ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗ್ಗೆ ಏಳುವಾಗ ಸಂಜೆ ಮಲಗುವ ಮುನ್ನ ಇವರ ಮುಖ ನೋಡಬೇಕಿತ್ತು!

|
Google Oneindia Kannada News

ಬೆಂಗಳೂರು, ಅ. 27: ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಮತ್ತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹರಿಹಾಯ್ದಿದ್ದಾರೆ. ಮೈತ್ರಿ ಸರ್ಕಾರ ಉರುಳಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಕಾರಣ ಎಂದು ದೇವೇಗೌಡರು ಆರೋಪಿಸಿದ್ದಾರೆ. ಆದರೆ ದೇವೇಗೌಡರ ಆರೋಪಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮದೆ ದಾಟಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಏನಾಗಿತ್ತು? ಆಮೇಲೆ ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಏನಾಯ್ತು ಎಂಬುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದವರು ಸಿದ್ದರಾಮಯ್ಯ ಆಪ್ತರು ಎಂಬ ಆರೋಪದ ಬಗ್ಗೆಯೂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರ ಆರೋಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರ್ ಆರ್ ನಗರದ ಚುನಾವಣಾ ಪ್ರಚಾರದಲ್ಲಿ ಕೊಟ್ಟಿರುವ ಉತ್ತರ ಹೀಗಿದೆ!

ಮುನಿರತ್ನಗೆ ಪಾಠ ಕಲಿಸಿ

ಮುನಿರತ್ನಗೆ ಪಾಠ ಕಲಿಸಿ

ಪಕ್ಷಕ್ಕೆ ದ್ರೋಹವೆಸಗಿ, ಮತದಾರರ ಬೆನ್ನಿಗೆ ಚೂರಿ ಹಾಕಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಮಾನ್ಪಡೆ ಸಾವಿಗೆ ನಾವು ಕಾರಣರಾಗಿದ್ದರೆ, ಒಂದೂ ಕಾಲು ಲಕ್ಷ ಜನ ಸತ್ತರಲ್ಲ ಅದಕ್ಕೆ ಯಾರು ಹೊಣೆ?ಮಾನ್ಪಡೆ ಸಾವಿಗೆ ನಾವು ಕಾರಣರಾಗಿದ್ದರೆ, ಒಂದೂ ಕಾಲು ಲಕ್ಷ ಜನ ಸತ್ತರಲ್ಲ ಅದಕ್ಕೆ ಯಾರು ಹೊಣೆ?

ಕ್ಷೇತ್ರದ ವಿವಿಧ ಕಡೆಗಳಲ್ಲಿ ಇಂದು ರೋಡ್ ಶೋ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚಿಸಿದ ಸಿದ್ದರಾಮಯ್ಯ ಅವರು, ಈ ಕ್ಷೇತ್ರಕ್ಕೆ ಕ್ರಿಮಿನಲ್ ಹಿನ್ನೆಲೆಯುಳ್ಳವರು ಶಾಸಕರಾಗಬೇಕೋ ಅಥವಾ ಶುದ್ಧ ಹಸ್ತದ ಸುಸಂಸ್ಕೃತ ಹೆಣ್ಣು ಮಗಳು ಇಲ್ಲಿಂದ ವಿಧಾನಸಭೆಗೆ ಹೋಗಬೇಕೋ ಎಂಬುದನ್ನು ಮತದಾರರೇ ನಿರ್ಧರಿಸಬೇಕು ಎಂದರು.

ಏಳುವಾಗ, ಮಲಗುವ ಮುನ್ನ ಇವರ ಮುಖ

ಏಳುವಾಗ, ಮಲಗುವ ಮುನ್ನ ಇವರ ಮುಖ

ನಾನು ಮುಖ್ಯಮಂತ್ರಿಯಾಗಿದ್ದಾಗ ಮುನಿರತ್ನ, ಎಂಟಿಬಿ ನಾಗರಾಜ್, ಬೈರತಿ ಬಸವರಾಜು ಹಾಗೂ ಎಸ್.ಟಿ. ಸೋಮಶೇಖರ್ ಅವರು ದಿನ ಬೆಳಗಾದರೆ ಮನೆಗೆ ಬರುತ್ತಿದ್ದರು. ಬೆಳಗ್ಗೆ ಏಳುವಾಗ ಸಂಜೆ ಮಲಗುವ ಮುನ್ನ ಇವರ ಮುಖ ನೋಡಬೇಕಿತ್ತು ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.

