ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗ ಆ. 29 ರಂದು ಉದ್ಘಾಟನೆ
ಬೆಂಗಳೂರು, ಆಗಸ್ಟ್ 21: ಬಹುನಿರೀಕ್ಷಿತ ಬೆಂಗಳೂರು ದಕ್ಷಿಣ ವಲಯದ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಮೆಟ್ರೋ ಸಂಚಾರವು ಆಗಸ್ಟ್ 29 ರಂದು (ಭಾನುವಾರ) ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆ ನಡೆಯಲಿದೆ.
''ಕೇಂದ್ರ ನಗರ ಅಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮೈಸೂರು ರಸ್ತೆ-ಕೆಂಗೇರಿ ಮಾರ್ಗ ಮೆಟ್ರೋ ಸಂಚಾರವನ್ನು ಆಗಸ್ಟ್ 29 ರಂದು (ಭಾನುವಾರ) ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆ ನಡೆಸಲಿದ್ದಾರೆ,'' ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ತಿಳಿಸಿದ್ದಾರೆ.
ಲೋಕಾರ್ಪಣೆಗೆ ಸಿದ್ದವಾಗುತ್ತಿರುವ ಬೆಂಗಳೂರು ದಕ್ಷಿಣ ವಲಯದ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗವನ್ನು ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಆಗಸ್ಟ್ 11 ಮತ್ತು 12 ರಂದು ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆಯ ಬಳಿಕ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹಾಗೆಯೇ ಗ್ರೀನ್ ಸಿಗ್ನಲ್ ನೀಡುವ ಮೂಲಕ ಯೋಜನೆಯ ಉದ್ಘಾಟನೆಗೆ ರಾಜ್ಯ ಮತ್ತು ಕೇಂದ್ರ ನಾಯಕರೊಂದಿಗೆ ಸಮನ್ವಯ ಸಾಧಿಸುವಂತೆ ಅಧಿಕಾರಿಗಳಿಗೆ ಪ್ರೇರೇಪಣೆ ನೀಡಿದ್ದರು.
ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗವನ್ನು ಮೆಟ್ರೋ ರೈಲು ಸುರಕ್ಷತೆಯ ಪರಶೀಲನೆಯ ಬಳಿಕ ಮೆಟ್ರೋ ಸಂಚಾರಕ್ಕೆ ಅನುಮೋದನೆ ದೊರೆತರೆ ಎರಡು ವಾರಗಳಲ್ಲಿ ಮೆಟ್ರೋ ರೈಲು ಸಂಚಾರವನ್ನು ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಆರಂಭ ಮಾಡಲು ಅಧಿಕಾರಿಗಳು ಸಿದ್ದರಾಗಿದ್ದರು. ಇತ್ತೀಚೆಗೆ ಅನುಮೋದನೆ ದೊರೆತ ಹಿನ್ನೆಲೆ ಈಗ ಮೆಟ್ರೋ ರೈಲು ಸಂಚಾರ ಮಾರ್ಗ ಉದ್ಘಾಟನೆ ದಿನಾಂಕ ನಿಗದಿ ಮಾಡಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್, "ಇಂದು (ಸೋಮವಾರ) ಸಂಜೆ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆ ಆರಂಭಕ್ಕೆ ನಾವು ಷರತ್ತುಬದ್ಧ ಅನುಮೋದನೆಯನ್ನು ಸ್ವೀಕರಿಸಿದ್ದೇವೆ," ಎಂದು ತಿಳಿಸಿದ್ದರು. ಹಾಗೆಯೇ ಮಾಧ್ಯಮಗಳು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭದ ಬಗ್ಗೆ ಪ್ರಶ್ನೆಗಳನ್ನು ಕೇಳಿದಾಗ, "ನಾವು ಕೇಂದ್ರ ಸಚಿವರುಗಳು ಹಾಗೂ ರಾಜ್ಯ ಸಚಿವರುಗಳ ಸಂಪರ್ಕ ಮಾಡುತ್ತೇವೆ. ಎಲ್ಲವೂ ನಾವು ಅಂದುಕೊಂಡತ್ತೆ ನಡೆದರೆ ಸಾಕು," ಎಂದು ಆಶಾವಾದ ವ್ಯಕ್ತಪಡಿಸಿದ್ದರು.
ಇನ್ನು ಈ ಹಿಂದೆ ವರಮಹಾಲಕ್ಷ್ಮಿ ಹಬ್ಬದ ಶುಭ ದಿನದಂದು ಕಾರ್ಯಾಚರಣೆ ಆರಂಭಿಸುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. "ಆದರೆ ಕಡಿಮೆ ಅವಧಿಯಲ್ಲಿ ರಾಜ್ಯ ಮತ್ತು ಕೇಂದ್ರ ನಾಯಕರನ್ನು ಒಗ್ಗೂಡಿಸುವುದು ಕಷ್ಟವಾಯಿತು," ಎಂದು ಮೂಲಗಳು ತಿಳಿಸಿದೆ.
(ಒನ್ ಇಂಡಿಯಾ)
-
IPL ಪ್ರೇಕ್ಷಕರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ನಮ್ಮ ಮೆಟ್ರೋ ಸೇವೆ ವಿಸ್ತರಣೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications