ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್. ಆರ್. ನಗರ ಉಪ ಚುನಾವಣೆ; ಕಣದಲ್ಲಿ ಇಬ್ಬರು ಮುನಿರತ್ನ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 18 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಮುನಿರತ್ನ ಹೆಸರಿನ ಇಬ್ಬರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, 10ರಂದು ಫಲಿತಾಂಶ ಪ್ರಕಟವಾಗಲಿದೆ.

ಆರ್. ಆರ್. ನಗರ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ. ಪಕ್ಷೇತರ ಅಭ್ಯರ್ಥಿಯೊಬ್ಬರು ನಾಮಪತ್ರ ಸಲ್ಲಿಸಿದ್ದು, ಅವರ ಹೆಸರು ಹೆಸರು ಸಹ ಮುನಿರತ್ನ ಆಗಿದೆ. ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿದ್ದಾರೆ.

ಆರ್. ಆರ್. ನಗರ ಉಪ ಚುನಾವಣೆ ಚಿತ್ರಣ; ಗೆಲುವಿಗಾಗಿ ಪಕ್ಷಗಳ ಕಸರತ್ತು! ಆರ್. ಆರ್. ನಗರ ಉಪ ಚುನಾವಣೆ ಚಿತ್ರಣ; ಗೆಲುವಿಗಾಗಿ ಪಕ್ಷಗಳ ಕಸರತ್ತು!

ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 16 ಕೊನೆಯ ದಿನವಾಗಿತ್ತು. ಅಕ್ಟೋಬರ್ 19ರಂದು ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 3ರಂದು ಮತದಾನ ನಡೆಯಲಿದೆ.

ಆರ್. ಆರ್. ನಗರ ಉಪ ಚುನಾವಣೆ; ಡಿಕೆಶಿ ತುರ್ತು ಸುದ್ದಿಗೋಷ್ಠಿ ಆರ್. ಆರ್. ನಗರ ಉಪ ಚುನಾವಣೆ; ಡಿಕೆಶಿ ತುರ್ತು ಸುದ್ದಿಗೋಷ್ಠಿ

vote

ಆರ್. ಆರ್. ನಗರ ಉಪ ಚುನಾವಣೆಗೆ ಪ್ರಮುಖ ಪಕ್ಷವಾದ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್‌ನಿಂದ ಹೆಚ್. ಕುಸುಮಾ, ಜೆಡಿಎಸ್‌ನಿಂದ ಪಿ. ಕೃಷ್ಣಮೂರ್ತಿ ಅಭ್ಯರ್ಥಿಗಳು.

ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನಗೆ ಬಿಜೆಪಿ ಟಿಕೆಟ್ ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನಗೆ ಬಿಜೆಪಿ ಟಿಕೆಟ್

ಕರುನಾಡು ಪಕ್ಷದಿಂದ ಎಚ್. ಎಂ.ಕಿಶೋರ್ ಗೌಡ, ಕರ್ನಾಟಕ ರಾಷ್ಟ್ರ ಸಮಿತಿಯಿಂದ ಅರವಿಂದ, ಆನ್ ಇಂಡಿಯಾ ಜನರಕ್ಷಾ ಪಕ್ಷದಿಂದ ಸತೀಶ್ ರೆಡ್ಡಿ, ಜೈ ವಿಜಯಭಾರತಿ ಪಕ್ಷದಿಂದ ಅಭಿಮಾನಿ ನರೇಂದ್ರ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದಿಂದ ಶಿವಲಿಂಗಯ್ಯ ಸಿ., ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದಿಂದ ಎನ್. ಸಂಪತ್ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಒಟ್ಟು 13 ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇವರಲ್ಲಿ ಮುನಿರತ್ನ ಸಹ ಒಬ್ಬರು.

English summary
Muniratna name two candidates filed nomination for the Rajarajeshwari Nagar by election. BJP candidate name Muniratna and independent candidate name also same. Election will be held on November 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X