ಹಾಡಹಗಲೇ ಬೆಂಗಳೂರಿನ ಫೀನಿಕ್ಸ್ ಮಾಲ್ ಬಳಿ ವ್ಯಕ್ತಿಯ ಬರ್ಬರ ಕೊಲೆ
ಬೆಂಗಳೂರು, ಅಕ್ಟೋಬರ್ 25: ಬೆಂಗಳೂರಿನ ಫೀನಕ್ಸ್ ಮಾಲ್ ಎದುರು ವ್ಯಕ್ತಿಯ ಬರ್ಬರ ಹತ್ಯೆ ನಡೆದಿದೆ.
ಪಾದಚಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಮೂವರು ದ್ವಿಚಕ್ರ ವಾಹನದಲ್ಲಿ ಬಂದು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಹದೇವಪುರದ ಮುಖ್ಯರಸ್ತೆಯಲ್ಲಿರುವ ಫಿನಿಕ್ಸ್ ಮಾಲ್ ಬಳಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಮಹದೇವಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೈಕಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮೃತ ವ್ಯಕ್ತಿ ಯಾರು ಎನ್ನುವ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ, ಯಾವ ದ್ವೇಷಕ್ಕೆ ಈ ಕೊಲೆ ನಡೆದಿದೆ, ಕೊಲೆ ಮಾಡಿದವರು ಯಾರು, ವ್ಯಕ್ತಿಗೂ ಕೊಲೆಗೂ ಏನು ಸಂಬಂಧ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ವ್ಯಕ್ತಿಯ ದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಸಾಗಿಸಲಾಗಿದೆ.












Click it and Unblock the Notifications