BJP MLA Munirathna: ಮುನಿರತ್ನ ವಿರುದ್ಧ ಇನ್ನೊಬ್ಬ ಮಹಿಳೆಯಿಂದ ಅತ್ಯಾಚಾರದ ಆರೋಪ
ಬೆಂಗಳೂರು ಸೆಪ್ಟೆಂಬರ್ 20: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದ ಬೆನ್ನಲ್ಲೆ ರಾಮನಗರ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಮುನಿರತ್ನ ವಿರುದ್ಧ ಮತ್ತೊಬ್ಬ ಮಹಿಳೆ ಅತ್ಯಾಚಾರದ ಆರೋಪ ಮಾಡಿದ್ದಾರೆ.
ಹೌದು.. ಗುತ್ತಿಗೆದಾರನಿಗೆ ಬೆದರಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮುನಿರತ್ನ ಅವರನ್ನು ಕಗ್ಗಲೀಪುರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಪೊಲೀಸರು ಅವರ ವಿರುದ್ಧ ಇರುವ ಅತ್ಯಾಚಾರ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣದ ವಿಚಾರಣೆ ಮಾಡಲಿದ್ದಾರೆ. ಎಚ್‌ಐವಿ ಪಾಸಿಟಿವ್ ಸಂತ್ರಸ್ತೆಯನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದಾರೆನ್ನುವ ಆರೋಪ ಕೂಡ ಇವರ ಮೇಲಿದೆ. ಅಲ್ಲದೆ ಇನ್ನೊಬ್ಬ ಮಹಿಳೆ ಕೂಡ ಮುನಿರತ್ನ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದಾರೆ.

ಈಗಾಗಲೇ ಈ ಸಂಬಂಧ ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.
ಸಮಾಜ ಸೇವಕಿಯಾಗಿ ಗುರುತಿಸಿಕೊಂಡಿರುವ, ಬಿಜೆಪಿಯಲ್ಲೂ ಸಕ್ರಿಯವಾಗಿರುವ ತನ್ನ ಮೇಲೆ 2020ರಿಂದ 2022ರವರೆಗೆ ಅತ್ಯಾಚಾರ ನಡೆಸಿ ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಕುರಿತು ದೂರು ನೀಡಿದ್ದಾರೆ. ದೂರು ಪರಿಶೀಲಿಸಿದ ನಂತರ ಠಾನೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಿವೈಎಸ್ ದಿನಕರ ಶೆಟ್ಟಿ ನೇತೃತ್ವದಲ್ಲಿ ಜೆ.ಪಿ ಪಾರ್ಕ್ ಬಳಿಯ ಗೋಡೌನ್‌ನಲ್ಲಿ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಲಾಗಿದೆ.
ಸಂತ್ರಸ್ತೆ ದೂರಿನಲ್ಲಿ ಏನಿದೆ?
ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸಿದ್ದೆ. ಒಮ್ಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು.ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿದ್ದರು. ಬಳಿಕ ಅತ್ಯಾಚಾರವೆಸಗಿದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಿಸಿಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದರು. ವಿಡಿಯೋ ಇಟ್ಟುಕೊಂಡು ಹಲವು ಬಾರಿ ಮುನಿರತ್ನ ಅತ್ಯಾಚಾರವೆಸಗಿರುವುದಾಗಿ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಹೀಗೆ ಸಾಲು ಸಾಲು ಆರೋಪಗಳು ಮುನಿರತ್ನ ಮೇಲೆ ಕೇಳಿ ಬಂದಿವೆ. ಇದೆಲ್ಲದರ ವಿಚಾರಣೆಗೆ ಪೊಲೀಸರು ಮುನಿರತ್ನ ಅವರನ್ನು ಮತ್ತೆ ಬಂಧಿಸಿದ್ದಾರೆ. ಹೀಗಾಗಿ ಬಿಜೆಪಿ ಶಾಸಕರಿಗೆ ಕಾನೂನು ಕಗ್ಗಂಟು ಬಿಗಿಯಾಗಿದ್ದು ವಿಚಾರಣೆ ವೇಳೆ ಯಾವೆಲ್ಲಾ ಸತ್ಯಾಂಶಗಳು ಹೊರಬರಲಿವೆ ಎನ್ನುವುದನ್ನು ಕಾದು ನೋಡಬೇಕಿದೆ.












Click it and Unblock the Notifications