Mysuru dasara: 5 ಗ್ಯಾರಂಟಿಗಳ ಸ್ತಬ್ಧಚಿತ್ರ, ವಸ್ತು ಪ್ರದರ್ಶನ, ಏರ್ ಶೋ: ಅದ್ಧೂರಿ ದಸರಾ ಆಚರಣೆಗೆ ಸಿದ್ದು ಸರ್ಕಾರ ತೀರ್ಮಾನ
ಬೆಂಗಳೂರು, ಜುಲೈ 31: ಈ ಬಾರಿಯ ನಾಡಹಬ್ಬ ಮೈಸೂರು ದಸರಾಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಹಾಗೆಯೇ ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸುವ ಕುರಿತು ಉನ್ನತ ಮಟ್ಟದ ಸಭೆಯನ್ನು ಮಾಡಲಾಯಿತು. ಹಾಗಾದರ ಸಭೆಯಲ್ಲಿ ಯಾವೆಲ್ಲ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಅಕ್ಟೋಬರ್ 15ರ ಬೆಳಗ್ಗೆ 10.30ಕ್ಕೆ ಸಲ್ಲುವ ಮಹೂರ್ತದಲ್ಲಿ ದಸರಾ ಹಬ್ಬದ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.

ಎಲ್ಲಿಯವರೆಗೂ ದೀಪಾಲಂಕಾರ?
ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲಾಗುತ್ತದೆ. ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
5 ಗ್ಯಾರಂಟಿಗಳನ್ನು ಬಿಂಬಿಸುವ ಸ್ತಬ್ಧಚಿತ್ರ ಪ್ರದರ್ಶನ
ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು. ಹಾಗೆಯೇ ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದೆ. ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು. ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.
ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ ನೀಡಿ
ಎಲ್ಲಾ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು. ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು. ಹಾಗೆಯೇ ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಅವರಿಗೆ ಯಾವುದೇ ತೊಂದರೆಗಳಾಗದಂತೆ ಕ್ರಮವಹಿಸಬೇಕೆಂದು ತಿಳಿಸಿದರು.
ಹಾಗೆಯೇ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆಯಿದೆ. ಅಲ್ಲದೆ ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳುವ ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.
ಸಭೆಯಲ್ಲಿನ ನಿರ್ಧರಿಸಲಾದ ಪ್ರಮುಖ ಅಂಶಗಳು
1. ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು.
2. ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.
3. ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು.
4. ದಸರಾದಲ್ಲಿ ಅನಗತ್ಯ ಖರ್ಚು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಭೈರತಿ ಸುರೇಶ್, ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications