ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಸಂತೋಷ್
ಬೆಂಗಳೂರು, ಸೆಪ್ಟೆಂಬರ್ 01 : ಬಿ.ಎಸ್.ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಎನ್.ಆರ್.ಸಂತೋಷ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ ಆಪ್ತ ಕಾರ್ಯದರ್ಶಿ ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ಎನ್.ಆರ್.ಸಂತೋಷ್ ಆರೋಪಿ. ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿರುವ ಅವರು, ಪೊಲೀಸ್ ವಿಚಾರಣೆ ಎದುರಿಸುತ್ತಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಎರಡು ದಿನಗಳ ಕಾಲ ಸಂತೋಷ್ ವಿಚಾರಣೆ ನಡೆಸಿದ್ದರು. ಪ್ರಕರಣದಲ್ಲಿ ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಂತೋಷ್ ಅವರು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಮನವಿ ಮಾಡಿದರು.
ಈಗಾಗಲೇ ಸಂತೋಷ್ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ಆರೋಪಿಸಿದ್ದಾರೆ. ಜಾಮೀನು ರದ್ಧತಿ ಕೋರಿ 62ನೇ ಸೆಷನ್ಸ್ ನ್ಯಾಯಲಕ್ಕೆ ಮನವಿ ಮಾಡಿದ್ದಾರೆ.
ನಿರೀಕ್ಷಣಾ ಜಾಮೀನು ನೀಡುವಾಗ ತನಿಖೆಗೆ ಸಹಕಾರ ನೀಡಬೇಕು ಎಂದು ಷರತ್ತು ವಿಧಿಸಲಾಗಿತ್ತು. ಆದರೆ, ಅದನ್ನು ಅವರು ಪಾಲಿಸುತ್ತಿಲ್ಲ ಎಂದು ಪೊಲೀಸರು ಹೇಳಿದ್ದು, ಜಾಮೀನು ರದ್ಧತಿ ಕೋರಿದ್ದಾರೆ.












Click it and Unblock the Notifications