Get Updates
Get notified of breaking news, exclusive insights, and must-see stories!

Channapatna bypoll: ಚನ್ನಪಟ್ಟಣ ಉಪಚುನಾವಣೆ; ದೇವೇಗೌಡರ ಪುತ್ರಿ ಅನಸೂಯಾ ಸ್ಪರ್ಧೆ ಬಗ್ಗೆ ಸಿ.ಎನ್.ಮಂಜುನಾಥ್ ಹೇಳಿದ್ದೇನು?

ಬೆಂಗಳೂರು, ಜುಲೈ. 06: ಚನ್ನಪಟ್ಟಣ ಉಪಚುನಾವಣೆಗೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಪುತ್ರಿ ಅನಸೂಯಾ ಮಂಜುನಾಥ್ ಅವರನ್ನು ಪ್ರಾದೇಶಿಕ ಪಕ್ಷದ ಅಭ್ಯರ್ಥಿಯನ್ನಾಗಿ ಪರಿಗಣಿಸಲಾಗಿದೆ ಎಂಬ ಬಗ್ಗೆ ಕೆಲವು ದಿನಗಳಿಂದ ಊಹಾಪೋಹಗಳು ಹರಿದಾಡುತ್ತಲೆ ಇವೆ.

ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ಉಪಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಪಣ ತೊಟ್ಟಿದೆ. ಡಿಕೆ ಬ್ರದಎದಸದ ಚುನಾವಣೆಯನ್ನು ಪ್ರತಿಷ್ಠಯ ಕಣವಾಗಿಸಿಕೊಂಡಿದ್ದಾರೆ. ಅದರಲ್ಲೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿ ಚನ್ನಪಟ್ಟಣ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಇದೆ ಸಮಯದಲ್ಲಿ ದೇವೇಗೌಡರ ಪುತ್ರಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಪತ್ನಿ ಅನಸೂಯಾ ಸ್ಪರ್ಧೆ ಬಗ್ಗೆ ವದಂತಿ ಹರಡಿದೆ.

My Wiife Anasuya will not contest in Channapatna bypoll says MP Dr C N Manjunath

ಪತ್ನಿ ಅನಸೂಯಾ ಸ್ಪರ್ಧೆ ಬಗ್ಗೆ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದೇನು?

ಸ್ನಾತಕೋತ್ತರ ಪದವೀಧರೆಯಾಗಿರುವ ಅನಸೂಯಾ ಅವರಿಗೆ ಟಿಕೆಟ್ ಸಿಕ್ಕರೆ, ಅವರು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ 10 ನೇ ಸದಸ್ಯೆಯಾಗಲಿದ್ದಾರೆ. ಶನಿವಾರ ನಡೆಯಲಿರುವ ಜೆಡಿಎಸ್ ಸಭೆಯಲ್ಲಿ ಅನಸೂಯಾ ಅಭ್ಯರ್ಥಿಯಾಗುವ ಬಗ್ಗೆ ಚರ್ಚೆ ನಡೆಯಲಿದೆ. ಈ ಸಮಾವೇಶದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷರು ಸೇರಿದಂತೆ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಸಂಸದರಾಗಿ ಆಯ್ಕೆಯಾಗಿರುವುದರಿಂದ ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿದೆ. ಜೆಡಿಎಸ್ ಮೂಲಗಳ ಪ್ರಕಾರ, ಚನ್ನಪಟ್ಟಣಕ್ಕೆ ಒಳಪಡುವ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಡಾ ಮಂಜುನಾಥ್ ಅವರ ಪರವಾಗಿ ಅನಸೂಯಾ ಅವರು ಕೆಲಸ ಮಾಡಿದ ಕಾರಣ ಅವರನ್ನು ಅಭ್ಯರ್ಥಿ ಮಾಡಬೇಕು ಎಂಬ ಇತ್ತಡ ಕೇಳಿ ಬರುತ್ತಿದೆ.

ಆದರೆ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ತಮ್ಮ ಪತ್ನಿ ಅನಸೂಯ ಅವರು ನೂರಕ್ಕೆ ನೂರರಷ್ಟು ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಅವರು ಶನಿವಾರ ಹೇಳಿದ್ದಾರೆ. "ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ಚುನಾವಣೆಗೆ ನಿಲ್ಲುವುದಿಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ. ಅವರು ಯಾವುದೇ ಕಾರಣಕ್ಕೂ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

My Wiife Anasuya will not contest in Channapatna bypoll says MP Dr C N Manjunath

ಭಾರಿ ಪೈಪೋಟಿಗೆ ಸಾಕ್ಷಿಯಾಗಲಿದೆ ಚನ್ನಪಟ್ಟಣ!

ಕಾಂಗ್ರೆಸ್‌ನ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚನ್ನಪಟ್ಟಣವನ್ನು ಗೆಲ್ಲಲು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಮ್ಮ ಸಹೋದರ ಡಿ ಕೆ ಸುರೇಶ್ ಅವರ ಸೋಲಿನ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದಾರೆ. ಬಿಜೆಪಿ-ಜೆಡಿ (ಎಸ್) ಒಗ್ಗಟ್ಟನ್ನು ಮುರಿಯಲು ಡಿಕೆ ಶಿವಕುಮಾರ್ ಚನ್ನಪಟ್ಟಣದಲ್ಲಿ ಸಾರ್ವಜನಿಕ ಸಭೆ ನಡೆಸಿದ್ದಾರೆ.

ಇನ್ನು, ಡಿಕೆ ಶಿವಕುಮಾರ್ ಅವರು ಎಂಎಲ್ ಸಿ ಪುಟ್ಟಣ್ಣ ಅವರನ್ನು ಚನ್ನಪಟ್ಟಣದಿಂದ ಕಣಕ್ಕಿಳಿಸಲು ಮುಂದಾಗಿದ್ದಾರೆ ಎನ್ನುತ್ತಿವೆ ಮೂಲಗಳು. ಪುಟ್ಟಣ್ಣ ಚನ್ನಪಟ್ಟಣ ಮೂಲದವರಾಗಿದ್ದು, ಒಕ್ಕಲಿಗ ಸಮುದಾಯದವರು. ಈ ಭಾಗದಲ್ಲಿ ಪ್ರಬಲ ಸಮುದಾಯ ಇದಾಗಿದ್ದು,ಮ ಕೈ ಹಿಡಿಯುತ್ತಾರೆ ಎನ್ನುವ ಭರವಸೆಯಲ್ಲಿದ್ದಾರೆ.

ಅಕಸ್ಮಾತ್ ಜೆಡಿಎಸ್- ಬಿಜೆಪಿ ಜಂಟಿಯಾಗಿ ಅನಸೂಯಾ ಅವರನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್‌ ಕೂಡ ಮಹಿಳೆಯನ್ನೇ ಆಯ್ಕೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ನ ಮೊದಲ ಆಯ್ಕೆ ರಾಜರಾಜೇಶ್ವರಿನಗರ ಕ್ಷೇತ್ರದ ನಾಯಕಿ ಕುಸುಮಾ ಹನುಮಂತರಾಯಪ್ಪ. ಇತ್ತ, ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿಲ್ಲ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಈ ಬಗ್ಗೆ ಕುಟುಂಬದವರಿಗೆ ಸ್ಪಷ್ಟನೆ ನೀಡಿರುವ ಅವರು ರಾಮನಗರದಿಂದ ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+