ಮಾಯವಾಗಲಿದೆ ಪುಟಗಟ್ಟಲೇ ಬರೆಯುವ ಪರಿಪಾಠ
ಬೆಂಗಳೂರು, ಜುಲೈ,16 : ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳ ಜೊತೆಯಲ್ಲಿ ಹೆಚ್ಚುವರಿಯಾಗಿ ಅಧ್ಯಯನ ಮಾಡುವ ವಿಷಯಗಳಿಗೆ ಪರೀಕ್ಷೆಗಳಲ್ಲಿ ಪುಟ ತುಂಬಿಸುವ ಪರಿಪಾಠವಿತ್ತು. ಆದರೆ ಬೆಂಗಳೂರು ವಿಶ್ವವಿದ್ಯಾನಿಲಯ ಈ ನಿಯಮ ಕೈಬಿಟ್ಟಿದೆ.
ಇದೇ ಮೊದಲ ಬಾರಿಗೆ ಬಹು ಆಯ್ಕೆ ಪ್ರಶ್ನೆ ಮಾದರಿಯಲ್ಲಿ ಪರೀಕ್ಷೆ ನಡೆಸಲು ಬೆಂಗಳೂರು ವಿವಿ ತೀರ್ಮಾನಿಸಿದೆ. ಜ್ಞಾನ ಭಾರತಿ ಆವರಣದಲ್ಲಿ ಆಯೋಜಿಸಿದ್ದ ವಿದ್ಯಾವಿಷಯಕ ಪರಿಷತ್ ಸಭೆಯಲ್ಲಿ ಬುಧವಾರ ಸಮ್ಮತಿ ದೊರಕಿದೆ. ಇದು 2015-16ನೇ ಸಾಲಿನಿಂದ ಜಾರಿಗೆ ತರುವಂತೆ ಈಗಾಗಲೇ ನಿರ್ಧರಿಸಲಾಗಿದೆ ಎಂದು ಬೆಂಗಳೂರು ವಿವಿ ಕುಲಪತಿ ಪ್ರೊ. ಬಿ. ತಿಮ್ಮೇಗೌಡ ತಿಳಿಸಿದ್ದಾರೆ.[ಬೆಂಗಳೂರು ವಿಶ್ವವಿದ್ಯಾಲಯ ಒಡೆದು ಮೂರು ಭಾಗ]

ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳ ಜೊತೆ ಈ ಶೈಕ್ಷಣಿಕ ವರ್ಷದಿಂದ ಹೆಚ್ಚುವರಿ ವಿಷಯಗಳನ್ನು ಕಡ್ಡಾಯವಾಗಿ ಅಧ್ಯಯನ ನಡೆಸಬೇಕು. ಪದವಿ ವಿದ್ಯಾರ್ಥಿಗಳು ಈ ಮೊದಲು ಹೆಚ್ಚುವರಿಯಾಗಿ ಅಧ್ಯಯನ ಮಾಡುತ್ತಿರುವ ವಿಷಯಗಳ ಜೊತೆಗೆ 3ನೇ ಸೆಮಿಷ್ಟರ್ ನಲ್ಲಿ ವಿಜ್ಞಾನ ಮತ್ತು ಸಮಾಜ, ಸಂಸ್ಕೃತಿ ವೈವಿಧ್ಯತೆ ಮತ್ತು ಸಮಾಜ ಎಂಬ ವಿಷಯಗಳನ್ನು ಅಧ್ಯಯನ ಮಾಡಬೇಕು.
ಕಲೆ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಸಮಾಜ ವಿಷಯ ಅಧ್ಯಯನ ಮಾಡಿದರೆ. ವಿಜ್ಞಾನ ವಿಭಾಗದವರು ಸಂಸ್ಕೃತಿ ವೈವಿಧ್ಯತೆ ಮತ್ತು ಸಮಾಜ ವಿಷಯ ಅಧ್ಯಯನ ಮಾಡಬೇಕು. ಕೇವಲ 2ಸೆಮ್ ನಲ್ಲಿ ಮಾತ್ರ ಬೋಧಿಸುತ್ತಿದ್ದ ಕನ್ನಡ ವಿಷಯವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ 4 ಸೆಮ್ ಗಳಲ್ಲಿಯೂ ಕಡ್ಡಾಯಗೊಳಿಸಲು ವಿವಿ ತೀರ್ಮಾನ ಕೈಗೊಂಡಿದೆ ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications