Dengue ಕರ್ನಾಟಕದಲ್ಲಿ ಡೆಂಗ್ಯೂ ಕಂಟ್ರೋಲ್‌ಗೆ ಮುಂಬೈ ಮಾದರಿ ಓವಿ ಟ್ರ್ಯಾಪ್; ಏನಿದು ?
ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೂ, ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿಲ್ಲ. ಡೆಂಗ್ಯೂ ಹಾಗೂ ಝೀಕಾ ವೈರಸ್‌ಗಳ ಹಾವಳಿ ಇಳಿಕೆಯಾಗಿಲ್ಲ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ಸೋಮವಾರದ ವರೆಗೆ 23,839 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದೆ. ಇಲ್ಲಿಯವರೆಗೆ 12 ಜನ ಡೆಂಗ್ಯೂವಿನಿಂದ ಸಾವನ್ನಪ್ಪಿರುವುದು ವರದಿಯಾಗಿದೆ.
ಡೆಂಗ್ಯೂ, ಮಲೇರಿಯಾ, ಝೀಕಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ಸೋಂಕುಗಳ ಸಂಖ್ಯೆ ನಿಯಂತ್ರಣಕ್ಕೆ ಬಾರುತ್ತಿಲ್ಲ. ಹೀಗಾಗಿ, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಯಲು ರಾಜ್ಯ ಆರೋಗ್ಯ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಜಂಟಿಯಾಗಿ ಸೊಳ್ಳೆಗಳ "ಬಯೋ ಟ್ರ್ಯಾಪ್"ಗೆ ಮುಂದಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲೇ ಸಿಂಹಪಾಲು
ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿಲ್ಲ. ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ) ಡೆಂಗ್ಯೂ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿರುವುದು ವರದಿಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಇಲ್ಲಿಯವರೆ 3 ಜನ ಡೆಂಗ್ಯೂ ಸೋಂಕಿನಿಂದ ಸಾವನ್ನಪ್ಪಿರುವುದು ವರದಿಯಾಗಿದೆ.
ಏನಿದು ಬಯೋ ಟ್ರ್ಯಾಪ್ ಸಾಧನ
ಸೊಳ್ಳೆಗಳ ನಿಯಂತ್ರಣಕ್ಕೆ ಸಾಮಾನ್ಯವಾಗಿ ಫಾಗಿಂಗ್, ಸೊಳ್ಳೆಗಳ ಸಂತತಿ ನಾಶ ಮಾಡುವುದು ಹಾಗೂ ಅಲ್ಲಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ಹಾಗೂ ಜಾಗೃತಿಯನ್ನು ರಾಜ್ಯ ಆರೋಗ್ಯ ಇಲಾಖೆ ಮಾಡುತ್ತಿದೆ. ಈ ಪ್ರಯೋಗಗಳನ್ನು ಮಾಡಿದ ನಂತರವೂ ರಾಜ್ಯದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಮಿಕ ರೋಗಗಳು ಹಾಗೂ ಡೆಂಗ್ಯೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ, ಇದೀಗ ಆರೋಗ್ಯ ಇಲಾಖೆಯು ಸೊಳ್ಳೆಗಳ ಬಯೋ ಟ್ರಾಫ್ ಗೆ (ಸೊಳ್ಳೆಗಳನ್ನು ಸೆರೆಹಿಡಿಯುವ ಸಾಧನ) ಮೊರೆ ಹೋಗಿದೆ. ಬಯೋ ಟ್ರ್ಯಾಪ್ ಎನ್ನುವುದು ಮಡಿಕೆಯಾಕಾರದ ಸಾಧನವಾಗಿದ್ದು, ಮಡಿಕೆಯಾಕಾರದ ಕುಂಡದಲ್ಲಿ ನೀರು ತುಂಬಿ, ರಾಸಾಯನಿಕವನ್ನು ಬೆರಸಲಾಗುತ್ತದೆ. ಈ ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನು ಈ ನಿರ್ದಷ್ಟ ಸಾಧನ ಒಳಗೆ ಆಕರ್ಷಿಸಿ ಸಾಯಿಸುತ್ತದೆ. ಅಲ್ಲದೇ ಈಡಿಸ್ ಸೊಳ್ಳೆಗಳು ಹಾಗೂ ಅದರ ಸೊಳ್ಳೆಗಳ ಮೊಟ್ಟೆಗಳನ್ನು ನಾಶಪಡಿಸುತ್ತದೆ. ಈ ಬಯೋ ಟ್ರ್ಯಾಪ್ ಸಾಧನದಿಂದಾಗಿ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಿಸಲು ಸಾಧ್ಯವಿದೆ.

ಬೆಂಗಳೂರಿನಲ್ಲಿ ಪ್ರಯೋಗಿಕ ಬಳಕೆ
ಬೆಂಗಳೂರಿನಲ್ಲಿ ಪ್ರಯೋಗಿಕವಾಗಿ 120 ಓವಿ ಟ್ರ್ಯಾಪ್ ಎನ್ನುವ ಸಾಧನಗಳನ್ನು ಅಳವಡಿಸಲಾಗಿದೆ. ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ವಿಭಿನ್ನ ಪ್ರಯತ್ನಕ್ಕೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಮುಂದಾಗಿದೆ. ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್ ಸಾಧನಗಳನ್ನು ಬೆಂಗಳೂರಿನ ಗೋಪಾಲಪುರದಲ್ಲಿ ಅಳವಡಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನು ಸೊಳ್ಳೆಗಳ ಹಾವಳಿ ಹೆಚ್ಚಾಗಿ ಇರುವಂತಹ ಮನೆಗಳಿಗೆ ಅಳವಡಿಸಲಾಗಿದೆ.
ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನು ಆಕರ್ಷಿಸುವ ಮೂಲಕ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯು ಸೊಳ್ಳೆಗಳು ಹೆಚ್ಚಾಗಿರುವ ಕಡೆ ಈ ಸಾಧನಗಳನ್ನು ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ಯೋಜನೆ ರೂಪಿಸಲಾಗಿದೆ.
ಮುಂಬೈ ಮಾದರಿಯಲ್ಲಿ ಪ್ರಯೋಗ
ಸೊಳ್ಳೆಗಳ ನಿಯಂತ್ರಣಕ್ಕೆ ಮುಂಬೈ ಮಾದರಿಯಲ್ಲಿ ಓವಿ ಟ್ರ್ಯಾಪ್ ಗಳನ್ನು ಬಳಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನು ಪ್ರಾಯೋಗಿಕವಾಗಿ ನಾವು ಬಳಸಲಾಗುತ್ತಿದೆ. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಸಾಧ್ಯವಾಗಲಿದೆ. ಆದರೆ, ಇದೇ ಸಂದರ್ಭದಲ್ಲಿ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ಕಂಟ್ರೋಲ್ ಮಾಡಲು ಸಾಧ್ಯವಿದೆ. ಮಹಾರಾಷ್ಟ್ರದ ಮುಂಬೈನ ಧಾರವಿ ಸ್ಲಂ ಪ್ರದೇಶದಲ್ಲೂ ಈ ಪ್ರಯೋಗ ನಡೆದಿದೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ಸಿಕ್ಕರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನು ಅಳವಡಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications