ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಸಾ.ರಾ. ಮಹೇಶ್ ನಂಥ ತಿಪ್ಪೆ ಗುಂಡಿಗೆ ಕಲ್ಲು ಎಸೆಯಲಾರೆ'

|
Google Oneindia Kannada News

ಬೆಂಗಳೂರು, ಜು. 24: ಮಾಜಿ ಸಚಿವ ಎಚ್. ವಿಶ್ವನಾಥ್ ಅವರನ್ನು ವಿಧಾನ ಪರಿಷತ್‌ಗೆ ಸಾಹಿತ್ಯ ಕ್ಷೇತ್ರದ ಕೋಟಾದಡಿ ನಾಮ ನಿರ್ದೇಶನ ಮಾಡಿರುವುದನ್ನು ಪ್ರಶ್ನೆ ಮಾಡಲಾಗುತ್ತಿದೆ. ಇದೇ ಪ್ರಶ್ನೆಯನ್ನು ಮೈಸೂರಿನಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್ ಎತ್ತಿದ್ದರು. ಅದಕ್ಕೆ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಎಚ್. ವಿಶ್ವನಾಥ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Recommended Video

China launches Mars probe during Pandemic | Oneindia Kannada

ವಿಧಾನಸೌಧದಲ್ಲಿ ಮಾತನಾಡಿರುವ ಮಾಜಿ ಸಚಿವ ಎಚ್. ವಿಶ್ವನಾಥ್ ಅವರು, ನಾನು ವಕೀಲನಾಗಿ ಕೆಲಸ ಮಾಡಿದ್ದೇನೆ. ತೀರ್ಪು ಓದದೆ ಕೆಲವು ಕಾನೂನು ತಜ್ಞರು ಮಾತನಾಡಿದ್ದಾರೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಅವರನ್ನು ಲೇವಡಿ ಮಾಡಿದ್ದಾರೆ. ನನ್ನ ನಾಮನಿರ್ದೇಶನ ಕಾನೂನು ಬದ್ಧವಾಗಿದೆ. ಸಾರಾ ಮಹೇಶ್ ರಾಜ್ಯಪಾಲರಿಗೆ ಮಾತ್ರವಲ್ಲ, ಯಾರಿಗೆ ಬೇಕಿದ್ದರೂ ಪತ್ರ ಬರೆಯಲಿ. ಇದಕ್ಕೂ ನನಗೂ ಸಂಬಂಧ ಇಲ್ಲ ಎಂದಿದ್ದಾರೆ.

ಸರಕಾರ ಇದನ್ನು ನೋಡಿಕೊಳ್ಳುತ್ತದೆ. ಸಾ.ರಾ. ಮಹೇಶ್ ನಂಥ ತಿಪ್ಪೆ ಗುಂಡಿಗೆ ಕಲ್ಲು ಎಸೆದು ನನ್ನ ಬಿಳಿ ಬಟ್ಟೆಯನ್ನು ಕೊಳೆ ಮಾಡಿಕೊಳ್ಳುವುದಿಲ್ಲ. ಎಸ್.ಎಲ್. ಬೈರಪ್ಪ ದೊಡ್ಡ ಸಾಹಿತಿಯೇ. ಅವರಿಗೆ ಸರಸ್ವತಿ ಸಮ್ಮಾನ್ ಸಿಕ್ಕಿದೆ. ಸಾರಸ್ವತ ಲೋಕ ತುಂಬಿದ್ದಾರೆ. ಅಂದಹಾಗೆ, ನಾನೂ ಸಹ ಸಾಹಿತಿಯೇ. ರಾಜಕಾರಣಕ್ಕೆ ಸಂಬಂಧಿಸಿದಂತೆ 8 ಪುಸ್ತಕಗಳನ್ನು ಬರೆದಿದ್ದೇನೆ ಎಂದು ಸಾ.ರಾ. ಮಹೇಶ್‌ ಅವರಿಗೆ ವಿಶ್ವನಾಥ್ ತಿರುಗೇಟು ಕೊಟ್ಟಿದ್ದಾರೆ.

My nomination to the Legislative Council is legal: Vishwanath

ರಾಜತಾಂತ್ರಿಕ ವಿಷಯಗಳನ್ನು ಒಳಗೊಂಡಂತೆ ರಾಜಕಾರಣದ ಬಗ್ಗೆ ಸಾಕಷ್ಟು ಬರೆದಿದ್ದೇನೆ. ಹೀಗಾಗಿ ಸಾಹಿತ್ಯ ಕೋಟ ಅಡಿ ನನಗೆ ಈ ಸ್ಥಾನ ಸಿಕ್ಕಿದೆ. ಏನೂ ತಿಳಿಯದೆ ನನ್ನನ್ನು ಆಯ್ಕೆ ಮಾಡಕ್ಕೆ ಎಜಿ ದಡ್ಡರೇ? ಸರಕಾರಕ್ಕೆ ತಿಳಿಯುವುದಿಲ್ಲವೇ? ಎಂದು ಆಯ್ಕೆಯನ್ನು ಎಚ್. ವಿಶ್ವನಾಥ್ ಸಮರ್ಥನೆ ಮಾಡಿಕೊಂಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಈಗಾಗಲೇ ಸಚಿವರು ಉತ್ತರ ನೀಡಿದ್ದಾರೆ ಎಂದು ಸಾರಾ ಮಹೇಶ್ ಹೇಳಿದ್ದಾರೆ.

English summary
Former Minister H Vishwanath is being questioned that has been nominated for Legilsative Council under the literary quota. The same question was raised by the former minister S R Mahesh in Mysore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X