ಸರ್ಕಾರಕ್ಕೆ ಕನ್ನಡದ ನಟಿಯರು ಕಾಣಿಸಿಲ್ಲವೇ?, ಪ್ರತಿಷ್ಠಿತ ಉತ್ಪನ್ನದ ರಾಯಭಾರಿ ತಮ್ಮನಾ ನೇಮಕಕ್ಕೆ ಕೆ.ಸುಧಾಕರ್ ಆಕ್ಷೇಪ
ಬೆಂಗಳೂರು: ಕರ್ನಾಟಕ ರಾಜ್ಯದ ಸುಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ಗೆ ಬ್ರಾಂಡ್ ಅಂಬಾಸಿಡರ್ ನೇಮಿಸಲು ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಾಣಲಿಲ್ಲವೇ? ಎಂದು ಸಂಸದ ಡಾ.ಕೆ.ಸುಧಾಕರ್ ಆಕ್ರೋಶ ಹೊರ ಹಾಕಿದರು. ಈ ಮೂಲಕ ತಮನ್ನಾ ನೇಮಿಸಿದ್ದನ್ನು ಅವರು ಆಕ್ಷೇಪಿಸಿದ್ದಾರೆ.
ಕನ್ನಡಿಗರನ್ನು ಬಿಟ್ಟು ಬಹುಭಾಷಾ ನಟಿ ತಮನ್ನಾರನ್ನು ಮೈಸೂರು ಸ್ಯಾಂಡಲ್ ಸೋಪ್/ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿ ನೇಮಕ ಮಾಡಲಾಗಿದೆ. ಕಳೆದ ವರ್ಷವೇ ಈ ಬಗ್ಗೆ ಘೋಷಿಸಿದಾಗಲೂ ಸಾಕಷ್ಟು ಪರ ವಿರೋಧ ಚರ್ಚೆ ಆಗಿತ್ತು. ಇದೀಗ ಸಚಿವ ಎಂಬಿ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಮಂಗಳವಾರ (ಫೆ.10 ರಂದು) ಮೈಸೂರು ಸ್ಯಾಂಡಲ್ ಸೋಪಿನ ಹೊಸ ರೂಪಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ವೇಳೆಯು ನಟಿಯ ಆಯ್ಕೆಗೆ ವಿರೋಧ ಕೇಳಿ ಬಂದಿದೆ.

ಈ ವಿಚಾರ ಕುರಿತು ಸಂಸದ ಡಾ.ಕೆ.ಸುಧಾಕರ್ ಅವರು ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. 'ನಮ್ಮದೇ ಕನ್ನಡ ನಾಡಿನ ಅನೇಕ ತಾರೆಗಳು ಇದ್ದರ ಪರರಾಜ್ಯದ, ಅನ್ಯಭಾಷೆಯ ಸಿನಿಮಾ ನಟಿಯೊಬ್ಬರನ್ನು ಕೋಟ್ಯಂತರ ರೂಪಾಯಿ ಪೇಮೆಂಟ್ ಕೊಟ್ಟು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ಕನ್ನಡ ವಿರೋಧಿ ಮನಸ್ಥಿತಿಗೆ ಮತ್ತೊಂದು ಸಾಕ್ಷಿ ಎಮದು ಕಿಡಿ ಕಾರಿದರು.
ಕನ್ನಡದ ಜನಪ್ರಿಯ ನಟಿಯರನ್ನು ನೇಮಿಸಬಹುದಿತ್ತು
ಕನ್ನಡ ಸಿನಿ ತಾರೆಯರಾದ ರಮ್ಯಾ, ರಶ್ಮಿಕಾ ಮಂದಣ್ಣ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ಡೆ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕ ನಟಿಯರಿದ್ದು. ಇವತ್ತು ಅವರು ಅನೇಕ ಭಾಷೆಗಳ ಚಿತ್ರರಂಗದಲ್ಲಿ ಬೇಡಿಕೆಯುಳ್ಳ ಜನಪ್ರಿಯ ನಟಿಯರಾಗಿ ಕನ್ನಡದ ಕೀರ್ತಿ ಪತಾಕೆಯನ್ನು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ. ಅವರನ್ನು ರಾಯಭಾರಿಯಾಗಿ ನೇಮಿಸಬಹುದಿತ್ತು ಎಂದು ಹೇಳಿದ್ದಾರೆ.
ನಮ್ಮದೇ ಕನ್ನಡ ನಾಡಿನ ನಟಿಯರನ್ನು ಬಿಟ್ಟು ಬೇರೆಯವರಿಗೆ ಮಣೆ ಹಾಕುವ ಕಾಂಗ್ರೆಸ್ ಪಕ್ಷದ ಧೋರಣೆ ಕನ್ನಡ ನಾಡಿನ ಪ್ರತಿಭೆಗಳಿಗೆ ಮಾಡಿರುವ ಅಮಪಾನ. ಅಷ್ಟು ಮಾತ್ರವಲ್ಲ, ಮೈಸೂರು ಸ್ಯಾಂಡಲ್ ಸೋಪಿನ ಅಸ್ಮಿತೆಗೂ ಮಾಡಿರುವ ಘೋರ ಅಪಮಾನ. ಈ ಕನ್ನಡ ವಿರೋಧಿ, ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಸರ್ಕಾರ ನಡೆ, ನಿರ್ಧಾರವನ್ನು ಖಂಡಿಸಿದ್ದಾರೆ.
ಅಭಿವೃದ್ಧಿ ಕಡೆಗೆ ಗಮನ ಕೊಡಿ: ನೆಟ್ಟಿಗರು
ತಮನ್ನಾ ಆಯ್ಕೆ ಕುರಿತು ಸಂಸದರ ಈ ಪೋಸ್ಟ್ ನೋಡಿದ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಸಂಸದರ ಆಕ್ಷೇಪಣೆಯನ್ನು ಬೆಂಬಲಿಸಿದ್ದಾರೆ. ಮತ್ತೆ ಕೆಲವರು ಇದು ಚರ್ಚೆಯಾಗಬೇಕಾದ ವಿಷಯವೇ ಎಂದು ಪ್ರಶ್ನಿಸಿದ್ದಾರೆ. 'ಚಿಕ್ಕಬಳ್ಳಾಪುರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ನೀವು ತೆಲುಗು ನಟರನ್ನು ಕರೆತಂದಿದ್ದು ನೆನಪಿದೆ. ಈಗ ಇದ್ದಕ್ಕಿದ್ದಂತೆ ಕನ್ನಡ ನಟರ ಮೇಲಿನ ಕಾಳಜಿ ಬದಲಾಗಿದೆ. ಅದರ ಬೂಟಾಟಿಕೆ... ದಯವಿಟ್ಟು ಮೊದಲು ಅಭಿವೃದ್ಧಿಯ ಬಗ್ಗೆ ಗಮನಹರಿಸಿ' ಎಂದು ಮತ್ತೊಬ್ಬರು ಒತ್ತಾಯಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications