ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುತ್ತುರಾಜ್ ಜಂಕ್ಷನ್ ಕೆಳ ಸೇತುವೆ ಕಾಮಗಾರಿ ಯಾವಾಗ ಪೂರ್ಣ?

|
Google Oneindia Kannada News

ಬೆಂಗಳೂರು, ಜೂನ್ 26: ಮುತ್ತುರಾಜ್ ಜಂಕ್ಷನ್ ಕೆಳಸೇತುವೆ ಕಾಮಗಾರಿ ಜುಲೈ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಭರವಸೆ ನೀಡಿದ್ದಾರೆ.

ನಗರದ ಹೊಸಕೆರೆ ಹಳ್ಳಿ ಜಂಕ್ಷನ್ ಬಳಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿದರು. ಕಾಮಗಾರಿ ವಿಳಂಬದ ಕುರಿತು ಪ್ರಶ್ನಿಸಿದರು.

ಬೆಂಗಳೂರಿನ ಈ ವೃತ್ತಗಳಲ್ಲಿ ಅತಿ ಹೆಚ್ಚು ಮಾಲಿನ್ಯ, ಕಾರಣಗಳೇನು? ಬೆಂಗಳೂರಿನ ಈ ವೃತ್ತಗಳಲ್ಲಿ ಅತಿ ಹೆಚ್ಚು ಮಾಲಿನ್ಯ, ಕಾರಣಗಳೇನು?

ಆ ಜಾಗದಲ್ಲಿ ಕಲ್ಲುಬಂಡೆ ಇದ್ದ ಪರಿಣಾಮ ತೆರವು ಮಾಡುವುದು ತಡವಾಗಿದೆ. ಕಳೆದ ವರ್ಷದಿಂದ ಕಾಮಗಾರಿ ವೇಗ ಪಡೆದಿದ್ದು, ಜುಲೈ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

Muthuraj junction underpass will be completed by July

ಮುತ್ತುರಾಜ ಜಂಕ್ಷನ್ ನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶ ಬಿಬಿಎಂಪಿ ನಗರೋತ್ಥಾನ ಯೋಜನೆಯಡಿ 18.72 ಕೋಟಿ ವೆಚ್ಚದಲ್ಲಿ ಕೆಳ ಸೇತುವೆ ನಿರ್ಮಿಸಲು 2015 ಸೆಪ್ಟೆಂಬರ್ ನಲ್ಲಿ ಚಾಲನೆ ನೀಡಲಾಗಿತ್ತು. 18 ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿತ್ತು.

ಸಂಚಾರ ದಟ್ಟಣೆ ತಗ್ಗಿಸಲು ಬನಶಂಕರಿ ರಿಂಗ್ ರಸ್ತೆ ಮೇಲೆ ಫ್ಲೈಓವರ್? ಸಂಚಾರ ದಟ್ಟಣೆ ತಗ್ಗಿಸಲು ಬನಶಂಕರಿ ರಿಂಗ್ ರಸ್ತೆ ಮೇಲೆ ಫ್ಲೈಓವರ್?

ಆದರೆ ಮೂರು ವರ್ಷಗಳು ಕಳೆಯುತ್ತಿಇದ್ದರೂ ಕಾಮಗಾರಿ ಪೂರ್ಣವಾಗುವ ಲಕ್ಷಣ ಕಾಣುತ್ತಿರಲಿಲ್ಲ. ಸಾರ್ವಜನಿಕರು ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.

ನಾಯಂಡಹಳ್ಳಿಯಿಂದ ಜೆಪಿ ಮರ ಹಾಗೂ ಸಿಲ್ಕ್ ಬೋರ್ಡ್ ಜಂಕ್ಷನ್‌ ಸಿಗ್ನಲ್‌ವರೆಗೆ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ ಭಾಗವಾಗಿ ಈ ಕೆಳಸೇತುವೆ ನಿರ್ಮಿಸಲಾಗುತ್ತಿದೆ. ಶೇ.80 ರಷ್ಟು ಕಾಮಗಾರಿ ಪೂರ್ಣಗೊಂಡಿದೆ.

English summary
BBMP mayor Gangambike Mallikarjun expressed her displeasure for delaying Muthuraj Junction underpass work and she said this work will completed with in August.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X