ಈ ಎಲ್ಲರೂ ಯಾರಿಗೂ ಹೇಳದೇ 25-30 ಕೋಟಿ ಪಡೆದುಕೊಂಡು ಬಿಜೆಪಿಗೆ ಹೋದರು. ಕೊನೆಗೆ ಅಪವಾದವನ್ನು ನಾನು ಹೊತ್ತುಕೊಳ್ಳಬೇಕಾಯಿತು. ಇವರಿಂದಾಗಿ ನನಗೆ ಕೆಟ್ಟ ಹೆಸರು ಬಂತು ಎಂದರು.

ಮೊದಲೇ ಗೊತ್ತಿದ್ದರೆ ಟಿಕೆಟ್ ಕೊಡುತ್ತಿರಲಿಲ್ಲ

ಮೊದಲೇ ಗೊತ್ತಿದ್ದರೆ ಟಿಕೆಟ್ ಕೊಡುತ್ತಿರಲಿಲ್ಲ

ಮುನಿರತ್ನ ಅವರಿಗೆ ಕಾಂಗ್ರೆಸ್ ಪಕ್ಷ ಎರಡು ಬಾರಿ ಟಿಕೆಟ್ ನೀಡಿ ಶಾಸಕರನ್ನಾಗಿ ಮಾಡಿತು. ಅವರು ಈ ರೀತಿ ಪಕ್ಷಕ್ಕೆ ದ್ರೋಹ ಬಗೆಯುತ್ತಾರೆ ಎಂದು ಮೊದಲೇ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ. ಕ್ರಿಮಿನಲ್ ಚಟುವಟಿಕೆಗಳಿಗೆ ಮುನಿರತ್ನ ಹೆಸರುವಾಸಿ ಎಂದು ಹೇಳುತ್ತಾರೆ. ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರ ಶಾಂತಿಯುತವಾಗಿರಬೇಕು ಎಂದಾದರೆ ಕುಸುಮಾ ಅವರಿಗೆ ಮತದಾರರು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ಸಿನ ಸಿಎಂ ಅಭ್ಯರ್ಥಿ ಯಾರು: ಡಿಕೆಶಿ ವಿರುದ್ದ ಮುನಿರತ್ನ ಸಿಡಿಸಿದ ಹೊಸ ಬಾಂಬ್ಕಾಂಗ್ರೆಸ್ಸಿನ ಸಿಎಂ ಅಭ್ಯರ್ಥಿ ಯಾರು: ಡಿಕೆಶಿ ವಿರುದ್ದ ಮುನಿರತ್ನ ಸಿಡಿಸಿದ ಹೊಸ ಬಾಂಬ್

Recommended Video

Australia ಸರಣಿಗೆ RCBಇಂದ ಆಯ್ಕೆಯಾದ ಆಟಗಾರರು ಯಾರು | Oneindia Kannada
ನಾನು ಕೊಟ್ಟಿರುವ ಅನುದಾನ

ನಾನು ಕೊಟ್ಟಿರುವ ಅನುದಾನ

ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕ್ಷೇತ್ರಕ್ಕೆ ಎರಡು ಸಾವಿರ ಕೋಟಿ ರೂ. ಗಳಿಗೂ ಹೆಚ್ಚಿನ ಅನುದಾನ ಮಂಜೂರಾಗಿದೆ. ಅನುದಾನ ಪಡೆದುಕೊಳ್ಳಲು ಮುನಿರತ್ನ, ಬೈರತಿ ಬಸವರಾಜು ಹಾಗೂ ಸೋಮಶೇಖರ್ ಅವರ ನಡುವೆ ಭಾರಿ ಪೈಪೋಟಿ ನಡೆಯುತ್ತಿತ್ತು. ಕ್ಷೇತ್ರದಲ್ಲಿ ಇಂದು ಏನಾದರೂ ಅಭಿವೃದ್ಧಿ ನಡೆದಿದ್ದರೆ ಅದು ನಮ್ಮ ಸರ್ಕಾರ ನೀಡಿದ ಅನುದಾನದಿಂದ. ನಾನೇನೂ ನನ್ನ ಮನೆಯಿಂದ ಹಣ ತಂದು ಕೊಟ್ಟಿರಲಿಲ್ಲ. ಈ ಕುರಿತು ನಾನು ಜೆಡಿಎಸ್ ಮತ್ತು ಬಿಜೆಪಿ ಜೊತೆಗೆ ಚರ್ಚೆಗೂ ಸಿದ್ಧ ಎಂದು ಸವಾಲು ಹಾಕಿದರು.

English summary
Opposition leader of the assembly Siddaramaiah has appealed to the voters of Rajarajeshwari assembly constituency to vote congress candidate Kusuma H. Siddaramaiah campaigned in RR Nagara today. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X