2026 ದಸರಾ ಉದ್ಘಾಟನೆಗೆ ಕೊಪ್ಪಳ ಗವಿಸಿದ್ಧೇಶ್ವರ ಶ್ರೀಗಳು ಒಪ್ಪಿಲ್ಲ! ಇದು ನಿಜವಾ?: ಸಚಿವ ತಂಗಡಗಿ ಹೇಳಿದ್ದೇನು?

ಬೆಂಗಳೂರು: ನಾಡಹಬ್ಬ ಮೈಸೂರು ಅದ್ಧೂರಿ ದಸರಾ 2026 ಆಚರಣೆಗೆ ಸರ್ಕಾರ ಸಿದ್ಧತೆ ನಡೆಸಿದೆ. ಇತ್ತೀಚೆಗೆ ನಡೆದ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾ್ ಅವರ ಅಧಿಕೃತ ಘೋಷಣೆಯ ನಂತರವೂ ದಸರಾ ಉದ್ಘಾಟನೆ ಆಹ್ವಾನವನ್ನು ಗವಿಸಿದ್ಧೇಶ್ವರ ಶ್ರೀಗಳು ತಿರಸ್ಕರಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ವಿಚಾರವಾಗಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಇದಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ವಿಶ್ವವಿಖ್ಯಾತ ಮೈಸೂರು ದಸರಾವನ್ನು ಕೊಪ್ಪಳದ ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸುವುದು ನಿಶ್ಚಿತವಾಗಿ. ಈ ಕುರಿತು ಯಾವುದೇ ಅನುಮಾನ ಅಥವಾ ಗೊಂದಲಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವದಂತಿ, ಸುಳ್ಳು ಸುದ್ದಿಗಳನ್ನು ನಂಬದಂತೆ ಅವರು ಮನವಿ ಮಾಡಿದ್ದಾರೆ..

Mysuru Dasara 2026

ಗವಿಸಿದ್ದೇಶ್ವರ ಶ್ರೀಗಳು ದಸರಾ ಉದ್ಘಾಟನೆಗೆ ಒಪ್ಪಿಲ್ಲ, ಸರ್ಕಾರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಮಾಹಿತಿ ಎಂದು ಅವರು ಪುನರುಚ್ಚರಿಸಿದರು.

ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಅವರು ಗವಿಸಿದ್ದೇಶ್ವರ ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಬಳಿಕವೇ, ಈ ಪ್ರಸಕ್ತ ವರ್ಷ 2026ರ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಅಧಿಕೃತವಾಗಿ ಘೋಷಿಸಿದ್ದಾರೆ. ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿಗಳೇ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಿದರು.

ಸೆಪ್ಟೆಂಬರ್ 28ಕ್ಕೆ ಕೊಪ್ಪಳದ ಗವಿಮಠಕ್ಕೆ ಭೇಟಿ

ಮುಖ್ಯಮಂತ್ರಿಗಳ ಅಧಿಕೃತ ಘೋಷಣೆಯ ನಂತರವೂ ಶ್ರೀಗಳು ಆಹ್ವಾನ ತಿರಸ್ಕರಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಕೆಲವರು ಹರಡಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಸರ್ಕಾರವು ಈಗಾಗಲೇ ಗವಿಮಠದೊಂದಿಗೆ ಸಂಪರ್ಕ ಸಾಧಿಸಿದೆ. ಸೆಪ್ಟೆಂಬರ್ 28ರಂದು ಸೋಮವಾರ ಖುದ್ದು ಗವಿಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀಗಳನ್ನು ಅಧಿಕೃತವಾಗಿ ಆಹ್ವಾನಿಸಲು ದಿನಾಂಕ ನಿಗದಿಯಾಗಿದೆ. ಹೀಗಾಗಿ, ಶ್ರೀಗಳ ಒಪ್ಪಿಗೆ ಇಲ್ಲ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವರು ವಿವರಿಸಿದರು.

ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಾನೂನು ಕ್ರಮ

ನಾಡಹಬ್ಬ ಮೈಸೂರು ದಸರಾ ಕುರಿತು ಸುಳ್ಳು ಹಾಗೂ ಆಧಾರರಹಿತ ಮಾಹಿತಿ ಹರಡಿ ಜನರಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇನ್ನೂ ಮೈಸೂರು ದಸರಾ ಉದ್ಘಾಟನೆ ಸೇರಿದಂತೆ ಯಾವುದೇ ಅಧಿಕೃತ ಮಾಹಿತಿಗಾಗಿ ಸರ್ಕಾರದ ಅಧಿಕೃತ ಪ್ರಕಟಣೆಗಳನ್ನೇ ಪರಿಗಣಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಸೋಮವಾರ ಸಚಿವರು ಹಾಗೂ ಸರ್ಕಾರದ ಪ್ರತಿನಿಧಿಗಳು ಇತರ ನಾಯಕರು ಕೊಪ್ಪಳದ ಗವಿಸಿದ್ಧೇಶ್ವರ ಮಠಕ್ಕೆ ತೆರಳಿ ಅಧಿಕೃತ ಆಹ್ವಾನ ನೀಡಲಿದ್ದಾರೆ. ಉದ್ಘಾಟನೆಗೆ ವಿನಂತಿಸಿಕೊಳ್ಳಲಿದ್ದಾರೆ. ಅಂದು ಮತ್ತಷ್ಟು ಅಪ್ಟೇಟ್ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+