ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುನಿರತ್ನ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ:ಸ್ಪಷ್ಟನೆ

By Nayana
|
Google Oneindia Kannada News

ಬೆಂಗಳೂರು, ಮೇ 22: ಕಾಂಗ್ರೆಸ್‌ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದಮೇಲೆ, ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಡಿಎಸ್ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಬಿಎಂಪಿ ಸದಸ್ಯ ವೇಲುನಾಯ್ಕ ಆರೋಪಿಸಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರಕ್ಕೆ ಮೇ 28ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಆರ್ಆರ್‌ನಗರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದಾರೆ.

ಆರ್‌.ಆರ್.ನಗರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ, ಮುನಿರತ್ನ ಎಂಎಲ್‌ಸಿ?ಆರ್‌.ಆರ್.ನಗರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ, ಮುನಿರತ್ನ ಎಂಎಲ್‌ಸಿ?

ಕೆಲವು ದಿನಗಳ ಹಿಂದೆ ರಾರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಾಲಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಅಕ್ರಮ ಮತದಾರ ಚೀಟಿ ವಶಪಡಿಸಿಕೊಳ್ಳಲಾಗಿತ್ತು. ಈ ಮಧ್ಯೆ ಬಿಜೆಪಿ ಮತ್ತೆ ಕಾಂಗ್ರೆಸ್‌ ಅಭ್ಯರ್ಥಿಗಳು ಆರೋಪ, ಪ್ರತ್ಯಾರೋಪ ಮಾಡಿಕೊಂಡಿದ್ದರು.

Muniratna will not back foot from Fray

ಈ ಮಧ್ಯೆ ಮೇ 12ರಂದು ನಡೆಯಬೇಕಿದ್ದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರ ಚುನಾವಣೆಯನ್ನು ಮುಂದೂಡಲಾಗಿತ್ತು. ಇದೀಗ ಮೇ 28ರಂದು ಚುನಾವಣೆ ನಡೆಯಲಿದೆ. ಇದರ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುತ್ತಾರೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ.

ಅದೆಲ್ಲಾ ಸತ್ಯಕ್ಕೆ ದೂರವಾದ ವಿಚಾರ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಅವರು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಮೈತ್ರಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಇದು ಸುಳ್ಳು ಎಂದು ವೇಲುನಾಯ್ಕ ಸ್ಪಷ್ಟಪಡಿಸಿದ್ದಾರೆ.

English summary
Congress candidate in Rajarajeshwari Nagar, Munirathna will be in fray as some JDS leaders have misleading voters, clarified Congress BBMP corporator Velu Naikar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X