Mysuru Sandal Soap: ಈ ಉತ್ಪನ್ನಕ್ಕೆ ಮತ್ತೆ ಸಿಗಲಿದೆ ಬ್ರ್ಯಾಂಡ್ ಮೌಲ್ಯ
ಬೆಂಗಳೂರು, ಜಲೈ 05: ಬಹುಕಾಲದಿಂದಲೂ ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾಗಿರುವ ಮೈಸೂರು ಸ್ಯಾಂಡಲ್ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತಂದುಕೊಟ್ಟು, ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿ ಮಾರ್ಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತಿಳಿಸಿದರು.
#MysoreSandal is a Jewel of Karnataka!
— M B Patil (@MBPatil) July 4, 2023
As a brand, we are less than 1/3rd of the reach of Santoor and less than 1/6th of the reach of Lifebuoy at the country level.
Export is meagre 3% of the revenue.
Brand Confined to South India alone and not the market leader in the home… pic.twitter.com/haSugntw0b
ಮೈಸೂರು ಸ್ಯಾಂಡಲ್ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತರಲು ಅದಕ್ಕಾಗಿ ಉದ್ಯಮ ಪರಿಣಿತರಿಂದ ಸಲಹೆಗಳನ್ನು ಮುಕ್ತವಾಗಿ ಆಹ್ವಾನಿಸಲಾಗಿದೆ. ಸ್ಥಳಿಯ ನಿರ್ಮಿತ ಈ ಉತ್ಪನ್ನವನ್ನು ಮಾರುಕಟ್ಟೆಗಳಲ್ಲಿ ಮತ್ತೆ ಬುಟಿದೇಳುವಂತೆ ಮಾಡಲು ಆಸಕ್ತರು [email protected]ಗೆ ತಮ್ಮ ಸಲಹೆಗಳನ್ನು ಕಳಿಸಬಹುದು ಎಂದು ಅವರು ಹೇಳಿದರು.

ಈ ಕುರಿತು ಇತ್ತೀಚೆಗೆ ಟ್ವೀಟ್ ಮಾಡಿದ್ದ ಸಚಿವ ಎಂ.ಬಿ.ಪಾಟೀಲ್ ಅವರು, ಮೈಸೂರು ಸ್ಯಾಂಡಲ್ ಸೋಪ್, ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆರಂಭಿಸಿದ ಉತ್ಪನ್ನವಾಗಿದೆ. ಅದು ರಾಜ್ಯದ ಮಕುಟಮಣಿಯ ಅನರ್ಘ್ಯ ರತ್ನವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ ಆಶಯಕ್ಕೆ ತಕ್ಕಂತೆ ಈ ಹೆಜ್ಜೆ ಇಡಲು ಸರ್ಕಾರ ತೀರ್ಮಾನಿಸಿದೆ. ತಜ್ಞರು, ಉದ್ಯಮಿಗಳು ಈ ನಿಟ್ಟಿನಲ್ಲಿ ಸೂಕ್ತ ಸಲಹೆಗಳನ್ನು ಕೊಟ್ಟು, ಸರ್ಕಾರದ ಪ್ರಯತ್ನಕ್ಕೆ ಕೈಗೂಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಉತ್ಕೃಷ್ಟ ಉತ್ಪನ್ನದ ಬಳಕೆಯಲ್ಲಿ ಸೋತಿದ್ದೇವೆ
