ಅಖಂಡ ಶ್ರೀನಿವಾಸಮೂರ್ತಿ ಭೇಟಿಯಾದ ಮುಸ್ಲಿಂ ಮುಖಂಡರು

ಬೆಂಗಳೂರು, ಆಗಸ್ಟ್ 14 : ಮಂಗಳವಾರ ಗಲಭೆ ನಡೆದ ಡಿ. ಜೆ. ಹಳ್ಳಿ, ಕೆ. ಜಿ. ಹಳ್ಳಿ, ಕಾವಲ್ ಭೈರಸಂದ್ರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಸ್ಲಿಂ ಸಮುದಾಯದ ಮುಖಂಡರು ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭೇಟಿ ಮಾಡಿದರು.

Recommended Video

      ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್ 74 ನೇ ಸ್ವಾತಂತ್ರ್ಯ ದಿನದಂದು ಸಶಸ್ತ್ರ ಪಡೆಗಳಿಗೆ ಗೌರವ. | Oneindia Kannada

      ಶುಕ್ರವಾರ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಜೊತೆಗೆ ಮುಸ್ಲಿಂ ಸಮುದಾಯದ ಮುಖಂಡರು ಅಖಂಡ ಶ್ರೀನಿವಾಸಮೂರ್ತಿ ಭೇಟಿ ಮಾಡಿದರು. ಗಲಭೆ ವೇಳೆ ಸುಟ್ಟು ಹೋಗಿರುವ ಶಾಸಕರ ಮನೆಯನ್ನು ವೀಕ್ಷಣೆ ಮಾಡಿದರು.

      ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

      Muslims Leaders Meets Akhanda Srinivas Murthy

      ಮನೆ ವೀಕ್ಷಿಸಿದ ಬಳಿಕ ಮಾತನಾಡಿದ ಮೌಲಾನ ಸಗೀರ್ ಅಹ್ಮದ್ ಖಾನ್, "ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ. ಸಂಕಷ್ಟದ ಸಮಯದಲ್ಲಿ ನಾವು ನಿಮ್ಮ ಜೊತೆ ಇರುತ್ತೇವೆ" ಎಂದು ಹೇಳಿದರು.

      "ಪ್ರವಾದಿಗಳ ಬಗ್ಗೆ ನಿಂದನೆ ಮಾಡಿದ್ದು ಬೇರಸ ತರಿಸಿದೆ. ಅದೇ ರೀತಿ ಕಾನೂನು ಕೈಗೆ ತೆಗೆದುಕೊಂಡು ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ್ದನ್ನು ಸಹ ನಾವು ಖಂಡಿಸುತ್ತೇವೆ. ಇಸ್ಲಾಂ ಧರ್ಮ ಇಂತಹ ಕೃತ್ಯಗಳಿಗೆ ಪ್ರಚೋದನೆ ನೀಡುವುದಿಲ್ಲ" ಎಂದರು.

      Muslims Leaders Meets Akhanda Srinivas Murthy

      "ಅಖಂಡ ಶ್ರೀನಿವಾಸಮೂರ್ತಿ ಅವರು ಮನೆಯನ್ನು ಕಳೆದುಕೊಂಡಿದ್ದಾರೆ. ನಾವು ಎಲ್ಲರೂ ಸೇರಿ ಅವರ ಮನೆಯನ್ನು ನಿರ್ಮಿಸಿಕೊಡುತ್ತೇವೆ" ಎಂದು ಭರವಸೆ ನೀಡಿದರು.

      ಅಖಂಡ ಶ್ರೀನಿವಾಸಮೂರ್ತಿ ಅವರು ಮಾತನಾಡಿ, "ಮನೆಯನ್ನು ನಾನೇ ನಿರ್ಮಿಸಿಕೊಳ್ಳುತ್ತೇನೆ. ಗುರುಗಳ ಆಶೀರ್ವಾದ ಸದಾ ನನ್ನ ಮೇಲಿರಲಿ. ಮನೆಗೆ ಬಂದು ಧೈರ್ಯ ತುಂಬಿದ್ದಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದು ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+