ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುತ್ತಪ್ಪ ರೈ ನಿಧನ; ಅಭಿಮಾನಿಗಳಿಗೊಂದು ಮನವಿ

|
Google Oneindia Kannada News

ಬೆಂಗಳೂರು, ಮೇ 15 : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಶುಕ್ರವಾರ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Recommended Video

Muthappa Rai No More | ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಮಾಜಿ ಭೂಗತ ದೊರೆ ಮುತ್ತಪ್ಪ ರೈ.

ಮುತ್ತಪ್ಪ ರೈ (68) ಅವರಿಗೆ ಬೆಂಗಳೂರು, ದೇಶ, ವಿದೇಶದಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ಸಾವಿಗೆ ಹಲವು ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ರಾಮನಗರ ತಾಲೂಕಿನ ಬಿಡದಿಯಲ್ಲಿ ಮತ್ತಪ್ಪ ರೈ ಅಂತ್ಯ ಸಂಸ್ಕಾರ ನಡೆಯಲಿದೆ.

ಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಮುತ್ತಪ್ಪ ರೈ ನಿಧನಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಮುತ್ತಪ್ಪ ರೈ ನಿಧನ

ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಬಿ. ಎನ್.ಜಗದೀಶ್ ಮುತ್ತಪ್ಪ ರೈ ಸಾವಿಗೆ ಕಂಬನಿ ಮಿಡಿದಿದ್ದಾರೆ. ಅವರ ಅಭಿಮಾನಿಗಳಿಗೆ ಮನವಿಯೊಂದನ್ನು ಸಹ ಮಾಡಿದ್ದಾರೆ. "ಮುತ್ತಪ್ಪ ರೈ ಅವರ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಅವರ ಅಗಲಿಕೆ ನಮ್ಮೆಲ್ಲರಿಗೂ ತುಂಬಲಾರದ ನಷ್ಟ" ಎಂದು ಹೇಳಿದ್ದಾರೆ.

ಕ್ಯಾನ್ಸರಿಗೆ ಬಲಿಯಾದ ಮುತ್ತಪ್ಪಣ್ಣ, ಕಂಬನಿ ಮಿಡಿದ ಬಂಟರು ಕ್ಯಾನ್ಸರಿಗೆ ಬಲಿಯಾದ ಮುತ್ತಪ್ಪಣ್ಣ, ಕಂಬನಿ ಮಿಡಿದ ಬಂಟರು

Muthappa Rai No More Appeal To Fans

"ಕ್ಯಾನ್ಸರ್ ರೋಗವನ್ನೂ ಸಹ ತಮ್ಮ ಹೋರಾಟದ ಮೂಲಕವೇ ಮುತ್ತಪ್ಪರೈ ಎದುರಿಸಿದರು. ಅವರ ಬೆಂಬಲಿಗರು, ಅಭಿಮಾನಿಗಳಲ್ಲಿಯೂ ಕ್ಯಾನ್ಸರ್ ಬಗ್ಗೆ ಅರಿವು‌ ಮೂಡಿಸಿದ್ದರು" ಎಂದು ಜಗದೀಶ್ ನೆನಪು ಮಾಡಿಕೊಂಡಿದ್ದಾರೆ.

ಮುತ್ತಪ್ಪ ರೈ ವಿರುದ್ಧ ಆಪ್ತನಿಂದ ಸಿಸಿಬಿಗೆ ಕೊಲೆ ಬೆದರಿಕೆ ದೂರುಮುತ್ತಪ್ಪ ರೈ ವಿರುದ್ಧ ಆಪ್ತನಿಂದ ಸಿಸಿಬಿಗೆ ಕೊಲೆ ಬೆದರಿಕೆ ದೂರು

"ಲಾಕ್ ಡೌನ್ ಸಂದರ್ಭದಲ್ಲಿ ನಾನು ಸತ್ತರೂ ಹೆಚ್ಚು ಜನ ಸೇರಿ ತೊಂದರೆ ಮಾಡಬೇಡಿ ಎಂದು ಹೇಳಿದ್ದರು. ಕಾರ್ಯಕರ್ತರು, ಅಭಿಮಾನಿಗಳಲ್ಲಿ‌ ನಾನು ಮನವಿ ಮಾಡುತ್ತೇನೆ. ಎಲ್ಲೆಲ್ಲಿ‌ ಇದ್ದೀರೋ ಅಲ್ಲಿಂದಲೇ ಶ್ರದ್ಧಾಂಜಲಿ ಅರ್ಪಿಸಿ. ಸರ್ಕಾರದ ನಿಯಮಗಳನ್ನ‌ ದಯವಿಟ್ಟು ಪಾಲಿಸಿ" ಎಂದು ಮನವಿ ಮಾಡಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ತಮಗೆ ಕ್ಯಾನ್ಸರ್ ಇದೇ ಎಂದು ಹೇಳಿದ್ದ ಮುತ್ತಪ್ಪ ರೈ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

"ಕ್ಯಾನ್ಸರ್ ನನ್ನನ್ನು ಸಾವಿನ ದವಡೆಗೆ ನೂಕಿರುವುದು ನಿಜ. ಪವಾಡ ಸದೃಶ ರೀತಿಯಲ್ಲಿ ಬದುಕುತ್ತಿದ್ದೇನೆ. ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ" ಎಂದು ಜನವರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮುತ್ತಪ್ಪ ರೈ ಹೇಳಿದ್ದರು.

English summary
Former underworld don, Social activist Muthappa Rai (68) died in a private hospital Bengaluru on Friday, May 15, 2020. Here are the appeal to fans by Jaya Karnataka organisation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X