ಮೈಸೂರು ಸ್ಯಾಂಡಲ್ ಸೋಪ್ ರಾಜ್ಯದ ಸಾಬೂನು ಮಾರುಕಟ್ಟೆಯಲ್ಲೂ ಸಿಂಹಪಾಲು ಹೊಂದಿಲ್ಲ. ಹಾಗೆಯೇ, ಈ ಬ್ರ್ಯಾಂಡ್ ಉತ್ಪನ್ನವು ದಕ್ಷಿಣ ಭಾರತಕ್ಕಷ್ಟೇ ಸೀಮಿತವಾಗಿದೆ. ಮಾರುಕಟ್ಟೆಯಲ್ಲಿ ಉಳಿದ ಹೆಸರಿನ ಸಾಬೂನುಗಳು ಅತ್ಯಧಿಕ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಜೊತೆಗೆ ಒಟ್ಟು ವಹಿವಾಟಿನಲ್ಲಿ ಶೇಕಡ 3ರಷ್ಟು ಮಾತ್ರ ರಫ್ತು ವಹಿವಾಟಿನ ಮೂಲಕ ಬರುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಸ್ಪರ್ಧಾತ್ಮಕ ಮಾರುಕಟ್ಟೆಯ ಯುಗವಾಗಿದೆ. ನಮ್ಮ ಬಳಿ ಮೈಸೂರು ಸ್ಯಾಂಡಲ್ ಸೋಪ್‌ನಂತಹ ಉತ್ಕೃಷ್ಟ ಉತ್ಪನ್ನವಿದ್ದೂ ನಾವು ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸೋತಿದ್ದೇವೆ. ಈ ನಿರಾಶಾದಾಯಕ ಪರಿಸ್ಥಿತಿಯನ್ನು ನಿವಾರಿಸಲು ಕರ್ನಾಟಕ ರಾಜ್ಯ ಸರ್ಕಾರ ಉತ್ಸುಕವಾಗಿದೆ.
ಒಟ್ಟಿನಲ್ಲಿ ರಾಜ್ಯದ ಈ ಹೆಮ್ಮೆಯ ಉತ್ಪನ್ನಕ್ಕೆ ಮರುಜೀವ ತುಂಬಿ, ಮಾರುಕಟ್ಟೆಯನ್ನು ಸೃಷ್ಟಿಸಲು ಹಲವು ಉಪಕ್ರಮಗಳನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಬಿಎಂಟಿಸಿ ಬಸ್ ಭವಿಷ್ಯದಲ್ಲಿ ಇವಿ ಬಸ್ ಬಸ್
ಬೆಂಗಳೂರಿನ ಬಿಎಂಟಿಸಿ ಡೀಸೆಲ್ ಬಸ್ಸುಗಳನ್ನು ವಿದ್ಯುತ್ ಚಾಲಿತ ವಾಹನಗಳನ್ನಾಗಿ ಪರಿವರ್ತಿಸಲು ಹಾಗೂ ಮರುಬಳಕೆಗೆ ಅಣಿಗೊಳಿಸಲು ತೈವಾನ್‌ನ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿವೆ. ಈ ಸಂಬಂಧ ಕರ್ನಾಟಕದಲ್ಲಿ ಕಂಪನಿಗಳು ಬಂಡವಾಳ ಹೂಡಿಕೆ ಮುಂದಾಗಿವೆ. ಪರಿಸರಸ್ನೇಹಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಕುರಿತು ಸಾರಿಗೆ ಇಲಾಖೆಯ ಜತೆ ಮಾತನಾಡಿ ಸಂಪರ್ಕ ಸೇತುವಾಗಿ ಕೆಲಸ ಮಾಡಲಾಗುವುದು ಎಂದು ಕಳೆದ ವಾರ ಎಂಬಿ ಪಾಟೀಲರು ತಿಳಿಸಿದ್ದರು.
ಕಳೆದ ಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ್ದ ತೈವಾನ್ ಇಂಡಿಯಾ ಬಿಝಿನೆಸ್ ಅಸೋಸಿಯೇಷನ್‌ನ (ಟಿಐಬಿಎ) ಕಂಪನಿ ಸದಸ್ಯರ ನಿಯೋಗವು 50ಕ್ಕೂ ಹೆಚ್ಚು ಹೂಡಿಕೆದಾರರ ಜತೆ ಮಾತುಕತೆ ನಡೆಸಿದ್ದಾರೆ. ಈ ಕುರಿತು ನಿಯೋಗಕ್ಕೆ ಎಂಬಿ ಪಾಟೀಲರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದ ತಿಳಿದು ಬಂದಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications