ನಗರದ ವಿವಿಧೆಡೆ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆ
ಬೆಂಗಳೂರು ಜೂ. 27: ನಗರದ ವಿವಿಧೆಡೆ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಮೆರವಣಿಗೆ, ಡೊಳ್ಳು ಕುಣಿತ, ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಕೇಂಪೇಗೌಡ ಜಯಂತ್ಯೋತ್ಸವ ಅಂಗವಾಗಿ ಜ್ಯೋತಿ ಮತ್ತು ಜಾನಪದ ಕಲಾತಂಡಗಳ ಮೆರವಣಿಗೆ ನಡೆಸಲಾಯಿತು. ನಾಲ್ಕು ಗಡಿ ಗೋಪುರಗಳ ಬಳಿ ಆರಂಭವಾದ ಮೆರವಣಿಗೆ ಒಕ್ಕಲಿಗರ ಸಂಘ ಆವರಣ ತಲುಪಿತು.
ಕೆಂಪೇಗೌಡರ ಅಶ್ವಾರೂಢ ಪುತ್ಥಳಿಗೆ ಪೂಜೆ ನೆರವೇರಿಸುವ ಮೂಲಕ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಬಣ್ಣ ಬಣ್ಣದ ಧಿರಿಸು ಧರಿಸಿದ್ದ ವಿವಿಧ ಜಾನಪದ ಕಲಾತಂಡದ ಕಲಾವಿದರು ಮೆರವಣಿಗೆ ಉದ್ದಕ್ಕೂ ಹೆಜ್ಜೆ ಹಾಕಿದರು.
ನಗರ ಮಿನರ್ವ ವೃತ್ತ, ಲಾಲ್ ಬಾಗ್ ಗೇಟ್ (ಮಾವಳ್ಳಿ) ಮತ್ತು ದ್ವಾರ, ನ್ಯಾಷನಲ್ ಕಾಲೇಜು ವೃತ್ತ ಮೂಲಕ ಸಾಗಿತು. ಒಕ್ಕಲಿಗರ ಸಂಘದ ಜತೆಗೆ ವಿವಿಧ ಸಂಘಟನೆಗಳ ಸದಸ್ಯರು ಪಾಲ್ಗೊಂಡು ನಾಡ ಧ್ವಜ ಪ್ರದರ್ಶಿಸಿ ಮೆರವಣಿಗೆಗೆ ಕಳೆ ತಂದರು. ಕೆಂಪೇಗೌಡರ ವೇಷಧಾರಿಯೊಬ್ಬರು ಕುದುರೆ ಮೇಲೆ ಕೂತು ಸಾಗಿದ ದೃಶ್ಯ ವಿಶೇಷವಾಗಿತ್ತು.

ಕೆಂಪೇಗೌಡರು ಸದಾ ಸ್ಮರಣೀಯರು: ಸಚಿವ ಕೆ.ಗೋಪಾಲಯ್ಯ
ರಾಜಧಾನಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಸದಾಕಾಲ ಸ್ಮರಿಸುವಂತೆ ಕೊಡುಗೆ ನೀಡಿದವರು. ಅವರ ಸಾಧನೆ ಅಜರಾಮರ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಬಣ್ಣಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿನ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರು ನೀಡಿದ ಕೊಡುಗೆ ರಾಜ್ಯದ ಯಾವ ಪ್ರಜೆಯೂ ಮರೆಯುವಂತಿಲ್ಲ. ಅಂದಿನ ಅವರ ಶ್ರಮ ಇಂದು ಹೆಮ್ಮರವಾಗಿ ಬೆಳೆದು ಬೆಂಗಳೂರು ವಿಶ್ವ ಭೂಪಟದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದೆ" ಎಂದರು.

ಕೆಂಪೇಗೌಡರ ಪುತ್ಥಳಿಗೆ ಮೋದಿ ಅನಾವರಣ?
"ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪುತ್ಥಳಿ ನಿರ್ಮಾಣವಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಪುತ್ಥಳಿ ಲೋಕಾರ್ಪಣೆಗೊಳಿಸಲಿದ್ದಾರೆ. ಕ್ಷೇತ್ರದಲ್ಲಿ ಉದ್ಯಾನಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಹತ್ತಾರು ಉದ್ಯಾನಗಳು ಹಸಿರುಮಯವಾಗಿ ಕಂಗೊಳಿಸುತ್ತಿವೆ. ಜನರು ಗಮನಕ್ಕೆ ತಂದರೆ ಹಿಂದುಳಿದ ಉದ್ಯಾನಗಳ ಅಭಿವೃದ್ಧಿಗೂ ಕ್ರಮ ವಹಿಸಲಾಗುವುದು" ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ, ಎಸ್. ಹರೀಶ್, ರೈಲ್ವೆ ನಾರಾಯಣ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.

ಯಲಹಂಕದಲ್ಲಿ ಕಂಚಿನ ಪ್ರತಿಮೆ ಅನಾವರಣ
ಕೆಂಪೇಗೌಡರ 513ನೇ ಜಯಂತಿ ಪ್ರಯುಕ್ತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮತ್ತು ಶಾಸಕ ಎಸ್. ಆರ್. ವಿಶ್ವನಾಥ ಯಲಹಂಕ ತಾಲೂಕಿನಲ್ಲಿರುವ ತಮ್ಮ ಕಚೇರಿ ಮುಂದೆ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಅನಾವರಣಗೊಳಿಸಿದರು. ನಂತರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಜಯಂತಿ ಆಚರಿಸಿದರು. ಬಿಬಿಎಂಪಿ ಜಂಟಿ ಆಯುಕ್ತೆ ಪೂರ್ಣಿಮಾ, ಎಇಇ ಸುಧಾಕರ್ ರೆಡ್ಡಿ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಜಯ ಕರ್ನಾಟಕ ಜನಪರ ವೇದಿಕೆಯಿಂದ ಮಾಲಾರ್ಪಣೆ
ಬಿಬಿಎಂಪಿ ಕೇಂದ್ರ ಕಚೇರಿ ಮುಂದಿನ ಕೆಂಪೇಗೌಡರ ಪ್ರತಿಮೆಗೆ ಜಯಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷರು ಮತ್ತು ಪರಿಸರವಾದಿಗಳು ಬಿ.ಗುಣರಂಜನ್ ಅವರು ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ವೇದಿಕೆ ರಾಜ್ಯಾಧ್ಯಕ್ಷ, ರಾಜ್ಯ ಪದಾಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.
ಶಾಸಕ ಎಂ.ಕೃಷ್ಣಪ್ಪ, ಕರವೇ ಶಿವರಾಮೇಗೌಡ, ನಿರ್ಮಾಪಕ ಸಾ.ರಾ.ಗೋವಿಂದು, ಮಾಜಿ ಶಾಸಕ ರಾಮು ಸೇರಿದಂತೆ ಮೊದಲಾದವರು ವಿಜಯನಗರಲ್ಲಿರುವ ಕೆಂಪೇಗೌಡರ ಪ್ರತಿಮೆ ಮುಂದೆ ಜಯಂತಿ ಆಚರಿಸಿದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications