ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ವೇಳಾಪಟ್ಟಿ
ಬೆಂಗಳೂರು, ನವೆಂಬರ್ 2: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.
ದೇಶದ ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇದು ಬೆಂಗಳೂರಿನ ಮೂಲಕ ಚೆನ್ನೈ ಮತ್ತು ಮೈಸೂರು ನಡುವೆ ಓಡಲಿದೆ. ನವೆಂಬರ್ 5 ರಂದು ಈ ಸೆಮಿ ಹೈ ಸ್ಪೀಡ್ ರೈಲು ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಿಂದ ಪ್ರಯೋಗಗಳಿಗಾಗಿ ಹೊರಡಲಿದೆ.
ಹೈದರಾಬಾದ್; ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸ್ಥಿತಿಗತಿ ಏನು?
ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರತದ ಮೊದಲ ಸೆಮಿ ಹೈಸ್ಪೀಡ್ ರೈಲು. ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ. ಇದು ಉತ್ತಮ ವೇಗವರ್ಧನೆ ಮತ್ತು ನಿಧಾನಗತಿಯಿಂದ ಹೆಚ್ಚಿನ ವೇಗವನ್ನು ಸಾಧಿಸಬಹುದು. ಅಲ್ಲದೆ ಇದು ಪ್ರಯಾಣದ ಸಮಯವನ್ನು 25% ರಿಂದ 45% ರಷ್ಟು ಕಡಿಮೆ ಮಾಡುತ್ತದೆ. ಈ ರೈಲು ಒಂದೇ ಬಾರಿಗೆ 0-100 ಕಿಮೀ ವೇಗವನ್ನು 52 ಸೆಕೆಂಡುಗಳಲ್ಲಿ ತಲುಪುತ್ತದೆ.
ಎಲ್ಲಾ ವಂದೇ ಭಾರತ್ ಕೋಚ್‌ಗಳು ಸ್ವಯಂಚಾಲಿತ ಬಾಗಿಲುಗಳನ್ನು ಹೊಂದಿವೆ. ಜಿಪಿಎಸ್ ಆಧಾರಿತ ಆಡಿಯೋ, ದೃಶ್ಯ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಮನರಂಜನಾ ಉದ್ದೇಶಗಳಿಗಾಗಿ ಆನ್-ಬೋರ್ಡ್ ಹಾಟ್‌ಸ್ಪಾಟ್ ವೈಫೈ ಮತ್ತು ಅತ್ಯಂತ ಆರಾಮದಾಯಕ ಆಸನ ಹಾಗೂ ಎಕ್ಸಿಕ್ಯೂಟಿವ್ ಕ್ಲಾಸ್‌ನಲ್ಲಿ ತಿರುಗುವ ಕುರ್ಚಿಗಳನ್ನು ಸಹ ಹೊಂದಿದೆ.
ರೈಲಿನಲ್ಲಿರುವ ಶೌಚಾಲಯಗಳು ಜೈವಿಕ ನಿರ್ವಾತ ಮಾದರಿಯವು. ದಿವ್ಯಾಂಗ್ ಸ್ನೇಹಿ ವಾಶ್ ರೂಮ್‌ಗಳು ಮತ್ತು ಬ್ರೈಲ್ ಅಕ್ಷರಗಳಲ್ಲಿ ಸೀಟ್ ಸಂಖ್ಯೆಗಳೊಂದಿಗೆ ಸೀಟ್ ಹ್ಯಾಂಡಲ್ ಅನ್ನು ಸಹ ರೈಲಿನಲ್ಲಿ ಒದಗಿಸಲಾಗಿದೆ. ಪ್ರತಿ ಕೋಚ್‌ನಲ್ಲಿ ಬಿಸಿ ಊಟ, ಬಿಸಿ ಮತ್ತು ತಂಪು ಪಾನೀಯಗಳನ್ನು ಪೂರೈಸಲು ಪ್ಯಾಂಟ್ರಿ ವ್ಯವಸ್ಥೆ ಸಹ ಇರುತ್ತದೆ.
ರೈಲು ಸಂಖ್ಯೆ 20607 ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಮೈಸೂರು ಜಂಕ್ಷನ್ ಬೆಂಗಳೂರು ಸಿಟಿ ಜಂಕ್ಷನ್‌ನಲ್ಲಿ ಕೇವಲ 1 ನಿಲುಗಡೆಯನ್ನು ಹೊಂದಿರುತ್ತದೆ. ರೈಲು ಚೆನ್ನೈ ಮತ್ತು ಮೈಸೂರು ನಡುವೆ ಒಟ್ಟು 497 ಕಿಮೀ ದೂರವನ್ನು ಕ್ರಮಿಸುತ್ತದೆ ಮತ್ತು ಪ್ರಯಾಣವನ್ನು ಪೂರ್ಣಗೊಳಿಸಲು 6 ಗಂಟೆ 40 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಗಂಟೆಗೆ ಸರಾಸರಿ 74 ಕಿಮೀ ವೇಗದಲ್ಲಿ ಇದು ಓಡುತ್ತದೆ.

ಮಧ್ಯಾಹ್ನ 12:30ಕ್ಕೆ ಮೈಸೂರು ತಲುಪುತ್ತದೆ
ಇದು ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಬೆಳಗ್ಗೆ 5:50ಕ್ಕೆ ಹೊರಟು ಬೆಳಗ್ಗೆ 10:25ಕ್ಕೆ ಬೆಂಗಳೂರು ಸಿಟಿ ಜಂಕ್ಷನ್ (ಮೆಜೆಸ್ಟಿಕ್) ತಲುಪಲಿದೆ. ಬೆಂಗಳೂರಿನಿಂದ ಬೆಳಗ್ಗೆ 10:30ಕ್ಕೆ ಹೊರಟು ಮಧ್ಯಾಹ್ನ 12:30ಕ್ಕೆ ಅಂತಿಮ ತಾಣವಾದ ಮೈಸೂರನ್ನು ತಲುಪಲಿದೆ. ಈ ರೈಲು ಸುಮಾರು 497 ಕಿ.ಮೀ ದೂರವನ್ನು 6 ಗಂಟೆ 40 ನಿಮಿಷಗಳಲ್ಲಿ ಕ್ರಮಿಸಲಿದೆ.
ನ. 11ಕ್ಕೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪಿಎಂ ಮೋದಿ ಚಾಲನೆ

ಮೈಸೂರಿಂದ ಮಧ್ಯಾಹ್ನ 1:05 ಕ್ಕೆ ಪ್ರಯಾಣ ಆರಂಭ
ವಂದೇ ಭಾರತ್ ಎಕ್ಸ್‌ಪ್ರೆಸ್ ಭಾನುವಾರ, ಸೋಮವಾರ, ಮಂಗಳವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ವಾರದಲ್ಲಿ ಆರು ದಿನಗಳು ಚಲಿಸುತ್ತದೆ. ಹಿಂದಿರುಗುವ ಪ್ರಯಾಣದಲ್ಲಿ ಮೈಸೂರು ಜಂಕ್ಷನ್‌ನಿಂದ ಮಧ್ಯಾಹ್ನ 1:05 ಕ್ಕೆ ಹೊರಟು 2:55 ಕ್ಕೆ ಬೆಂಗಳೂರು ಸಿಟಿ ಜಂಕ್ಷನ್‌ಗೆ ತಲುಪಲಿದೆ. ಇದು ಬೆಂಗಳೂರು ಸಿಟಿ ಜಂಕ್ಷನ್‌ನಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ರಾತ್ರಿ 7:35 ಕ್ಕೆ ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.

ಕೇವಲ ಒಂದು ಕಡೆ ಮಾತ್ರ ನಿಲ್ಲುತ್ತದೆ
ರೈಲು 16 ಬೋಗಿಗಳನ್ನು ಹೊಂದಿರುತ್ತದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಚೆನ್ನೈ-ಬೆಂಗಳೂರು-ಮೈಸೂರು ಈ ಮಾರ್ಗದಲ್ಲಿ ಚಲಿಸುತ್ತಾ ಚೆನ್ನೈ ಸೆಂಟ್ರಲ್, ಬೆಂಗಳೂರು ಸಿಟಿ ಮತ್ತು ಮೈಸೂರು ಜಂಕ್ಷನ್ ಇದರ ನಡುವೆ ಪೆರಂಬೂರ್, ವೆಪ್ಪಂಪಟ್ಟು, ಕಟ್ಪಾಡಿ ಜಂಕ್ಷನ್, ಗುಡುಪಲ್ಲಿ ಮತ್ತು ಮಾಲೂರು ದಾಟಿ ಬರಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಚೆನ್ನೈ-ಬೆಂಗಳೂರು-ಮೈಸೂರು ಚೆನ್ನೈ ಸೆಂಟ್ರಲ್ ಮತ್ತು ಮೈಸೂರು ನಡುವೆ ಕೇವಲ 1 ನಿಲುಗಡೆಯನ್ನು ಹೊಂದಿರುತ್ತದೆ.

ಚೆನ್ನೈ ಸೆಂಟ್ರಲ್ ರೈಲು ಸಂಖ್ಯೆ 20607
ವಂದೇ ಭಾರತ್ ಎಕ್ಸ್‌ಪ್ರೆಸ್ ಚೆನ್ನೈ ಸೆಂಟ್ರಲ್‌ನಿಂದ ಮೈಸೂರು ಜಂಕ್ಷನ್ ರೈಲು ಸಂಖ್ಯೆ 20608 ಆಗಿದೆ. ಇದು ಮೈಸೂರು ಜಂಕ್ಷನ್‌ನಿಂದ ಚೆನ್ನೈ ಸೆಂಟ್ರಲ್ ರೈಲು ಸಂಖ್ಯೆ 20607 ಆಗಿರುತ್ತದೆ. ವಂದೇ ಭಾರತ್ ಸೆಮಿ ಹೈ ಸ್ಪೀಡ್ ರೈಲು ಇದು ಸ್ವಯಂ ಚಾಲಿತ ಎಂಜಿನ್ ರೈಲು. ಇದು ಪ್ರತ್ಯೇಕ ಎಂಜಿನ್ ಹೊಂದಿಲ್ಲ. ಇದು ಸ್ವಯಂಚಾಲಿತ ಬಾಗಿಲುಗಳು ಮತ್ತು ಹವಾನಿಯಂತ್ರಿತ ಚೇರ್ ಕಾರ್ ಕೋಚ್‌ಗಳನ್ನು ಹೊಂದಿರುತ್ತದೆ ಮತ್ತು 180 ಡಿಗ್ರಿಗಳವರೆಗೆ ತಿರುಗಬಲ್ಲ ರಿವಾಲ್ವಿಂಗ್ ಕುರ್ಚಿಯನ್ನು ಹೊಂದಿದೆ.