯೆ 4.28 ಲಕ್ಷವಿದೆ. ಆದರೆ, ಕಳೆದ ವರ್ಷದ ಇದೇ ಅವಧಿಯಲ್ಲಿ 5.09 ಲಕ್ಷ ಮಂದಿ ಭೇಟಿ ನೀಡಿದ್ದರು. ಹೋಲಿಕೆ ಮಾಡಿದರೆ ಸುಮಾರು 16% ಕುಸಿತ ದಾಖಲಿಸಿದೆ.

ಇದರ ಪರಿಣಾಮವಾಗಿ, ಆದಾಯವು 18% ಕಡಿಮೆಯಾಗಿದೆ. 2023 ರ ಬೇಸಿಗೆ ರಜೆಯಲ್ಲಿ 13.42 ಕೋಟಿ ರೂಪಾಯಿಗಳ ಆದಾಯ ಸಂಗ್ರಹಿಸಿದೆ. ಇದು ಈ ವರ್ಷ 10.99 ಕೋಟಿಗೆ ಇಳಿದಿದೆ. ಇದಕ್ಕೆ ಈ ವರ್ಷದ ಬಿಸಿಲಿನ ತಾಪಮಾನವೇ ಕಾರಣ ಎನ್ನುತ್ತಾರೆ ಅಧಿಕಾರಿಗಳು. ಮನೆಯಿಂದ ಹೊರಗೆ ಬರಲು ಬಿಡದ ಬಿಸಿಲು ಮಕ್ಕಳು ಮತ್ತು ಪೋಷಕರನ್ನು ಬನ್ನೇರುಘಟ್ಟ ಪಾರ್ಕ್‌ನಿಂದ ದೂರ ಮಾಡಿದೆ ಎನ್ನಲಾಗಿದೆ.
"ನಾವು ಮಾರ್ಚ್‌ನಿಂದ ಈ ಕುಸಿತವನ್ನು ಗಮನಿಸುತ್ತಿದ್ದೇವೆ. ಸಾಂಕ್ರಾಮಿಕ ರೋಗದ ನಂತರ ಪ್ರವಾಸೋದ್ಯಮದಲ್ಲಿ ಇಳಿಕೆ ಕಂಡುಬಂದಿದೆ, ಇದು ಈ ಪ್ರವಾಸಿಗರು ಮತ್ತು ಆದಾಯದ ಕುಸಿತಕ್ಕೆ ಕಾರಣವಾಗುತ್ತದೆ" ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ವರ್ಷದ ಮಾರ್ಚ್ 2023 ರಲ್ಲಿ ಸುಮಾರು 1.13 ಲಕ್ಷ ಜನರು ಉದ್ಯಾನಕ್ಕೆ ಭೇಟಿ ನೀಡಿದ್ದರೆ, ಈ ಬಾರಿ ಪ್ರವಾಸಿಗರ ಸಂಖ್ಯೆ 1.11 ಲಕ್ಷಕ್ಕೆ ಇಳಿದಿದೆ. ಈ ಸಂಖ್ಯೆಯನ್ನು ಸುಧಾರಿಸಲು, ಅಧಿಕಾರಿಗಳು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಪ್ರವಾಸಿಗರು ಬಿಸಿಲಿನಿಂದ ಬಳಲದಂತೆ ತಡೆಯಲು ಮೃಗಾಲಯದಲ್ಲಿ ಹೆಚ್ಚುವರಿ ಶಾಶ್ವತ ಮತ್ತು ತಾತ್ಕಾಲಿಕ ಆಶ್ರಯಗಳನ್ನು ರಚಿಸಲಾಗಿದೆ. ಪ್ರವೇಶದ್ವಾರದಲ್ಲಿ ಶೆಡ್‌ಗಳನ್ನು ಹಾಕಲಾಗಿದೆ ಮತ್ತು ಮೃಗಾಲಯದೊಳಗೆ ಇತರ ನಿರ್ಣಾಯಕ ಆಶ್ರಯ ತಾಣಗಳನ್ನು ಹಾಕಲಾಗಿದೆ. ಉದ್ಯಾನವನದ ಆಡಳಿತವು ತನ್ನ ಪರಿಸರ ಸ್ನೇಹಿ ಸಾರಿಗೆಯನ್ನು ಹೆಚ್ಚಿಸಲು ಯೋಜಿಸಿದೆ ಮತ್ತು ರಜಾದಿನಗಳಲ್ಲಿ ಹೆಚ್ಚು ಬೈಸಿಕಲ್‌ಗಳನ್ನು ಸೇರಿಸಿದೆ. ಪ್ರವಾಸಿಗರನ್ನು ಸೆಳೆಯಲು ನಗರದ ಶಾಲೆಗಳು ಮತ್ತು ಕಾಲೇಜುಗಳಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಯೋಜಿಸಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications