ಜನವರಿ 22ಕ್ಕೆ ಬೆಂಗಳೂರು ಬಂದ್; ಬೇಡಿಕೆಗಳು
ಬೆಂಗಳೂರು, ಜನವರಿ 20: ಜನವರಿ 22ರ ಶುಕ್ರವಾರ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಬಂದ್‌ಗೆ 22ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದೆ. "ಶಾಂತಿಯುತವಾಗಿ ಬಂದ್ ನಡೆಯಲಿದೆ" ಎಂದು ಸಂಘಟನೆಗಳ ಒಕ್ಕೂಟದ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಹೇಳಿದ್ದಾರೆ.
ಯಾವುದೇ ರೀತಿಯಲ್ಲಿ ಗುಂಪುಗೂಡಿ ಪ್ರತಿಭಟನೆ ನಡೆಸುವುದಿಲ್ಲ. ಸ್ವಯಂ ಪ್ರೇರಿತವಾಗಿ ಬೆಂಗಳೂರಿನಲ್ಲಿ ಇರುವ ಮುಸ್ಲಿಂಮರು ಉದ್ಯಮಗಳನ್ನು ಬಂದ್ ಮಾಡಿ ಮನೆಯಲ್ಲಿ ಇರಲಿದ್ದಾರೆ. ಬೆಳಗ್ಗೆಯಿಂದ ಸಂಜೆ 5 ಗಂಟೆ ತನಕ ವ್ಯಾಪಾರ ಬಂದ್ ಮಾಡಲಿದ್ದಾರೆ.

ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಬಂದ್‌ಗೆ 22ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲವನ್ನು ಘೋಷಣೆ ಮಾಡಿವೆ.
ಬೇಡಿಕೆಗಳು
* ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂಬಂಧ ಬಂಧನಕ್ಕೆ ಒಳಗಾಗಿರುವ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು.
* ಲವ್ ಜಿಹಾದ್ ವಿರುದ್ಧ ಮತ್ತು ಕೃಷಿ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು
* ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಬಂಧಿಸಲಾಗಿರುವ ಎಸ್‌ಡಿಪಿಐ ಮುಖಂಡ ಮುಜಾಮ್ಮಿಲ್ ಪಾಷಾ ಸೇರಿದಂತೆ 421 ಜನರನ್ನು ಬಿಡುಗಡೆ ಮಾಡಬೇಕು.
* ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಬೇಕು.












Click it and Unblock the Notifications